ಹಾಸ್ಟೆಲ್ ಗೆ ನುಗ್ಗಿ ಪುಂಡರ ಗ್ಯಾಂಗ್ ದಾಂಧಲೆ
Team Udayavani, Jul 6, 2023, 3:10 PM IST
ಆಲೂರು: ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್‌ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿ, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಸಂಜೆ 5.30ಕ್ಕೆ ಪಟ್ಟಣದ ಕೊನೆ ಪೇಟೆ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಅಂಬೇಡ್ಕರ್ ನಗರದ ಸಂಜು, ಅರ್ಜುನ್, ಸಂಜಯ್ ಸಚಿನ್, ರೂಪೇಶ್ ಸೇರಿ ಐವರ ಪುಂಡರ ಗುಂಪು ಕೈಯಲ್ಲಿ ಕ್ರಿಕೆಟ್ ಬ್ಯಾಟ್ ವಿಕೆಟ್ ಹಿಡಿದು ಏಕಾಏಕಿ ಹಾಸ್ಟೆಲ್‌ಗೆ ನುಗ್ಗಿ ಹಾಸ್ಟೆಲ್‌ನಲ್ಲಿದ್ದ ಚೇರ್, ಟೇಬಲ್ ಮುರಿದು ಹಾಕಿದ್ದಾರೆ.
ಕೆಲ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಗಾಯಾಳು ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋಡಿಸಿ¨ªಾರೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಆನಂದ ಆಲೂರು ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ವೃತ್ತ ನಿರೀಕ್ಷಕರು ಹಾಸ್ಟೆಲ್‌ಗೆ ಬೇಟಿ ನೀಡಿ ಸಿ.ಸಿ.ಟೀವಿ ಪರಿಶೀಲಿಸಿದ್ದಾ ರೆ. ಹಲ್ಲೆಗೆ ಕಾರಣರಾದ ಪುಂಡರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಾಸ್ಟೆಲ್ ಘಟನೆಗೂ ಮುನ್ನಾ ಆಲೂರು ಬಸ್ ಸ್ಟ್ಯಾಂಡ್‌ನಲ್ಲಿ ಹುಡುಗರ ಜೊತೆ ಗಲಾಟೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಕೆಲವು ಪುಂಡ ಯುವಕರು ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಸಣ್ಣಪುಟ್ಟ ಗಲಾಟೆ ಮಾಡುತ್ತಾ ಜನರಲ್ಲಿ ಭಯ ಹುಟ್ಟಿಸಿ ಹವಾ ಮೇಂಟೈನ್ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಹದ್ದಿನ ಕಣ್ಣು ಹಿಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸರ್ಕಲ್ ಇನ್ಸೆ$³ಕ್ಟರ್ ಗಂಗಾಧರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.