ಹಾಸನ : ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರ ದಾರುಣ ಸಾವು
Team Udayavani, May 24, 2017, 10:16 AM IST
ಹಾಸನ: ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ ,ಗುಡುಗು ಮಿಂಚು ಸಹಿತ ಭರ್ಜರಿ ಮಳೆ ಸುರಿದ್ದಿದ್ದು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗಾಳಿ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಶಂಕರನ ಹಳ್ಳಿ ಎಂಬಲ್ಲಿ ನಡೆದಿದೆ.
ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಗೋಪನಹಳ್ಳಿ ಗ್ರಾಮದ ರವಿ(56), ಪ್ರಸಾದ್(23), ಕಿಟ್ಟಿ(59) ಅವರಿಗೆ ರಸ್ತೆಯಲ್ಲಿ ನೇತಾಡುತ್ತಿದ್ದ ಹೈಟೆನÒನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಶವಗಳನ್ನು ಸ್ಥಳದಲ್ಲೇ ಇಟ್ಟು ಸ್ಥಳೀಯರು ಸೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು ಅಧಿಕಾರಿಗಳು ಸ್ಥಳಕ್ಕಾಮಿಸುವವರೆಗೆ ಶವಗಳನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹಾಸನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
UV Fusion: ಚಿಂತೆಯನ್ನು ಚಿಂದಿ ಮಾಡಿ ಒಮ್ಮೆ ನೀ ನಗು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.