ಪೆಟ್ಟಾಗಿದ್ದ ಗೋವಿನ ಕಾಲಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಕಾಲಿಗೆ ಪೆಟ್ಟಾದಾಗ ಮೂರು ರೀತಿಯ ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗುತ್ತದೆ.

Team Udayavani, Jun 18, 2022, 4:44 PM IST

ಪೆಟ್ಟಾಗಿದ್ದ ಗೋವಿನ ಕಾಲಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಅರಸೀಕೆರೆ: ರಸ್ತೆ ಅಪಘಾತದಲ್ಲಿ ಕಾಲಿಗೆ ಪೆಟ್ಟಾಗಿ ನೋವಿನಿಂದ ನರಳುತ್ತಿದ್ದ ಹಸುವಿಗೆ ಪಶು ವೈದ್ಯ ಸಮೂಹವೇ ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಕಾಲಿಗೆ ರಾಡ್‌ ಅಳವಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ನಗರದ ಮೈಸೂರು ರಸ್ತೆಯಲ್ಲಿನ ಕಸ್ತೂರ ಬಾ ಗಾಂಧಿ ಗೋ ಶಾಲೆಯಲ್ಲಿ ರಸ್ತೆ ಅಪಘಾತದಲ್ಲಿ ಕಾಲಿಗೆ ಪೆಟ್ಟಾಗಿ ವಾರದಿಂದ ನೋವಿನಲ್ಲಿದ್ದ ಹಸುವಿಗೆ ರಾಜ್ಯದ ಪಶು ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಸರಿಪಡಿಸುವ ಕಾರ್ಯವನ್ನು ಮಾಡಿರುವುದು ಗೋ ಪ್ರೇಮಿಗಳ ಪ್ರಸಂಶೆಗೆ ಕಾರಣವಾಗಿದೆ.

ಮೂರು ಬಗೆಯ ಚಿಕಿತ್ಸೆ: ಈ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ನೇತೃತ್ವ ವಹಿಸಿದ್ದ ವಿಜ್ಞಾನಿ ಹಾಗೂ ಹಿರಿಯ ವೈದ್ಯರಾದ ಡಾ. ಹರಿಪ್ರಸಾದ್‌ ಹೈತಾಳ್‌ ಅವರು ಮಾತನಾಡಿ, ರಾಜ್ಯ ಸೇರಿದಂತೆ ಅಂತಾರಾಜ್ಯಗಳಲ್ಲಿ ಪಶುಗಳು ಅಪಘಾತದಿಂದ ಕಾಲಿಗೆ ಪೆಟ್ಟಾದಾಗ ಅದನ್ನು ಉಳಿಸುವ ನಿಟ್ಟಿನಲ್ಲಿ ಹಲವು ಶಸ್ತ್ರ ಚಿಕಿತ್ಸೆಗಳನ್ನು ಮಾಡಿ ಕಾಲನ್ನು ಶಾಶ್ವತವಾಗಿ ಉಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇಲ್ಲಿ ರಾಜ್ಯದ 30ಕ್ಕೂ ಹೆಚ್ಚಿನ ಪಶು ವೈದ್ಯರು ಆಗಮಿಸಿದ್ದಾರೆ.

ಹಸುಗಳು 200 ಕೆ.ಜಿ.ಗೂ ಹೆಚ್ಚು ತೂಕ ಹೊಂದಿದ್ದು ಅವುಗಳ ಕಾಲಿಗೆ ಪೆಟ್ಟಾದಾಗ ಮೂರು ರೀತಿಯ ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗುತ್ತದೆ. ಅದರಲ್ಲಿ ಫೈಬರ್‌ ಕ್ಯಾಸ್ಟ್‌, ಎಪಾಕ್ಷಿ ಫಿನ್ನಿಂಗ್‌, ಸರ್ಕ್ನೂಲರ್‌ ಫಿಕ್ಸೇಟರ್‌ ರೀತಿಯಲ್ಲಿ ಇರುತ್ತದೆ ಎಂದು ಮಾಹಿತಿ ನೀಡಿದರು.

ಚಿಕಿತ್ಸಾ ವೆಚ್ಚ: ಹಲವು ಸಂಶೋಧನೆಗಳ ಪ್ರಕಾರ ಸರ್ಕ್ನೂಲರ್‌ ಫಿಕ್ಸೇಟರ್‌ ಚಿಕಿತ್ಸೆ ಸಂದರ್ಭದಲ್ಲಿ ಹಸು ಗಳಿಗೆ ಅರವಳಿಕೆ ಮದ್ದನ್ನು ನೀಡಿ ಕಾಲಿಗೆ ರಿಂಗ್ಸ್‌ನ ಮೂಲಕ ಕಾಲಿಗೆ ಜೋಡಣೆ ಮಾಡಲಾಗು ತ್ತದೆ. ನಂತರ 90 ದಿನಗಳವರೆಗೆ ನೋವಿನ ಇಂಜೆಕ್ಷನ್‌ ಹಾಗೂ ಪೆಟ್ಟಾದ ಜಾಗಕ್ಕೆ ಬ್ಯಾಂಡೆಡ್‌ ಮಾಡಿ ಚಿಕಿತ್ಸೆ ನೀಡುವ ಮೂಲಕ ಕಾಲು ಸರಿಹೋಗುವಂತೆ ಮಾಡಬಹುದು. ಇದಕ್ಕೆ ಸುಮಾ ರು 10 ಸಾವಿರದವರೆಗೆ ವೆಚ್ಚವಾಗಲಿದೆ. ಉಳಿದಂತೆ ಫೈಬರ್‌ ಕ್ಯಾಸ್ಟ್‌, ಎಪಾಕ್ಷಿ ಫಿನ್ನಿಂಗ್‌ ಚಿಕಿತ್ಸೆ ಯು 1 ಸಾವಿರದಿಂದ ಒಂದುವರೆ ಸಾವಿರದವರೆಗೆ ವೆಚ್ಚವಾಗಲಿದೆ ಎಂದು ತಿಳಿಸಿದರು.

ಗೋವಿನ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಡಾ. ಮಂಜುನಾಥ್‌ ಎಸ್‌.ಪಿ., ಪ್ರಮೋದ್‌ ಜೆ.ಕೆ., ಡಾ. ಬಾಳಪ್ಪ, ಡಾ.ಲಿಖೀತ್‌, ಡಾ.ವಿಶ್ವನಾಥ್‌, ಡಾ.ಅಮಿತ್‌, ಡಾ.ಚೇತನ್‌. ಡಾ.ಶ್ರೀಕಂಠೇಶ್ವರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.