ಬೆಳೆ ಸಮೀಕ್ಷೆ ಆ್ಯಪ್‌ನಿಂದ ಅನುಕೂಲ
Team Udayavani, Aug 22, 2020, 1:50 PM IST
ಸಾಂದರ್ಭಿಕ ಚಿತ್ರ
ಚನ್ನರಾಯಪಟ್ಟಣ: ರೈತರು ತಮ್ಮ ಬೆಳೆ ಸಮೀಕ್ಷೆಯನ್ನು ಆ್ಯಪ್ ಮೂಲಕ ತಾವೇ ಅಪ್ಲೋಡ್ ಮಾಡಿಕೊಳ್ಳುವಂತೆ ಸರ್ಕಾರ ಕಲ್ಪಿಸಿರುವ ಅವಕಾಶವನ್ನು ಸಂಪೂರ್ಣ ಪ್ರಯೋಜ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ತಾಲೂಕಿನ ದಿಂಡಗೂರು ಗ್ರಾಮದ ರೈತ ಭರತ್ ಅವರ ಜಮೀನಿನಲ್ಲಿ ತಾಲೂಕು ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ರೈತರು ಬೆಳೆ ಸಮೀಕ್ಷೆ ಆ್ಯಪ್ ಡೌನ್ ಲೋಡ್‌ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಭಾವಚಿತ್ರದ ಸಹಿತವಾಗಿ ಮಾಹಿತಿ ರವಾನೆ ಮಾಡಬಹುದಾಗಿದೆ, ಇದರಿಂದಾಗಿ ಈ ಹಿಂದೆ ಆಗಿದಂತಹ ಎಡವಟ್ಟುಗಳು ಸರಿಹೋಗಲಿವೆ, ಇನ್ನು ಬೆಳೆ ದೃಢೀಕರಣಕ್ಕೆ ಅಲೆದಾಡುವುದು ತಪ್ಪಲಿದೆ ಎಂದರು.
ಮೊಬೈಲ್ ಬಳಕೆ ಮಾಡಿಕೊಳ್ಳಲು ಬಾರದ ರೈತರ ಸಹಾಯಕ್ಕಾಗಿ ತರಬೇತಿ ಪಡೆದ ಖಾಸಗಿ ವ್ಯಕ್ತಿಗಳನ್ನು ಕೃಷಿ ಇಲಾಖೆ ವತಿಯಿಂದ ನಿಯೋಜಿಸಿದ್ದು ಆ ಮೂಲಕವಾದರೂ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಿಸಬಹುದಾಗಿದೆ ಎಂದು ತಿಳಿಸಿದರು. ಖಾಸಗಿಯವರು ಅಪ್ಲೋಡ್ ಮಾಡುವ ಪ್ರತಿ ಫೋಟೋಗಳಿಗೆ 10 ರೂ. ಹಾಗೂ ಗರಿಷ್ಠ 20 ರೂ.ಗಳನ್ನು ಸರ್ಕಾರವೇ ನೀಡಲಿದೆ, ರೈತರು ಯಾವುದೇ ರೀತಿಯಲ್ಲಿ ಹಣ ನೀಡಬಾರದು. ಒಂದು ವೇಳೆ ಹಣ ಕೇಳಿದರೆ ಕೂಡಲೆ ಕೃಷಿ ಇಲಾಖೆಗೆ ಮಾಹಿತಿ ನೀಡುವುದು ಸೂಕ್ತ ಎಂದು ತಿಳಿಸಿದರು.
ಸಹಾಯಕ ಕೃಷಿಇಲಾಖೆ ಪ್ರಭಾರ ನಿರ್ದೇಶಕಿ ರಶ್ಮಿ, ತಾಪ ಸದಸ್ಯ ಮಂಜೇಗೌಡ, ಕೃಷಿ ಅಧಿಕಾರಿಗಳಾದ ಆದರ್ಶ, ಯೋಗೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.