ಹಾಸನ ಜಿಲ್ಲೆಯಲ್ಲಿ 5 ಪಾಸಿಟಿವ್
Team Udayavani, May 13, 2020, 10:22 AM IST
ಹಾಸನ: ಜಿಲ್ಲೆಯಲ್ಲಿ ಮಂಗಳವಾರ 5 ಪಾಸಿಟಿವ್ ಪ್ರಕರಣಗಳು ವರದಿಯಾ ಗಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದವ ರನ್ನು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿಟ್ಟು ಆನಂತರ ಸ್ವಾಬ್ ಪರೀಕ್ಷೆ ನಡೆಸ ಬೇಕು.
ಆದರೆ ಹಾಸನ ಜಿಲ್ಲಾಡಳಿತವು ಹೊರ ರಾಜ್ಯದಿಂದ ಬಂದವರನ್ನು ತಕ್ಷಣವೇ ಪರೀಕ್ಷೆ ನಡೆಸುತ್ತಿದೆ. ಹಾಗಾಗಿ ಮೇ 10 ರಂದು ಮುಂಬೈನಿಂದ ಬಂದ ಚನ್ನರಾಯಪಟ್ಟಣ ತಾಲೂಕಿನ ಮತಿ ಘಟ್ಟ ಸಮೀಪದ ಮದನೆ ಗ್ರಾಮಕ್ಕೆ ಒಂದು ಬಾಡಿಗೆ ಕಾರಿನಲ್ಲಿ ಬರುತ್ತಿದ್ದ ಒಂದು ಕುಟುಂಬದವರನ್ನು ಅರಸೀಕೆರೆ ಚೆಕ್‌ಪೋಸ್ಟ್‌ನಿಂದಲೇ ನೇರವಾಗಿ ಕ್ವಾರಂ ಟೈನ್ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.
ಅವರ ಸ್ವಾಬ್ ಪರೀಕ್ಷೆಗೊಳಪಡಿಸಿದಾಗ ಪತಿ (36ವರ್ಷ), ಪತ್ನಿ 27 (ವರ್ಷ) 7 ವರ್ಷ ಹಾಗೂ 4 ವರ್ಷದ ಇಬ್ಬರು ಮಕ್ಕಳಲ್ಲೂ ಕೊರೊನಾ ಪಾಸಿಟಿವ್ ಬಂದಿದೆ. ಇನೋವಾ ಕಾರಿನಲ್ಲಿ ಬಂದ ಇಬ್ಬರಲ್ಲಿ ಒಬ್ಬರು ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಗೆ ಹೋಗಿದ್ದಾರೆ. 45 ವರ್ಷದ ಇನ್ನೊಬ್ಬರನ್ನು ಚನ್ನರಾಯ ಪಟ್ಟಣದ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಅವರಲ್ಲೂ ಪಾಸಿಟಿವ್ ಬಂದಿದೆ.
ಕಾರು ಚಾಲಕರು ವಾಪಸ್ ಮುಂಬೈಗೆ ಹೋಗಿ ದ್ದಾರೆ. ಪಾಸಿಟಿವ್ ಬಂದಿರುವವ ಪ್ರಾಥಮಿಕ ಹಾಗೂ ದ್ವಿತೀಯ ಹಂತದಸಂಪರ್ಕಿತರ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು. ಹೊರ ರಾಜ್ಯಗಳಿಂದ ಬರುವವರನ್ನು ನಿರ್ಬಂಧಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು. ಎಸ್ಪಿ ಆರ್.ಶ್ರೀನಿವಾಸಗೌಡ, ಜಿಪಂ ಸಿಇಒ ಪರಮೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.