ಬೇಲೂರು: ರಸ್ತೆ ಬದಿ ಕಸ ಹಾಕುತ್ತಿದ್ದ ವ್ಯಕ್ತಿಗೆ 5 ಸಾವಿರ ರೂ. ದಂಡ
Team Udayavani, Nov 5, 2023, 4:54 PM IST
ಬೇಲೂರು: ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸ ಹಾಕದಂತೆ ಅರಿವು ಮೂಡಿಸಿ ನಾಮಫಲಕ ಅಳವಡಿಸಿದರೂ ರಸ್ತೆ ಬದಿಯಲ್ಲಿ ಕಸ ತಂದು ಸುರಿಯುತ್ತಿರುವುದುಮ ನಿಂತಿಲ್ಲ. ಈ ನಡುವೆ ಮನೆಯ ಕಸವನ್ನೆಲ್ಲ ವ್ಯಕ್ತಿಯೊಬ್ಬರು ಆಟೋದಲ್ಲಿ ತಂದು ಸುರಿಯುತ್ತಿರುವಾಗಲೇ ಆಟೋ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿ ಎಚ್ಚರಿಸಿ ಕಳುಹಿಸಿದ್ದೇವೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೆಳಿದರು.
ಪಟ್ಟಣದ ಮೂಡಿಗೆರೆ ರಸ್ತೆಯ ವಿದ್ಯಾ ವಿಕಾಸ ಪದವಿ ಪೂರ್ವ ಕಾಲೇಜು ಸಮೀಪ ಪುರಸಭೆಯಿಂದ ಸ್ವಚ್ಛಗೊಳಿಸಿದ್ದ ಸ್ಥಳಕ್ಕೆ ವ್ಯಕ್ತಿಯೊಬ್ಬರು ಆಟೋದಲ್ಲಿ ಮನೆ ಕಸ ತಂದು ಸುರಿಯುತಿದ್ದ ಸಂದರ್ಭ ಆಟೋ ಮತ್ತು ವ್ಯಕ್ತಿಯನ್ನು ಸಿಬ್ಬಂದಿಯೊಂದಿಗೆ ವಶಕ್ಕೆ ಪಡೆದು ಮಾತನಾಡಿ, ಪ್ರವಾಸಿ ತಾಣ ಬೇಲೂರು ಪಟ್ಟಣವನ್ನು ಅಂದವಾಗಿಡುವ ನಿಟ್ಟಿನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿದ್ದೇವೆ. ಅಲ್ಲದೇ ಪ್ರತಿನಿತ್ಯ ನಗರವನ್ನು ಸ್ವಚ್ಛಗೊಳಿಸುವುದಲ್ಲದೆ, ಕಸ ಸಂಗ್ರಹಣೆಗಾಗಿ ಆಟೋ ಟಿಪ್ಪರ್‌ಗಳನ್ನು ಎರಡು ಸಮಯದಲ್ಲಿ ಬಿಟ್ಟಿದ್ದೇವೆ.ಆದರೂ ಸಾರ್ವಜನಿಕರು ಮಾತ್ರ ಸ್ವಚ್ಛಗೊಳಿಸಿದ ಸ್ಥಳಕ್ಕೆ ಪುನಃ ಕಸ ತಂದು ಹಾಕುತಿದ್ದಾರೆ ಎಂದು ದೂರಿದರು.
ಐದು ಸಾವಿರ ರೂ. ದಂಡ: ಕಸ ಹಾಕುವವರನ್ನು ಪತ್ತೆ ಹಚ್ಚಲೇಬೇಕೆಂದು ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಆದರೆ, ಪಟ್ಟಣದ ವ್ಯಕ್ತಿಯೊಬ್ಬರು ಮನೆ ಸ್ವಚ್ಛಗೊಳಿಸಿದ ಕಸವನ್ನೆಲ್ಲ ಆಟೋದಲ್ಲಿ ತಂದು ಸುರಿಯುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರು ನೋಡಿ ದೂರವಾಣಿ ಮೂಲಕ ಕರೆ ಮಾಡಿದ್ದರಿಂದ ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು ನೋಡಿದಾಗ ಆಟೋ ಪೂರ್ತಿ ಮನೆ ಕಸವನ್ನು ಸುರಿಯುತಿದ್ದರು. ತಕ್ಷಣವೇ ಕಸ ತಂದಿದ್ದ ಆಟೋ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ಪುನಃ ಕಸ ಹಾಕದಂತೆ 5000 ರೂ. ದಂಡ ಧಿಸಿ ಎಚ್ಚರಿಸಿ ಕಳುಹಿಸಿದ್ದೇವೆ ಎಂದು ತಿಳಿಸಿದರು.
ಆರೋಗ್ಯಾಧಿಕಾರಿ ಲೋಹಿತ್, ಸಿಬ್ಬಂದಿ ಹರೀಶ್, ವಿಶ್ವ ಸೇರಿದಂತೆ ಇತರರಿದ್ದರು.
ಮುಂದಿನ ದಿನಗಳಲ್ಲಿ ಇದೇ ರೀತಿಯ ಘಟನೆಗಳು ಕಂಡು ಬಂದರೆ ಅಂತವರ ವಿರುದ್ಧ ಮುಲಾಜಿಲ್ಲದೆ ಹೆಚ್ಚಿನ ದಂಡದೊಂದಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ನಗರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಪುರಸಭೆಯೊಂದಿಗೆ ಕೈಜೋಡಿಸಬೇಕು.– ತೀರ್ಥಕುಮಾರಿ, ಪುರಸಭೆ ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.