ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ
Team Udayavani, May 27, 2020, 7:45 AM IST
ಬೇಲೂರು: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆ ಮತ್ತು ಪುರಸಭೆ ಜಂಟಿಯಾಗಿ ಡೆಂಘೀ ನಿಯಂಣತ್ರಣದ ಬಗ್ಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ ಕಾಯಿಲೆಗಳನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಅರಿವು ಮೂಡಿಸ ಬೇಕು. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರ ವಹಿಸ ಬೇಕು. ಸುತ್ತಲಿನ ಪರಿಸರವನ್ನು ಸ್ವತ್ಛವಾಗಿಡಬೇಕು. ಅನುಪಯುಕ್ತ ವಸ್ತುಗಳನ್ನು ಎಲ್ಲಂದರಲ್ಲಿ ಬಿಸಾಡ ಬಾರದು ಟೈರು ಎಳನೀರು ಚಿಪ್ಪು ಇನ್ನಿತರೆ ವಸ್ತಗಳಲ್ಲಿ ನೀರು ಸಂಗ್ರಹವಾಗದಂತೆ ನಿಗಾ ವಹಿಸಬೇಕು ಎಂದರು.
ಕುಡಿವ ನೀರು ಶೇಖರಣೆ ಮಾಡುವ ಪಾತ್ರೆಗಳನ್ನು ತೊಳೆದು ಒಣಗಿಸಿ ನೀರು ತುಂಬ ಬೇಕು ನೀರು ತುಂಬಿದ ಡ್ರಮ್‌ಗಳನ್ನು ಸ್ವತ್ಛವಾದ ಬಟ್ಟೆಯಿಂದ ಮುಚ್ಚಬೇಕು ಎಂದು ಹೇಳೀದರು. ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್.ಮಂಜುನಾಥ್ ಮಾತನಾಡಿ, ಪುರಸಭೆಯಿಂದ ಪಟ್ಟಣದ 23 ವಾರ್ಡ್‌ಗಳಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ಕರಪತ್ರಗಳ ಮೂಲಕ ಅರಿವು ಮೂಡಿಸ ಲಾಗುತ್ತಿದೆ ಎಂದರು.
ಪಟ್ಟಣದಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿದ್ದು ಕಸ ವಿಂಗಡನೆ ಖಾಲಿ ನಿವೇಶನ ಮತ್ತು ಪಾರ್ಕ್ ಗಳಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಲಾಗಿದೆ. ಚರಂಡಿಗೆ ರಾಸಾಯನಿಕ ಸಿಂಪಡಿಸಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲಾಗಿದೆ ಎಂದರು. ತಹಶೀಲ್ದಾರ್ ನಟೇಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ಆರೋಗ್ಯ ಇಲಾಖೆ ಸಿಬಂದಿಗಳಾದ ಕೃಷ್ಣಪ್ಪ, ಆಯುಷ್ ವೈದ್ಯರಾದ ಗೀತಾ, ಹಬೀಬುಲ್ಲಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.