3ಲಕ್ಷ ಮತಗಳ ಅಂತರದ ಗೆಲುವು: ಪ್ರಜ್ವಲ್ ವಿಶ್ವಾಸ
ಚುನಾವಣೆಯಲ್ಲಿ ಶೇ.90 ರಷ್ಟು ಕಾಂಗ್ರೆಸ್ಸಿಗರಿಂದ ಸಿಕ್ಕಿದೆ ಬೆಂಬಲ
Team Udayavani, Apr 23, 2019, 2:59 PM IST
ಹಾಸನ: ಚುನಾವಣೆಯಲ್ಲಿ ನಾನು ಗೆಲ್ಲುವ ಖಚಿತ ವಿಶ್ವಾಸವಿದೆ. 2 ರಿಂದ 3 ಲಕ್ಷ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸುವೆ. ಜೆಡಿಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ಶೇ.90 ರಷ್ಟು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೂ ನನ್ನ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಶಾಸಕರು, ಮಾಜಿ ಶಾಸಕರು ನನ್ನ ತಂದೆಯ ಸ್ಥಾನದಲ್ಲಿ ನಿಂತು ನನ್ನ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಿ, ಮತ ಹಾಕಿಸಿದ್ದಾರೆ. ನನ್ನ ಪರ ಕೆಲಸ ಮಾಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ವಿಶೇಷವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರ ನಿವಾಸಗಳಿಗೆ ಒಂದೆರೆಡು ದಿನಗಳಲ್ಲಿ ಭೇಟಿ ನೀಡಿ ಧನ್ಯವಾದ ಹೇಳುವೆ ಎಂದು ತಿಳಿಸಿದರು.
ಜಿಲ್ಲಾ ರಾಜಕಾರಣಕ್ಕೆ ಹೊಸ ಮುಖವಾಗಿರುವ ನಾನು ಎಲ್ಲಾ ಗ್ರಾಮಗಳಿಗೂ ಭೇಟಿ ಕೊಡಬೇಕೆಂದು ಜನರು ಬಯಸುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ಭೇಟಿ ನೀಡಲು ಸಾಧ್ಯವಾಗದಿರುವ ಹಳ್ಳಿಗಳಿಗೆ ಭೇಟಿ ನೀಡುವೆ ಎಂದರು.
ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ: ನಾನು ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ. ಹಾಸನ ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ. ಜಿಲ್ಲೆಯಲ್ಲಿ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣನವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಕೆಲವು ಹಳ್ಳಿಗಳಲ್ಲಿ ಕೆಲವು ಸಮಸ್ಯೆಗಳಿವೆ. ಮುಂದಿನ 5 ವರ್ಷದಲ್ಲಿ ಏನೇನು ಮಾಡಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸಿ ಕಾರ್ಯೋನ್ಮುಖ ನಾಗುವೆ ಎಂದ ಅವರು ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಎಲ್ಲಾ ಸಮುದಾ ಯದವರ ಪ್ರತ್ಯೇಕ ಸಭೆಗಳನ್ನು ನಡೆಸಿ ಅಹವಾಲು ಆಲಿಸುವೆ. ಚುನಾವಣೆಯ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಅನುಷ್ಠಾನಗಳೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಲ್ಲೂ ಸಭೆ ನಡೆಸಿ ಕುಂದು- ಕೊರತೆಯ ಮಾಹಿತಿ ಪಡೆಯುವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.
ಎಚ್‌ಡಿಸಿಸಿ ಉಪಾಧ್ಯಕ್ಷ ಎಚ್.ವಿ.ಗೀರೀಶ್, ನಿರ್ದೇಶಕ ಬಿದರಿಕೆರೆ ಜಯರಾಂ, ನಗರಸಭೆ ಮಾಜಿ ಸದಸ್ಯ ಎಂ.ಕೆ.ಕಮಲ್ಕುಮಾರ್, ಹಾಸನ ನಗರಸಭೆ ಮಾಜಿ ಉಪಾಧ್ಯಕ್ಷ ಇರ್ಷಾದ್ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಅವಿವೇಕಿಯ ಆರೋಪ: ಮಂಜುಗೆ ಟಾಂಗ್
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ದೂರಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ ಅವರು, ಪ್ರಮಾಣ ಪತ್ರದಲ್ಲಿ ಸಮರ್ಪಕ ಮಾಹಿತಿ ನೀಡಿದ್ದೇನೆ. ಯಾವುದೋ ಒಂದು ಕಂಪನಿಯಲ್ಲಿ ಹೊಂದಿ ರುವ ಷೇರುಗಳ ಬಗ್ಗೆ ಪ್ರಮಾಣ ಪತ್ರದಲ್ಲಿ ಮಾಹಿತಿ ನೀಡಿಲ್ಲ ಎಂಬುದರಲ್ಲಿ ಹುರುಳಿಲ್ಲ. ನಾನು ಆ ಕಂಪನಿಯ ಪಾಲುದಾರಿಕೆಯಿಂದ ಹೊರ ಬಂದಿರುವ ಬಗ್ಗೆ ನಾಮಪತ್ರ ಸಲ್ಲಿಕೆಗೆ ಕೆಲ ದಿನಗಳ ಹಿಂದೆಯೇ ಎನ್‌ಒಸಿ ಪಡೆದಿದ್ದೇನೆ. ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ನನ್ನ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಹುಡುಕಲಾಗದೆ ಈಗ ಪ್ರಮಾಣ ಪತ್ರದಲ್ಲಿ ದೋಷವಿದೆ ಎಂದು ನನ್ನ ಎದುರಾಳಿಗಳು ಆರೋಪಿಸುತ್ತಿದ್ದಾರೆ. ಅವರು ನ್ಯಾಯಾಲಯಕ್ಕೆ ಹೋಗಿ ಪ್ರಶ್ನಿಸಲಿ. ನಾನು ನ್ಯಾಯಾಲಯದಲ್ಲಿ ದಾಖಲೆ ಸಹಿತ ಹೋರಾಟ ಮಾಡುವೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುವೆ ಎಂದ ಅವರು, ಅವಿವೇಕಿಗಳ ಆರೋಪಗಳಿಗೆಲ್ಲಾ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.