ಕೆಪಿಟಿಸಿಎಲ್‌ ಎಂಜಿನಿಯರ್‌ಗೆ ಮಚ್ಚಿನೇಟು

Team Udayavani, Jun 15, 2019, 3:00 AM IST

kptcal

ಹಾಸನ: ಕೆಪಿಟಿಸಿಎಲ್‌ ಮಹಿಳಾ ಕಿರಿಯ ಎಂಜಿನಿಯರ್‌ ಮೇಲೆ ಅಟೆಂಡರ್‌ ಒಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.  ಹಾಸನದ ಸಂತೇಪೇಟೆಯ ಕೆಪಿಟಿಸಿಎಲ್‌ನ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕಳೆದ 6 ವರ್ಷಗಳಿಂದ ಸ್ವಾತಿ ದೀಕ್ಷಿತ್‌ ಅವರು ಜ್ಯೂನಿಯರ್‌ ಎಂಜಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಚೇರಿ ಮುಂಭಾಗದ ಸ್ಟೇಷನ್‌ ಯಾರ್ಡ್‌ನಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡಿ ಸ್ವಚ್ಛಗೊಳಸುವಂತೆ ಅಟೆಂಡರ್‌ ನವೀನ್‌, ಮಂಜುನಾಥ್‌ ಮತ್ತು ವೆಂಕಟೇಶ್‌ಗೌಡ ಅವರಿಗೆ ಸ್ವಾತಿ ದೀಕ್ಷಿತ್‌ ಶುಕ್ರವಾರ ಬೆಳಗ್ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ನನ್ನ ಯಾರ್ಡ್‌ ಸ್ವಚ್ಛಗೊಳಿಸಿದ್ದೇನೆ ಮತ್ತೆ ನನಗೇಕೆ ಹೇಳುತ್ತೀರಿ ಎಂದು ಮಂಜುನಾಥ್‌ ಜಗಳ ತೆಗೆದಿದ್ದಾನೆ. ಯಾರಿಗೂ ಕೆಲಸ ಹಂಚಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಸ್ವಚ್ಛಗೊಳಿಸಿ ಎಂದು ಸ್ವಾತಿ ದೀಕ್ಷಿತ್‌ ಅವರು ತಾಕೀತು ಮಾಡಿದಾಗ, ನವೀನ್‌ ಮತ್ತು ವೆಂಕಟೇಶ್‌ಗೌಡ ಕೆಲಸಕ್ಕೆ ಮುಂದಾಗಿದ್ದಾರೆ. ಆದರೂ, ಮಂಜುನಾಥ್‌ ಸ್ವಚ್ಛತಾ ಕೆಲಸಕ್ಕೆ ಹೋಗಲಿಲ್ಲವೆನ್ನಲಾಗಿದೆ.

ನೌಕರರಿಗೆ ಸೂಚನೆ ನೀಡಿದ ನಂತರ ಸ್ವಾತಿ ದೀಕ್ಷಿತ್‌ ಅವರು ಕಚೇರಿಯಲ್ಲಿ ಕೆಲಸ ಮಾಡುವ ಸೌಮ್ಯಾ ಮತ್ತು ಸರಸ್ವತಿ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲು ಹಿಡಿದಿದ್ದ ಮಚ್ಚು ಎತ್ತಿಕೊಂಡು ಕೂಗಾಡುತ್ತಾ ಬಂದ ಮಂಜುನಾಥ್‌ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಸ್ವಾತಿ ದೀಕ್ಷಿತ್‌ ಅವರ ತಲೆಗೆ ಮಚ್ಚು ಬೀಸಿದ್ದಾನೆ.

ಅವರು ತಪ್ಪಿಸಿಕೊಂಡರೂ ಬಿಡದೆ ಮಚ್ಚಿನಿಂದ ಹೊಡೆದಾಗ ಸ್ವಾತಿ ದೀಕ್ಷಿತ್‌ ಅವರ ಎಡಗೈ, ಎಡಕೆನ್ನೆ ಹಾಗೂ ಹಣೆಗೆ ಮಚ್ಚಿನೇಟು ಬಿದ್ದಿವೆ. ಸ್ವಾತಿ ದೀಕ್ಷಿತ್‌ ಅವರ ಎಡಗೆನ್ನೆ ಸುಮಾರು 3 ಇಂಚು ಭಾಗವಾಗಿದ್ದು, ಒಂದೆರೆಡು ಹಲ್ಲುಗಳು ಮುರಿದು ಹೋಗಿವೆ. ಎರಡು ಬೆರಳು ತುಂಡಾಗಿವೆ.

ಸ್ವಾತಿ ದೀಕ್ಷಿತ್‌ ಅವರ ರಕ್ಷಣೆಗೆ ಬಂದ ಬಂದ ವೆಂಕಟೇಶ್‌ಗೌಡ ಅವರ ತಲೆಗೂ ಮಚ್ಚಿನೇಟು ಬಿದ್ದಿದೆ. ಅವರಿಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಂಜುನಾಥನನ್ನು ಹಾಸನ ನಗರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.