Hassan ಅಶ್ವಥ್ ಮೇಲೆ ದಾಳಿ ಪ್ರಕರಣ : 6 ಮಂದಿ ಆರೋಪಿಗಳ ಸೆರೆ
Team Udayavani, Oct 22, 2023, 8:21 PM IST
ಹಾಸನ: ತೀವ್ರ ಕುತೂಹಲ ಕೆರಳಿಸಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತ, ಪ್ರಮುಖ ಗುತ್ತಿಗೆದಾರ ಚನ್ನರಾಯಪಟ್ಟಣದ ಅಶ್ವತ್ಥ್ ನಾರಾಯಣಗೌಡ ಅವರ ಹತ್ಯೆಗೆ ದಾಳಿ ನಡೆಸಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಒಬ್ಬ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೋಲಾರದಲ್ಲಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಆಗಿರುವ ಜೆ.ಅಶೋಕ್(38), ಚನ್ನರಾಯಪಟ್ಟಣದಲ್ಲಿ ರಿಯಲ್ ಎಸ್ಟೇಟ್ ಮಾಡುತ್ತಿದ್ದ ಬಿ.ಎಸ್.ತೇಜಸ್ವಿ (37), ಅರವಿಂದ 40) ಬೆಂಗಳೂರಿನಲ್ಲಿ ಇನ್ಸೂರೆನ್ಸ್ ಏಜೆಂಟ್ ಆರ್. ಮಧುಸೂಧನ್ (38) , ಗಾರೆ ಕೆಲಸಗಾರ ಸಿ. ಮುರುಗನ್ ( 35), ಕುಡಿಯುವ ನೀರಿನ ಕ್ಯಾನ್‌ಗಳನ್ನು ಸಪ್ಲೈ ಕೆಲಸ ಮಾಡಿಕೊಂಡಿದ್ದ ಆರ್.ಸತೀಶ್ (38) ಬಂಧಿತರು.
ಬೆಂಗಳೂರಿನ ಲೋಹಿತ್ ಕುಮಾರ್ (32) ಅಲಿಯಾಸ್ ರೋಹಿತ್ ಮತ್ತು ಪ್ರವೀಣ ಉರುಫ್ ನೇಪಾಳಿ ತಲೆ ಮರೆಸಿಕೊಂಡಿದ್ದಾರೆ ಎಂದು ಎಸ್ಪಿ ಮೊಹಮ್ಮದ್ ಸುಜೀತಾ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರೀಮಂತರನ್ನು ಗುರುತಿಸಿ ಅವರ ಮೇಲೆ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆಯೊಡ್ಡಿ ಹಣ ಸುಲಿಗೆ ಮಾಡುವುದು ಈ ತಂಡದ ಉದ್ದೇಶ. ಆರೋಪಿಗಳ ಪೈಕಿ 2020 ರಲ್ಲಿ ಕೋಲಾರದ ಶಾಸಕರಾಗಿದ್ದ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಲು ಯತ್ನಿಸಿದ್ದ ಪ್ರಕರಣದಲ್ಲಿ ಲೋಹಿತ್ ಭಾಗಿಯಾಗಿದ್ದ,. ಜೊತೆಗೆ ಈ ವರ್ಷವೂ ಆತನ ಮೇಲೆ ಪ್ರಕಣವೊಂದು ದಾಖಲಾಗಿದೆ. ಆರೋಪಿಗಳು ಈ ಹಿಂದೆ ಹಣಕ್ಕಾಗಿ ಅಪಹರಣ, ಸುಲಿಗೆ, ದರೋಡೆ ಪ್ರಕರಣಗಳಲ್ಲೂ ಈ ಹಿಂದೆ ಭಾಗಿಯಾಗಿದ್ದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.