ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಮತ್ತೆ ಅಧಿಕಾರ ಸ್ವೀಕಾರ
Team Udayavani, Jun 1, 2019, 10:26 AM IST
ಹಾಸನ ಜಿಲ್ಲಾಧಿಕಾರಿಯಾಗಿ 2ನೇ ಬಾರಿಗೆ ವರ್ಗವಾಗಿ ಬಂದಿರುವ ಅಕ್ರಂಪಾಷ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರ ಹಸ್ತಾಂತರಿಸಿದರು.
ಹಾಸನ: ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರು 2ನೇ ಬಾರಿ ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು. ಕಳೆದ ಲೋಕಸಭಾ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಅವರು, ನಿರ್ಗ ಮಿತ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ರಿಂದ ಕಾರ್ಯಭಾರ ವಹಿಸಿಕೊಂಡರು.
ಕಳೆದ ಸುಮಾರು 2 ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.
ಸೇವೆ ತೃಪ್ತಿ ನೀಡಿದೆ: ಬೀಳ್ಕೊಡುಗೆ ಸ್ವೀಕ ರಿಸಿ ಮಾತನಾಡಿದ ಅವರು, ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿ ಮಾಡಿದ ಸೇವೆ ತೃಪ್ತಿ ತಂದಿದೆ. ಹೆಚ್ಚಿನ ಅನುಭವ ನೀಡಿದೆ. ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮುಕ್ತಾಯ ಗೊಂಡಿದ್ದು ಇದಕ್ಕೆ ಸಹಕರಿಸಿದ ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಸಮರ್ಥ ಅಧಿಕಾರಿಗಳು: ಹಾಸನದಲ್ಲಿ ಸಮರ್ಥ ಅಧಿಕಾರಿಗಳ ದೊಡ್ಡ ಪಡೆ ಇದೆ. ಹೇಳಿದ ತಕ್ಷಣ ಅರ್ಥ ಮಾಡಿ ಕೊಂಡು ಕೆಲಸ ಮಾಡುವವರು ಹೆಚ್ಚಿ ದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ನಿರೀಕ್ಷಿಸಬಹುದಾಗಿದೆ ಎಂದರು.
ಶಾಂತಿಯುತ ಚುನಾವಣೆ: ಜಿಲ್ಲಾಧಿ ಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಕ್ರಂಪಾಷ ಮಾತನಾಡಿ, ಯಶಸ್ವಿ ಚುನಾವಣೆ ನಡೆಸುವಲ್ಲಿ ಜಿಲ್ಲಾಧಿ ಕಾರಿಗಳ ಜೊತೆಗೆ ಸಹ ಅಧಿಕಾರಿ ಸಿಬ್ಬಂದಿಗಳ ಜವಾಬ್ದಾರಿ ಹೆಚ್ಚು. ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ ಸಂಘಟಿಸುವಲ್ಲಿ ಎಲ್ಲರೂ ಉತ್ತಮ ಸೇವೆ ಸಲ್ಲಿಸಿದ್ದು ಎಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.
ಆದ್ಯತೆ ನೀಡಿ: ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಯುವ ಅಧಿಕಾರಿ ಯಾಗಿದ್ದು ಮುಂದೆ ರಾಜ್ಯ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಆ ವೇಳೆ ಹಾಸನ ಜಿಲ್ಲೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಕೋರಿ ಶುಭ ಹಾರೈಸಿದರು.
ಉತ್ತಮ ಆಡಳಿತ: ಜಿಪಂ ಸಿಇಒ ಕೆ.ಎನ್.ವಿಜಯಾಪ್ರಕಾಶ್ ಮಾತನಾಡಿ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅಕ್ರಂ ಪಾಷ ಅವರಿಬ್ಬರೂ ಅತ್ಯಂತ ಕ್ರಿಯಾಶೀಲ ಹಾಗೂ ಸಮರ್ಥ ಆಡಳಿತ ದಾರರು. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಗೊಂದಲ ರಹಿತವಾಗಿ ಚುನಾವಣೆ ನಡೆಸುವಲ್ಲಿ ಹಾಗೂ ಮತದಾರರ ಜಾಗೃತಿ ಚಟುವಟಿಕೆ ನಡೆಸುವಲ್ಲಿ ಇಬ್ಬರು ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅನುದಾನ ಬಿಡುಗಡೆ: ಅಕ್ರಂಪಾಷ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವರ್ಗಾವಣೆ ಹೊಂದಿ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರ ಸ್ವೀಕರಿಸಿದ ಮೇಲೂ ಹಾಸನ ಜಿಲ್ಲೆಯ ಉದ್ಯೋಗ ಖಾತರಿ ಯೋಜನೆಯಡಿ 51 ಕೋಟಿ ರೂ.ಗಳ ಬಾಕಿ ಅನುದಾನ ಬಿಡುಗಡೆ ಮಾಡಿಕೊಟ್ಟು ಸಹಕರಿಸಿ ದ್ದಾರೆಂದು ಸಿಇಒ ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ ಮಾತನಾಡಿದರು. ಮುಜರಾಯಿ ತಹಶೀಲ್ದಾರ್ ಶಾರದಾಂಬ ಸ್ವಾಗತಿಸಿದರು.
ಸಕಲೇಶಪುರ ಉಪವಿಭಾಗಾಧಿಕಾರಿ ಕವಿತಾ, ನಗರಸಭೆ ಆಯುಕ್ತೆ ರೂಪಾಶೆಟ್ಟಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.