ಉನ್ನತ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಕ ಮಾಡಿ; ಶಾಸಕ ಎಚ್‌.ಕೆ ಕುಮಾರಸ್ವಾಮಿ

ಅನ್ಯಭಾಷೆಗಳ ಆಕರ್ಷಣೆಗೆ ಒಳಗಾಗ ಬಾರದು

Team Udayavani, Nov 25, 2022, 5:59 PM IST

ಉನ್ನತ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಕ ಮಾಡಿ; ಶಾಸಕ ಎಚ್‌.ಕೆ ಕುಮಾರಸ್ವಾಮಿ

ಸಕಲೇಶಪುರ: ರಾಜ್ಯ ಸರಕಾರ ಇನ್ಮುಂದೆ ಐಎಎಸ್‌, ಐಪಿಎಸ್‌ ಸೇರಿದಂತೆ ಉನ್ನತ ಹುದ್ದೆಗಳಿಗೆ ಕರ್ನಾಟಕದ ಅಧಿಕಾರಿಗಳನ್ನೇ ನೇಮಕ ಮಾಡಿಕೊಳ್ಳುವಂತೆ ಶಾಸಕ ಎಚ್‌.ಕೆ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಗುರುವಾರ ಹೆತ್ತೂರಿನಲ್ಲಿ ಕಸಾಪ ಹೆತ್ತೂರು ಹೋಬಳಿ ಘಟಕ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು. ರಾಜ್ಯದ ಬಹುತೇಕ ಉನ್ನತ ಸರ್ಕಾರಿ ಹುದ್ದೆಗಳಿಗೆ ಅನ್ಯ ರಾಜ್ಯದ ಅಧಿಕಾರಿ ಗಳನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಕರ್ನಾಟಕದಲ್ಲೇ ಇರುವ ಸಾಕಷ್ಟು ಜನರು ಭಾರತೀಯ ಲೋಕಸೇವಾದಲ್ಲಿ ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿದ್ದಾರೆ. ಅಂತವರನ್ನು ಗುರುತಿಸಿ ಸರ್ಕಾರ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕೆಂದರು.

ಒಗ್ಗಟ್ಟು ಕಾಯ್ದುಕೊಳ್ಳಬೇಕು: ಹೋಬಳಿ ಮಟ್ಟದಲ್ಲಿ ಕನ್ಮಡ ಭಾಷೆ ಬಗ್ಗೆ ನಾವು ಇನ್ನು ಹೆಚ್ಚು ಜಾಗೃ ತರಾಗಬೇಕಾಗಿದೆ. ನಮ್ಮ ಶಕ್ತಿ ಹಾಗೂ ನಮ್ಮತನ ಪ್ರದರ್ಶನ ಮಾಡಲೇಬೇಕು. ನಮ್ಮಲ್ಲಿ ಒಗ್ಗಟ್ಟು ಹಾಗೂ ಇಚ್ಛಾ ಶಕ್ತಿಯ ಕೊರತೆಯಿಲ್ಲ. ಆದರೂ ಸಹ ಎಲ್ಲೋ ಒಂದು ಕಡೆ ನಾವು ತಪ್ಪು ಮಾಡುತ್ತಿದ್ದೇವೆ. ಮೊನ್ನೆ ತಾನೆ ಮತ್ತೂಮ್ಮೆ ಮಹಾರಾಷ್ಟ್ರದವರು ಕ್ಯಾತೆ ತೆಗೆದಿದಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಅದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಅನೇಕ ಕನ್ನಡ ಪರ ಸಂಘಟನೆಗಳು ನಮ್ಮಲ್ಲಿದೆ. ಇನ್ನು ಅನೇಕರು ಸದ್ದಿಲ್ಲದೆ ಭಾಷೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. 8 ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳು ನಮ್ಮಲ್ಲಿದ್ದಾರೆ. ಅವರಿಂದ ಈ ಭಾಷೆಗೆ ಹೆಚ್ಚು ಗೌರವ ಬಂದಿದೆ.

ರಾಷ್ಟ್ರದಲ್ಲಿ ಕನ್ನಡ ಭಾಷೆಯನ್ನು ಗೌರವಿಸುವವರ ಸಂಖ್ಯೆ ಹೆಚ್ಚಿದೆ ಕಾರಣ ಕುವೆಂಪು, ದೇಜಗೌ, ಗೊರೂರು ರಾಮಸ್ವಾಮಿ ಅವರಂತಹ ಹೇಳಲಿಕ್ಕೆ ನೂರಾರು ಹೆಸರುಗಳಿದೆ. ನೂರಾರು ವ್ಯಕ್ತಿಗಳು ಕನ್ನಡ ಭಾಷೆಗೆ ಶಕ್ತಿಯನ್ನು ತುಂಬಿದ್ದಾರೆ ಎಂದರು.

ಭಾಷೆ ಸಂಸ್ಕೃತಿ ಉಳಿಸಿ ಬೆಳಸಿ: ಕಸಾಪ ಜಿಲ್ಲಾಧ್ಯಕ್ಷ ಮಲ್ಲೇಶ್‌ಗೌಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ವಿದ್ಯಾರ್ಥಿ ಜೀವನ ದಿಂದಲೇ ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲವನ್ನು ಪ್ರೀತಿಸಬೇಕು. ಪ್ರಸ್ತುತ ಕನ್ನಡ ಭಾಷೆ, ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ. ಇಂದಿನ ಪೀಳಿಗೆಗೆ ನಾವುಗಳು ಕನ್ನಡದ ಹಿರಿಮೆ ಗರಿಮೆ ಬಗ್ಗೆ ಹೇಳಿ ಕೊಡಬೇಕು. ಕನ್ನಡ ಭಾಷೆಯನ್ನು ನಾವುಗಳು ಉಳಿಸುವುದು ಬೇಡ ಅದರ ಬದಲು ಬಳಸಿದರೆ ಸಾಕು. ಜಗತ್ತಿನಲ್ಲಿ ಅತಿ ಹೆಚ್ಚು ಪುಸ್ತಕಗಳು ಬಿಡುಗಡೆ ಹೊಂದು ವುದು ಕನ್ನಡ ಭಾಷೆಯದೆ ಅಗಿದೆ.

ಕನ್ನಡ ಭಾಷೆಗೆ ಧಕ್ಕೆ: ಇವತ್ತಿಗೂ ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆಯಷ್ಟು ಬೇರೆ ಯಾವ ಭಾಷೆ ಕೂಡ ಕ್ರಿಯಾಶೀಲವಾಗಿಲ್ಲ. ಕನ್ನಡ ಭಾಷೆ ನಲುಗುತ್ತಿಲ್ಲ, ಭಾಷೆಗೆ ಧಕ್ಕೆಯಾಗುತ್ತಿದೆ ಎಂಬುವುದು ನಮ್ಮ ಆತಂಕವಷ್ಟೆ ಎಂದರು. ಗ್ರಾಮೀಣ ಪ್ರದೇಶದ ಭಾಷೆಗೆ ಹೆಚ್ಚು ಸತ್ವವಿದೆ. ಜಾನಪದಿಂದ ಕನ್ನಡ ಭಾಷೆ ಉಳಿದಿದೆ. ಭಾಷೆಯನ್ನು ನಾವುಗಳು ಬಳಸಬೇಕು ಇಲ್ಲದಿದ್ದರೆ ಅಕ್ಕಪಕ್ಕದವರು ಇಲ್ಲಿ ಬಂದು ನೆಲೆ ಕಾಣಲು ಬರುತ್ತಾರೆ. ಕನ್ನಡಿಗರ ಮಾತೃಭಾಷೆ ಕನ್ನಡ. ಕನ್ನಡವೇ
ಮಕ್ಕಳ ಮಾತೃ ಭಾಷೆಯಾಗಿದ್ದು, ಮಕ್ಕಳಿಗೆ ಅವರ ಪೋಷಕರು ಬಾಲ್ಯದಿಂದಲೇ ಮನದಟ್ಟು ಮಾಡಿಕೊಡುವ ಪ್ರಯತ್ನ ಮಾಡಬೇಕು. ಅನ್ಯಭಾಷೆಗಳ ಆಕರ್ಷಣೆಗೆ ಒಳಗಾಗ ಬಾರದು ಎಂದು ಕಿವಿ ಮಾತು ಹೇಳಿದರು.

ಹೋರಾಟಗಾರರ ಸ್ಮರಣೆ ನಮ್ಮ ಕರ್ತವ್ಯ: ಉಪ ಅರಕ್ಷಕ ಅಧಿಕ್ಷಕರಾದ ಮಿಥುನ್‌ ಮಾತನಾಡಿ, ಸರ್ಕಾರ ಕೂಡ ಅಡಳಿತ ಭಾಷೆಯಾಗಿ ಕನ್ನಡ ಬಳಕೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಉನ್ನತ ವ್ಯಾಸಂಗದಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಕನ್ನಡ ನಾಡು, ನುಡಿಗೆ ಹೋರಾಟ ಮಾಡಿದವರನ್ನು ನೆನಪಿಸಿಕೊಳ್ಳುವುದು ನಮ್ಮ ಅದ್ಯ ಕರ್ತವ್ಯ ಎಂದರು. ಶಾಲಾ ಮಕ್ಕಳಿಗೆ ಕನ್ನಡದ ಕವಿಗಳ ಪರಿಚಯವಾಗಬೇಕು. ಅವರುಗಳು ಬರೆದ ಪುಸ್ತಕಗಳು ಸುಲಭವಾಗಿ ಸಿಗುವಂತಾಗಬೇಕು ಎಂದು ಹೇಳಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬೇಲೂರು, ಹಳೆಬೀಡು, ಬಿಪಿನ್‌ ರಾವತ್‌ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ಪಬ್ಲಿಕ್‌ ಶಾಲೆ, ನಟ ಪುನೀತ್‌ ರಾಜ್‌ ಕುಮಾರ್‌ ಅವರ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು. ಈ ವೇಳೆ ಏಷ್ಯಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಎಚ್‌.ಬಿ ಮದನ್‌ ಗೌಡ, ನಿವೃತ್ತ ಆಕಾಶ ವಾಣಿ ಕಾರ್ಯಕ್ರಮ ಸಂಯೋಜಕರಾದ ಸುಬ್ಬು ಹೊಲೆಯಾರ್‌, ತಾಲೂಕು ಕಸಾಪ ಅಧ್ಯಕ್ಷೆ ಶಾರದ ಗುರುಮೂರ್ತಿ, ಹೆತ್ತೂರು ಗ್ರಾಪಂ ಅಧ್ಯಕ್ಷೆ ಅನುಸೂಯ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್‌, ಹೆತ್ತೂರು ಹೋಬಳಿ ಕಸಾಪ ಅಧ್ಯಕ್ಷ ಎಚ್‌.ಪಿ.ರವಿ ಕುಮಾರ್‌, ಸಾಹಿತಿ ಹಾಡ್ಲಳ್ಳಿ ನಾಗರಾಜ್‌ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.