ಠಾಣೆಗೆ ನುಗ್ಗಿ ಡಿವೈಎಸ್‌ಪಿ ಮೇಲೆ ಹಲ್ಲೆ: ವೈರಲ್
Team Udayavani, Dec 29, 2021, 3:02 PM IST
ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಹೋಬಳಿ ಕೇಂದ್ರದಲ್ಲಿನ ಠಾಣೆಗೆ ಭೇಟಿ ನೀಡಿದ ವೇಳೆ ಡಿವೈಎಸ್‌ಪಿ ಮುರಳೀಧರ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದ್ದುಇದರ ವಿಡಿಯೋ ಜಾಲ ತಾಣದಲ್ಲಿ ವೈರಲ್ ಆಗಿದೆ.
ಮಟ್ಟನವಿಲೆ ಗ್ರಾಮದಕೃಷ್ಣೇಗೌಡರ ಪುತ್ರ, ಎಐಟಿಯುಸಿ ಮುಖಂಡ ಕುಮಾರ್ ಹಾಗೂ ಇತರರಿಂದ ಡಿವೈಎಸ್‌ಪಿ ಮೇಲೆ ಹಲ್ಲೆ ಮಾಡಲಾಗಿದ್ದು ಕುಮಾರ್, ಸೇರಿದಂತೆಮೂವರು ಪುರುಷರು, ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಘಟನೆ ವಿವರ: ಹಿರೀಸಾವೆ ಠಾಣೆ ಮುಂದೆ ಕುಮಾರ್, ಇತರರು ಧರಣಿ ಮಾಡುತ್ತಿದ್ದ ಹಿನ್ನೆಲೆ ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ಡಿವೈಎಸ್‌ಪಿ ತೆರಳುವಾಗ ಹಿರೀಸಾವೆ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಠಾಣೆ ಹೊರಗೆ ಧರಣಿ ನಡೆಸುತ್ತಿದ್ದವರಲ್ಲಿ ಒಬ್ಬರು ಠಾಣೆ ಒಳಗೆ ಹೋಗಿ ತಮ್ಮ ಸಮಸ್ಯೆಯನ್ನು ಡಿವೈಎಸ್‌ಪಿಗೆ ತಿಳಿಸುವಂತೆ ಠಾಣೆ ಪೇದೆ ಹೇಳಿದ್ದಾರೆ.
ಕೂಡಲೇ ಕುಮಾರ್ ಧರಣಿ ನಿರತರನ್ನು ಒಟ್ಟಿಗೆ ಕರೆದುಕೊಂಡು ಠಾಣೆ ಒಳಗೆ ನುಗ್ಗಿ ಡಿವೈಎಸ್‌ಪಿ ಮುರಳೀಧರ್ ಕಾಲರ್ ಹಿಡಿದು ಎಳೆದಾಡಿರುವುದು, ಎದೆಗೆ ಥಳಿಸಿರುವುದು ಹಾಗೂ ಧರಣಿಯಲ್ಲಿ ಬಾವುಟದ ಕೋಲಿನಿಂದ ಹೊಟ್ಟೆಗೆ ಚುಚ್ಚಿರುವ ವಿಡಿಯೋ ಠಾಣೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಠಾಣೆಯಲ್ಲಿ ಹೆಚ್ಚಿನ ಸಿಬ್ಬಂದಿ ಇರದಿದ್ದರಿಂದ
ಅನಾಹುತ: ಡಿ.27 ರಂದು ತಾಲೂಕಿನ 20 ಗ್ರಾಪಂಕ್ಷೇತ್ರದಲ್ಲಿ ಚುನಾವಣೆ ಇದ್ದರಿಂದ ಠಾಣೆಯಲ್ಲಿಬೆರಳೆಣಿಕೆ ಮಂದಿ ಮಾತ್ರ ಪೊಲೀಸರು ಇರುವುದನ್ನುಗಮನಿಸಿ ಕೃತ್ಯವೆಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದುಈ ಬಗ್ಗೆ ಹಿರೀಸಾವೆ ಠಾಣೆಯಲ್ಲಿ ದೂರುದಾಖಲಾಗಿದೆ.
ಹಲ್ಲೆಗೆ ಹಿನ್ನೆಲೆ ಏನು? :
ಮಟ್ಟನಿವಲೆ ಗ್ರಾಪಂ ಸದಸ್ಯ ಅಶೋಕ್ ಹಾಗೂ ಕುಮಾರ್ ನಡುವೆ ಡಿ.27 ರಂದು ಜಮೀನಿನ ವಿಷಯವಾಗಿ ಗಲಾಟೆ ನಡೆದಿತ್ತು. ಈ ವೇಳೆ ಅಶೋಕ್‌ರ ಮೇಲೆ ಕುಮಾರ್ ಹಲ್ಲೆ ಮಾಡಿದ್ದಾರೆ. ಈ ವೇಳೆ ಅಶೋಕ್ ಪರಾರಿಯಾಗಿದ್ದರು. ತಕ್ಷಣ ಕುಮಾರ್ ಮಟ್ಟನವಿಲೆ ಹಾಗೂ ಹಿರೀಸಾವೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಅಶೋಕ್‌ನನ್ನು ಹುಡುಕಿದ್ದರು. ಅಲ್ಲಿ ಕಾಣಿಸದ ಹಿನ್ನೆಲೆ ಠಾಣೆ ಮುಂದೆ ಧರಣಿ ನಡೆಸಿದ್ದಾರೆ. ಈ ವೇಳೆ ಏಕಾಏಕಿ ಡಿವೈಎಸ್‌ಪಿ ಮೇಲೆ ಹಲ್ಲೆ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಈಗ್ಗೆ ತಿಂಗಳ ಹಿಂದೆ ಹಿರೀಸಾವೆ ವೃತ್ತ ನಿರೀಕ್ಷಕಿ ಭಾನು ಮಟ್ಟನವಿಲೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕುಮಾರ್ ಪೊಲೀಸರೊಂದಿಗೆ ಜಗಳವಾಡಿದ ವಿಡಿಯೋ ವೈರಲ್ ಆಗಿತ್ತು. ಸೇಡು ತೀರಿಸಿಕೊಳ್ಳಲು ಆರೋಪಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾನೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.