ಕೃಷಿ ಉತ್ಪನ್ನ ಮಾರಾಟಕ್ಕೆ ವ್ಯವಸ್ಥೆ ಮಾಡಿ

ಜಿಲ್ಲಾಡಳಿತದೊಂದಿಗೆ ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್‌ ಶಾಸಕರ ಚರ್ಚೆ

Team Udayavani, Apr 14, 2020, 2:42 PM IST

ಕೃಷಿ ಉತ್ಪನ್ನ ಮಾರಾಟಕ್ಕೆ ವ್ಯವಸ್ಥೆ ಮಾಡಿ

ಹಾಸನ: ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಅಂತರ್‌ ಜಿಲ್ಲೆ, ಅಂತಾರಾಜ್ಯ ಸಾಗಣೆ ಮತ್ತು ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ರೈತರು ತೀವ್ರ ಸಂಕಷ್ಟ ಕ್ಕೊಳಗಾಗುತ್ತಾರೆ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಸಂಸದರು, ಜಿಲ್ಲೆಯ ಶಾಸಕರರೊಂದಿಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಕೊರೊನಾ ನಿಯಂತ್ರಣಕ್ಕೆ ಜಾರಿಯಾದ ಲಾಕ್‌ಡೌನ್‌ನಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಲಹೆ ನೀಡಿದರು.

ಕೃಷಿ ಉತ್ಪನ್ನ ಸಾಗಣೆಗೆ ಅವಕಾಶ ನೀಡಿ: ಜಿಲ್ಲೆಯಲ್ಲಿ ಬೆಳೆ ಟೊಮೆಟೋ, ಕೋಸು, ಸಿಹಿ ಕುಂಬಳ, ಕಲ್ಲಂಗಡಿ, ಪಪ್ಪಾಯಿ ಸೇರಿದಂತೆ ತರಕಾರಿ ಮತ್ತು ಹಣ್ಣು ಮಾರಾಟ ಮಾಡಲಾಗದೇ ರೈತರು ಪರಿತಪಿಸುತ್ತಿದ್ದಾರೆ. ನೆರೆ-ಹೊರ ಜಿಲ್ಲಾಧಿಕಾರಿವರೊಂದಿಗೆ ಸಂಪರ್ಕ ಸಾಧಿಸಿ ಜಿಲ್ಲೆಯ ತರಕಾರಿ – ಹಣ್ಣು ಸಾಗಣೆಗೆ ಅವಕಾಶ ಮಾಡಿ ಹೊರ ಜಿಲ್ಲೆಯ ವರ್ತಕರನ್ನೂ ಸಂಪರ್ಕಿಸಿ ಮಾರಾಟದ ವ್ಯವಸ್ಥೆ ಮಾಡಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ನಡೆಸುವ ವಿಡಿಯೋ ಸಂವಾದ ನಡೆಸುವ ವೇಳೆ ಅಂತಾರಾಜ್ಯ ಸಾಗಣೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಕಬ್ಬು ಬೆಳೆದವರು ಕಾರ್ಖಾನೆಗಳಿಗೆ ಸಾಗಿಸಲು ವ್ಯವಸ್ಥೆ ಮಾಡಬೇಕು. ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳಲ್ಲಿ ತಂಬಾಕು ಬೆಳೆಗಾರರಿಗೆ ಗೊಬ್ಬರದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಮದ್ಯ ಮಾರಾಟಕ್ಕೆ ಅವಕಾಶ ನೀಡಿ: ಲಾಕ್‌ಡೌನ್‌ ಜಾರಿಯಾದ ಕೂಡಲೇ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲಾಗಿದ್ದು, ನಕಲಿ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಸರ್ಕಾರ ಎಂಎಸ್‌ಐಎಲ್‌ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು
ಒತ್ತಾಯಿಸಿದರು. ತಬ್ಲೀ ಗಳಿಂದ ಕೊರೊನಾ ಹರಡಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ ಅಲ್ಪ ಸಂಖ್ಯಾತರನ್ನು ನಿರ್ಲಕ್ಷ್ಯಕ್ಕೆ ಗುರಿಯಾಗದಂತೆ ಜಿಲ್ಲಾಡಳಿತ ಗಮನ ಹರಿಸಬೇಕು. ಬಡ ಅಲ್ಪ ಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ಕಲ್ಪಿಸ ಬೇಕು ಎಂದರು. ಜಿಲ್ಲೆಯಲ್ಲಿ ಹೆಚ್ಚು ಆಲೂಗಡ್ಡೆ ಬೆಳೆಯುವುದರಿಂದ ಉತ್ತಮ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ತರುಸಿ ಮಾರಾಟದ ವ್ಯವಸ್ಥೆ ಮಾಡುವುದರ ಜೊತೆಗೆ ಸಬ್ಸಿಡಿ, ಔಷಧೋಪಚಾರದ ಸವಲತ್ತು ಸಿಗುವಂತೆ ಮಾಡಿ ಎಂದು ಸಲಹೆ ನೀಡಿದರು.

ಶಾಸಕ ಎಚ್‌.ಡಿ.ರೇವಣ್ಣ ಮಾತನಾಡಿ, ತರಕಾರಿ, ದಿನಸಿ ದರವನ್ನು ವರ್ತಕರು ಏರಿಸಿದ್ದಾರೆ. ಕೃಷಿಕರೂ ಉತ್ತಮ ದರ ಸಿಗುತ್ತಿಲ್ಲ. ಗ್ರಾಹಕರಿಗೂ ಲಾಭವಾಗುತ್ತಿಲ್ಲ. ಮಧ್ಯವರ್ತಿಗಳಿಗೆ ಲಾಭ ವಾಗುತ್ತಿದೆ. ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲ ದಿನಬಳಕೆ
ವಸ್ತುಗಳ ಮಾರಾಟದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಸದ ಪ್ರಜ್ವಲ್‌ ರೇವಣ್ಣ ಅವರು ಮಾತನಾಡಿ, ಜಿಲ್ಲಾಡಳಿತದಿಂದ ಕೈಗೊಂಡ ಮುಂಜಾಗ್ರತಾ ಕ್ರಮದಿಂದಾಗಿ ಜಿಲ್ಲೆ ಕೊರೊನಾ ಮುಕ್ತವಾಗಿದೆ ಎಂದು ಶ್ಲಾಘಿಸಿದರು. ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಹಾಗೂ ರೈತರ ಕೃಷಿ ಉತ್ಪನ್ನಗಳ ಮಾರಾಟದ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಎಚ್‌. ಕೆ.ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌, ಎಸ್ಪಿ ಶ್ರೀನಿವಾಸಗೌಡ, ಸಿಇಒ ಪರಮೇಶ್‌, ಉಪ ವಿಭಾಗಾಧಿಕಾರಿ ಡಾ. ನವೀನ್‌ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.