Bangalore-Mangalore National Highway: ರಾ.ಹೆದ್ದಾರಿ ಅಂಚಿನ 13 ಮನೆಗಳು ಕುಸಿವ ಭೀತಿ


Team Udayavani, Nov 7, 2023, 3:21 PM IST

Bangalore-Mangalore National Highway: ರಾ.ಹೆದ್ದಾರಿ ಅಂಚಿನ 13 ಮನೆಗಳು ಕುಸಿವ ಭೀತಿ

ಆಲೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ (ಹಾಸನದಿಂದ ಮಾರನಹಳ್ಳಿವರೆಗೆ) ಕಾಮಗಾರಿ ನಡೆಯುತ್ತಿದ್ದು, ತಾಲೂಕಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹೆದ್ದಾರಿ ಅಂಚಿನಲ್ಲಿರುವ ಭೈರಾಪುರ ಗ್ರಾಮದ ಸುಮಾರು 13 ಮನೆಗಳು ಕುಸಿಯುವ ಹಂತ ತಲುಪಿದ್ದು, ನಿವಾಸಿಗಳು ಭಯದಿಂದ ಬದುಕು ಸಾಗಿಸುವಂತಾಗಿದೆ.

ಸ್ಥಳೀಯ ನಿವಾಸಿಗಳಾದ ಟೈಲರ್‌ ವೆಂಕಟೇಶ್‌, ಮಂಜುನಾಥ, ಸರಸ್ವತಿ ಕೃಷ್ಣೇಗೌಡ, ಲಕ್ಷ್ಮಮ್ಮ ರುದ್ರೇ ಗೌಡ, ಆನಂದಚಾರ್‌, ಪರಮೇಶ್‌, ಮಂಜುನಾಥ, ಎಂ.ಬಾಲಕೃಷ್ಣ, ಅಪ್ಪಾಜಿಗೌಡ, ಶ್ರೀನಿವಾಸಕ, ಬಿ.ಕೆ. ಗಿರೀಶ್‌, ಶಶಿಕಲಾ ಎಂ.ಎಲ್.ಧೀರೇಶ್‌ ಅವರಿಗೆ ಸೇರಿದ ಮನೆಗಳು ಕುಸಿಯುವ ಹಂತಕ್ಕೆ ಸಿಲುಕಿದ್ದು, ನಿವಾಸಿಗಳು ಮನೆ ಮುಂಭಾಗದಲ್ಲಿ ತಿರುಗಾಡಲು ಸಹ ಜಾಗವಿಲ್ಲವಾಗಿದೆ. ‌

22 ಅಡಿ ಆಳದಲ್ಲಿ ರಸ್ತೆ: ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡುವ ಮೊದಲು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮಾನಾಂತರದಲ್ಲಿ ಇಕ್ಕೆಲಗಳಲ್ಲಿ ಅಂಗಡಿ ಮತ್ತು ವಾಸದ ಮನೆಗಳಿದ್ದವು. ಈಗ ಸುಮಾರು 22 ಅಡಿ ಆಳದಲ್ಲಿ ರಸ್ತೆ ಹಾದು ಹೋಗಿರುವುದರಿಂದ ರಸ್ತೆಗೆ ಮಣ್ಣು ಕುಸಿಯುವುದು ಸಾಮಾನ್ಯ. ಆದರೆ, ಸುಮಾರು ಎಂಟು ವರ್ಷಗಳಿಂದ ಕಾಮಗಾರಿ ಪೂರ್ಣಗೊಳಿಸದೇ, ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮಾನವನ ಆಸ್ತಿ ಮತ್ತು ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈವರೆಗೂ ವಾಡಿಕೆ ಮಳೆಯಾಗದ್ದರಿಂದ ಮಣ್ಣು ಕುಸಿತ ಕಂಡಿರಲಿಲ್ಲ. ಭಾನುವಾರ ರಾತ್ರಿ ಮಳೆ ಎಡಬಿಡದೆ ಸುರಿದಿದ್ದರಿಂದ ಮಣ್ಣು ಕುಸಿಯಲಾರಂಭಿಸಿದೆ. ಮತ್ತೂಮ್ಮೆ ಭಾರೀ ಮಳೆಯಾದರೆ ಪ್ರತಿ ಅಂಗಡಿ, ಮನೆಗಳು ನೆಲಸಮವಾಗಲಿವೆ ಎಂಬ ಭೀತಿ ನಿವಾಸಿಗಳಲ್ಲಿ ಶುರುವಾಗಿದೆ.

ಗುತ್ತಿಗೆದಾರರು, ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕಾಮಗಾರಿಯಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿ¨ªಾರೆ. ಹಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು ಮತ್ತು ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹಿಂಗಾರು ಮಳೆಯಾಗುವ ಮುನ್ಸೂಚನೆ ಇದೆ, ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಹೆದ್ದಾರಿ ಅಂಚಿನಲ್ಲಿರುವ ಮನೆಗಳ ಸಮೀಪದವರಿಗೆ ಮಣ್ಣು ಕುಸಿಯುತ್ತಿದೆ. ಬೈರಾಪುರ ಜನರು ಆತಂಕದಲ್ಲಿ ಜೀವನ ದೂಡುತ್ತಿದ್ದಾರೆ. ಗುತ್ತಿಗೆದಾರರು ಮತ್ತು ಇಲಾಖೆ ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಎಚ್ಚರಿಕೆ ನೀಡಿದ್ದಾರೆ. ನಾಲ್ಕೈದು ವರ್ಷಗಳಿಂದ ಒಂದಲ್ಲೊಂದು ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸುಮಾರು ನಾಲ್ಕೈದು ವರ್ಷಗಳಿಂದ ಗುತ್ತಿಗೆದಾರರು ಹಾಗೂ ಇಲಾಖೆ ಅಧಿಕಾರಿಗಳಿಂದ ಒಂದಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ.

ನಮ್ಮ ಬದುಕನ್ನೇ ಕಿತ್ತುಕೊಂಡಿದ್ದಾರೆ. ವರ್ಷದಲ್ಲಿ ಮಳೆ ಕಡಿಮೆ ಇರುವುದರಿಂದ ನಮ್ಮ ಮನೆಗಳು ಉಳಿದಿವೆ. ಕಳೆದ ವರ್ಷದ ರೀತಿ ಮಳೆ ಬಂದಿದ್ದರೆ ಕುಟುಂಬ ಬೀದಿಯಲ್ಲಿ ನಿಲ್ಲಬೇಕಾಗಿತ್ತು. ಕಾಮಗಾರಿ ಮುಗಿಯುವವರೆಗೂ ಮಳೆ ಬರದಿದ್ದರೆ ಸಾಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ ಎಂದು ಅಂಗಡಿ ಮಾಲೀಕ ವೆಂಕಟೇಗೌಡ ನೋವು ತೋಡಿಕೊಂಡರು.

ನಾಲ್ಕು ವರ್ಷಗಳ ಹಿಂದೆ ಮುಖ್ಯ ರಸ್ತೆ ಪಕ್ಕದಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ ಮಾಡಿ ಸಿಮೆಂಟ್‌ ಸ್ಲ್ಯಾಬ್‌ ಅಳವಡಿಸಲಾಗಿತ್ತು. ಸ್ಲಾéಬ್‌ ಅಳವಡಿಕೆಯಲ್ಲಿ ತಾಂತ್ರಿಕ ತೊಂದರೆ ಎದುರಾಗಿ ನಂತರದಲ್ಲಿ ಮೂರು ಬಾರಿ ಸ್ಲ್ಯಾಬ್‌ ಅಳವಡಿಸಿದರೂ ತಾಂತ್ರಿಕ ತೊಂದರೆ ನಿವಾರಣೆಯಾಗಲಿಲ್ಲ. ಈಗ ಮನೆಗಳ ತಳಪಾಯದವರೆಗೂ ಮಣ್ಣು ಕುಸಿದಿದೆ. -ಕೃಷ್ಣೇಗೌಡ, ಸ್ಥಳೀಯ ನಿವಾಸಿ, ಭೈರಾಪುರ

ಮೊದಲು ಮಣ್ಣು ಹೊರ ತೆಗೆದು ಸ್ಲ್ಯಾಬ್‌ ಅಳವಡಿಸಿ ನಂತರ ಹೊರ ಭಾಗದಿಂದ ಮಣ್ಣು ತುಂಬಬೇಕು. ಈಗಾಗಲೇ ಕಾಮಗಾರಿ ಪ್ರಾರಂಭಿಸಲಾಗಿದೆ. ಒಂದು ತಿಂಗಳಲ್ಲಿ ಕಾಮಗಾರಿ ಸಂಪೂರ್ಣ ಮುಗಿಸುತ್ತೇವೆ. ಜನರಲ್ಲಿ ಭಯ, ಆತಂಕ ಬೇಡ. -ಶೇಖರ್‌, ಉಪ ವ್ಯವಸ್ಥಾಪಕ ನಿರ್ದೇಶಕರು, ರಾ.ಹೆ. ಪ್ರಾಧಿಕಾರ

-ಟಿ.ಕೆ.ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.