ಹಾಸನದಲ್ಲಿ 6 ಮಂದಿಗೆ ಸೋಂಕು ದೃಢ
Team Udayavani, Jul 11, 2020, 6:52 AM IST
ಹಾಸನ: ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಪ್ರತಿದಿನವೂ ಸಾವು ಮತ್ತು ಎರಡಂಕಿಯಲ್ಲಿ ಏರುಮುಖ ಕಾಣುತ್ತಿತ್ತು. ಆದರೆ, ಶುಕ್ರವಾರ ಕೇವಲ 6 ಪ್ರಕರಣಗಳಷ್ಟೇ ವರದಿ ಯಾಗಿದ್ದು, ಸಾವು ಸಂಭವಿಸದಿರು ವುದು ಸ್ವಲ್ಪ ಸಮಾಧಾನ ತಂದಿದೆ. ಪ್ರತಿದಿನ 15 ರಿಂದ 50 ರವರೆಗೂ ಕಳೆದ 2 ವಾರಗಳಿಂದ ಕೋವಿಡ್ 19 ಪ್ರಕರಣ ವರದಿ ಯಾಗುತ್ತಿದ್ದರಿಂದ ಜಿಲ್ಲೆಯ ಜನ ಆತಂಕ ದಲ್ಲಿದ್ದರು. ಅರ್ಧ ದಿನ ಸ್ವಯಂ ಪ್ರೇರಿತ ಲಾಕ್‌ಡೌನ್‌ಗೂ ಮುಂದಾಗಿದ್ದರು.
ಆದರೆ ಶುಕ್ರವಾರದ 6 ಕೋವಿಡ್ 19 ವರದಿ ಸಮಾಧಾನದ ಸುದ್ದಿಯಾಗಿದೆ. ವರದಿಯಾದ 6 ಪ್ರಕರಳಗಳಲ್ಲಿ 3 ಅರಸೀಕೆರೆ ತಾಲೂಕಿಗೆ ಸಂಬಂಧಿ ಸಿದ್ದರೆ, ಚನ್ನರಾಯಪಟ್ಟಣ ತಾಲೂ ಕಿನ ಇಬ್ಬರಿಗೆ ಸೋಂಕು ದೃಢ ಪಟ್ಟಿದೆ. ಹಾಸನ ತಾಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಅರಸೀಕೆರೆ ತಾಲೂಕಿನ 3 ಪ್ರಕರಣಗಳ ಪೈಕಿ ಒಬ್ಬರು ಬೆಂಗಳೂರು ಬಿಎಂಟಿಸಿ ಬಸ್‌ನ ಪ್ರಯಾಣದ ಹಿನ್ನೆಲೆ ಹೊಂದಿದ್ದರೆ, ಇನ್ನೊಬ್ಬರು ಕಂಟೈನ್ಮೆಂಟ್ ವಲಯದವರು.
ಚನ್ನರಾಯಪಟ್ಟಣ ತಾಲೂಕಿನ ಒಬ್ಬ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದ್ದರೆ ಇನ್ನುಳಿದವರಿಗೆ ಸೋಂಕಿನವರ ಸಂಪರ್ಕದಿಂದ ಕೋವಿಡ್ 19 ಹರಡಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 621 ಮಂದಿಗೆ ಕೋವಿಡ್ 19 ಸೋಂಕು ತಗುಲಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. 390 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 7 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದು ವರಿದೆ. 216 ಮಂದಿ ಸಾಮಾನ್ಯ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.