![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 14, 2020, 10:52 AM IST
ಹಾಸನ: ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುರಕ್ಷತೆ ಒದಗಿಸಬೇಕು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಹೆಚ್ಚವರಿ ವೇತನ ಹಾಗೂ 50 ಲಕ್ಷ ರೂ.ವಿಮೆ ಕಲ್ಪಿಸಬೇಕು ಎಂದು ರ್ನಾಟಕ ರಾಜ್ಯ ಅಂಗನವಾಡಿ ನೌಕರರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ಕೋವಿಡ್ ನಿಯಂತ್ರಣಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್‌ಗಳನ್ನು, ಗ್ಲೌಸ್‌ಗಳನ್ನು ಕೊಡದ ಕಾರಣ ಬೆಳಗಾವಿಯಲ್ಲಿ ಇಬ್ಬರು ಮತ್ತು ಕುಣಿಗಲ್ ನಲ್ಲಿ ಒಬ್ಬರು ಮತ್ತು ನರಗುಂದ ತಾಲೂಕಿನ ಕಾರ್ಯಕರ್ತೆ ಮತ್ತು ಅವರ ಮಗುವಿಗೆ ಸೋಂಕು ತಗುಲಿದೆ. ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ರೀತಿಯ ಸಂರಕ್ಷಣೆಯಿಲ್ಲದೇ ಆತಂಕದಲ್ಲಿಯೇ ಕೆಲಸ ಮಾಡುವಂತಾಗಿದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿದರು.
ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ನಿವೃತ್ತಿ ವೇತನ ಕೊಡಬೇಕು. ಮತ್ತು ಈಗಿರುವ ನಿವೃತ್ತಿ ವೇತನದ ಪದ್ಧತಿಯನ್ನು ಬದಲಾಯಿಸಬೇಕು. ಮೇಲ್ವಿಚಾರಕಿಯರ ಹುದ್ದೆಗೆ ಶೇ.75ರ ಮಿತಿಯನ್ನು ಶೇ.100ಕ್ಕೆ ವಿಸ್ತರಿಸಬೇಕು ಎಂದೂ ಮನವಿ ಮಾಡಿದರು. ಸಿಐಟಿಯು ಮುಖಂಡ ಧರ್ಮೇಶ್, ಅಂಗನವಾಡಿ ನೌಕರರ ಸಂಘದ ಎಂ.ಬಿ. ಪುಷ್ಪ, ಅರವಿಂದ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.