ಅಂಬೇಡ್ಕರ್ ಭವನ ಕಾಮಗಾರಿ ಕಳಪೆ: ಜಿಪಂ ಅಧ್ಯಕ್ಷೆ ಆಕ್ರೋಶ
Team Udayavani, Sep 8, 2019, 11:58 AM IST
ಅರಕಲಗೂಡು: ಪಟ್ಟಣದಲ್ಲಿ ನಡೆಯುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಸಂಪೂರ್ಣ ಕಳಪೆ ಯಾಗಿದ್ದು, ಕೆಲಸದ ಗುತ್ತಿಗೆ ಪಡೆದಿರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್)ವನ್ನು ಕಪ್ಪು ಪಟ್ಟಿಗೆ ಸೇರಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ತಿಳಿಸಿದರು.
ಶನಿವಾರ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಪಂ ಸದಸ್ಯ ಬರಗೂರು ರವಿ ಕಳೆದ ಸಾಮಾನ್ಯ ಸಭೆಯಲ್ಲಿ ಭವನ ಕಾಮಗಾರಿ ಕಳಪೆಯಿಂದ ಕೂಡಿದೆ. ಇದರಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಕೆಆರ್‌ಐಡಿಎಲ್ ಎಂಜಿನಿಯರ್‌ಗಳ ಕಮಿಷನ್ ದುರಾಸೆಯಿಂದ ಈಗಾಗಲೇ ಆರಂಭ ಗೊಂಡಿರುವ 75ಲಕ್ಷ ರೂ. ವೆಚ್ಚದ ಕಾಮಗಾರಿ ಕಳೆಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ ಎಂದು ವಿಷಯ ಪ್ರಸ್ತಾಪಿಸಿದ್ದರು. ಇದರ ಅನ್ವಯ ಇಂದು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆದ ವೇಳೆ ಕೆಲಸ ಕಳಪೆಯಿಂದ ಕೂಡಿರುವುದು ಕಂಡುಬಂದಿದೆ. ಇಂದಿನಿಂದಲೇ ಕೆಲಸವನ್ನು ನಿರ್ವಹಿಸಬಾರದು. ಈಗ ನಿರ್ಮಾಣ ವಾಗಿರುವ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕೆಲಸ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಭವನ ಆವರಣ ಸಂಪೂರ್ಣವಾಗಿ ಮಲಿನ ವಾಗಿರುವ ಹಿನ್ನೆಲೆ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತ್ತಿದೆ. ಭವನದ ಸುತ್ತ ಗೋಡೆ ನಿರ್ಮಿಸಿರುವುದರಿಂದ ಒಳ ಭಾಗದಲ್ಲಿ ಎರಡು ಅಡಿ ನೀರು ನಿಂತಿದೆ. ಹೊರ ಭಾಗದ ಮೂರು ಕಡೆಯೂ ಐದು ಅಡಿ ನೀರು ನಿಂತಿದೆ. ಗೋಡೆ ಸುತ್ತಾ ಮಣ್ಣು ಹಾಕಿ ನೀರು ಹೊರಹೋಗುವಂತ್ತೆ ಸ್ವಚ್ಛಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ವೀಣಾ, ಉಪಾಧ್ಯಕ್ಷ ನಾಗರಾಜು, ಜಿಪಂ ಸದಸ್ಯರಾದ ಶ್ರೀನಿವಾಸ್, ರೇವಣ್ಣ, ಬರಗೂರು ರವಿ, ರತ್ನಮ್ಮ, ತಾಪಂ ಸದಸ್ಯರಾದ ಮರೀಗೌಡ, ಮೀನಾ, ತಹಶೀಲ್ದಾರ್ ಶಿವರಾಜ್, ಇಒ ರವಿಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.