ಜಲ ಮೂಲ ಸಂರಕ್ಷಣೆಗೆ ಕ್ರಮ: ರೂಪಾ
Team Udayavani, Mar 17, 2020, 3:00 AM IST
ಅರಸೀಕೆರೆ: ಜಲಸಾಕ್ಷರತೆ, ಜಲಸಂರಕ್ಷಣೆ ಆಂದೋಲನದ ಮೂಲಕ ಜಲ ಮೂಲಗಳಾದ ಕೆರೆ,ಕಟ್ಟೆಗಳು ಹಾಗೂ ಕಲ್ಯಾಣಿಗಳ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹಸಿರು ಭೂಮಿ ಪ್ರತಿಷ್ಠಾನ ಕಳೆದ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಸಾಹಿತಿ ರೂಪಾ ಹಾಸನ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಲೂಕು ಆಡಳಿತ ಹಾಗೂ ಹಸಿರು ಭೂಮಿ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಳೆದ 3 ವರ್ಷಗಳ ಹಿಂದೆ ಪ್ರಾರಂಭಗೊಂಡ ಹಸಿರು ಭೂಮಿ ಪ್ರತಿಷ್ಠಾನ ಜೀವಜಲದ ಸಂರಕ್ಷಣೆಗೆ ಕಂಕಣಬದ್ಧವಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಜನಸಮುದಾಯವು ಸ್ವಯಂಪ್ರೇರಣೆಯಿಂದ ಕೆರೆಕಟ್ಟೆಗಳು ಮತ್ತು ಕಲ್ಯಾಣಿಗಳ ಪುನಶ್ಚೇತನಗೊಳಿಸಲು ಪ್ರೇರಣೆ ನೀಡುತ್ತಿದೆ ಎಂದರು.
ಕೆರೆ, ಕಟ್ಟೆಗಳ ಪುನಶ್ಚೇತನ: ಅರಸೀಕೆರೆ ತಾಲೂಕಿನ ಬಾಣಾವರ,ಯಾದಾಪುರ, ಚಗಚಗೆರೆ ಸೇರಿದಂತೆ ಜಿಲ್ಲೆಯಲ್ಲಿನ 13 ಕೆರೆಗಳನ್ನು ಹಾಗೂ 45 ಪುರಾತನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಲಾಗಿದೆ. ಅಲ್ಲದೆ 100ಕ್ಕೂ ಹೆಚ್ಚಿನ ಜಾಗದಲ್ಲಿ 35 ಸಾವಿರಕ್ಕೂ ಹೆಚ್ಚಿನ ಗಿಡಗಳನ್ನು ನೆಡುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಿದೆ ಎಂದರು.
ಜಲಾಂದೋಲನ: ಮಾ.22 ರ ವಿಶ್ವಜಲ ದಿನದಿಂದ ಏ.22ರ ವಿಶ್ವ ಭೂ ದಿನದವರೆಗೆ ಜಿಲ್ಲೆಯಲ್ಲಿ ಪಾರಂಪರಿಕ ಜಲಮೂಲಗಳ ಹೂಳೆತ್ತು ಮೂಲಕ ಪುನಶ್ಚೇತನಗೊಳಿಸುವ ಜಲಾಂದೋಲನ ಕಾರ್ಯವನ್ನು ವಿವಿಧ ಸಂಘ ಸಂಸ್ಥೆಗಳು ಮತ್ತು ಮಹಿಳಾ ಸ್ವಹಾಯ ಸಂಘಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಮ್ಮ ಪ್ರತಿಷ್ಠಾನವು ಕ್ರೀಯಾಯೋಜನೆಯನ್ನು ರೂಪಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹಕಾರ ನೀಡಬೇಕೆಂದು ಕೋರಿದರು.
ಹಸಿರು ಭೂಮಿ ಪ್ರತಿಷ್ಠಾನದ ಉಪಾಧ್ಯಕ್ಷೆ ಸೌಭಾಗ್ಯಮ್ಮ ಅವರು ಕಳೆದ 3 ವರ್ಷಗಳಿಂದ ಪ್ರತಿಷ್ಠಾನದ ಮೂಲಕ ಪುನಶ್ಚೇತನಗೊಂಡ ಕೆರೆಗಳು ಕಲ್ಯಾಣಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷರಾದ ಅಪ್ಪಾಜಿ ಗೌಡ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೂಪಾ, ತಾಪಂ ಇಒ ಎಸ್.ಪಿ.ನಟರಾಜು ಮಾತನಾಡಿದರು. ಕಾರ್ಯಾಗಾರದಲ್ಲಿ ತಾಲೂಕಿನ ಎಲ್ಲಾ ಗ್ರಾಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು.
ನೈಸರ್ಗಿಕ ಸಂಪತ್ತು ರಕ್ಷಿಸಿ: ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಚಂದ್ರಶೇಖರ್ ಮಾತನಾಡಿ, ನೈಸರ್ಗಿಕ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಣಗಳಿಕೆಗಾಗಿ ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ತಾಲೂಕಿನ ಕೆರೆಗಳು, ಕಲ್ಯಾಣಿಗಳನ್ನು ಸ್ಥಳೀಯ ಸಂಘ ಸಂಸ್ಥೆಗಳು ಮಹಿಳಾ ಸ್ವಹಾಯ ಸಂಘಗಳ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪುನಶ್ಚೇತನಗೊಳಿಸಲು ಗ್ರಾಪಂ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಮುಂದಾಗುವ ನಿಟ್ಟಿನಲ್ಲಿ ಭವಿಷ್ಯದಲ್ಲಿ ನಮ್ಮ ಮುಂದಿನ ಪೀಳಿಗೆಗೆ ಜೀವಜಲವನ್ನು ಸಂರಕ್ಷಣೆ ಮಾಡಲು ಸಂಕಲ್ಪ ಮಾಡಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.