ಪಕ್ಷದ ಕಾರ್ಯಕರ್ತರ ಹಿತ ಕಾಪಾಡಲು ಕ್ರಮ
Team Udayavani, Jul 1, 2020, 7:36 AM IST
ಚನ್ನರಾಯಪಟ್ಟಣ: ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರು ನೀಡುವ ಚೀಟಿಗೆ ಬೆಲೆ ನೀಡುವ ಕಾಲ ಹೋಗುತ್ತಿದೆ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಗೆ ಬೆಲೆ ದೊರೆ ಯುವ ಕಾಲ ಸನಿಹವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು. ಡಿ.ಕೆ.ಶಿವಕುಮಾರ್ ಪದಗ್ರಹಣದ ಅಂಗವಾಗಿ ಪುರಸಭಾ ಸದಸ್ಯರು ಹಾಗೂ ಪಟ್ಟಣದಲ್ಲಿನ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಕ್ಷದಲ್ಲಿ ದುಡಿಯುವ ಕಾರ್ಯಕರ್ತ ಮೂಲೆ ಗುಂಪಾಗುತ್ತಿದ್ದಾನೆ. ಮುಖಂಡರು ಹಿಡಿತ ಸಾಧಿಸುತ್ತಿದ್ದಾರೆಂಬ ಆರೋಪ ನಿವಾರಿಸಲು ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಾಗಲಿದ್ದಾರೆ ಎಂದರು. ಮುಖಂಡರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಇದರಿಂದ ಕೆಳ ಮಟ್ಟದ ಕಾರ್ಯಕರ್ತರಿಗೆ ತೊಂದರೆ ಆಗುತ್ತಿದೆ ಎಂಬ ಕೂಗು ಮೈಸೂರು ಭಾಗದಲ್ಲಿ ಕೇಳಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಎಂದಿಗೂ ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಿದಟಛಿವಿಲ್ಲ ನಮಗೆ ಕಾರ್ಯಕರ್ತರು ಮುಖ್ಯ ಹೊರತು ಅಧಿಕಾವರಲ್ಲ ಎಂದು ನುಡಿದರು. ಕೋವಿಡ್ 19ದಿಂದ ಡಿಕೆಶಿ ಪದಗ್ರಹಣ ಪ್ರತಿ ಗ್ರಾಮಕ್ಕೆ ತಲುಪುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯನ್ನು ವೀಕ್ಷಕರೊಂದಿಗೆ ಮುಖಂಡರು ಸಂಚಾರ ಮಾಡಿ ಬೂತ್‌ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಕೆಪಿಸಿಸಿ ನೂತನ ಸಾರಥಿಗಳ ಕಾರ್ಯಕ್ರಮ ತಲುಪುವಂತೆ ಮಾಡಲು ಶ್ರಮಿಸುತ್ತಿದ್ದಾರೆ ಎಂದರು.
ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಬ್ಲಾಕ್ ಕಾಂಗ್ರೆಸ್ ಮುಖಂಡ ರಾಮಚಂದ್ರ, ಎಪಿಎಂಸಿ ನಿರ್ದೇಶಕ ಎಂ.ಶಂಕರ್, ಯುವ ಮುಖಂಡರಾದ ಕಾರ್ತೀಕ್, ಕಿರಣ್, ಕಿಶೋರ, ಮೋಹನ್, ವೀಕ್ಷಕರಾದ ಕಮಲಾಕ್ಷಿ, ಕ್ಷೇತ್ರದ ಉಸ್ತುವಾರಿ ಸಂಜಯಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.