ಆಯುಷ್ಮಾನ್ ಭಾರತ್ ಯೋಜನೆಯಿಂದ 10 ಕೋಟಿ ಜನರಿಗೆ ಲಾಭ: ಸಚಿವ ಕೆ.ಗೋಪಾಲಯ್ಯ
Team Udayavani, Jun 3, 2022, 2:36 PM IST
ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜ್ವಲ ಯೋಜನೆ ಮೂಲಕ ದೇಶದ ಎಂಟು ಕೋಟಿ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಿದ ಶ್ರೇಯಸ್ಸು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.
ಕೇಂದ್ರದಲ್ಲಿ ಪ್ರಧಾನಿ ಮೋದಿಯವರು ಎಂಟು ವರ್ಷ ಆಡಳಿತ ನಡೆಸಿದ್ದು, ಅವರು ಮಾಡಿರುವ ಸಾಧನೆಯನ್ನು ಜನರಿಗೆ ತಿಳಿಸುವುದು ಪಕ್ಷದ ಕರ್ತವ್ಯವಾಗಿದೆ. 2014 ರಲ್ಲಿ ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಬಿಜೆಪಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು. ಐದು ವರ್ಷ ಸುದೀರ್ಘ ಆಡಳಿತದ ಬಳಿಕ 282 ಇದ್ದ ಬಿಜೆಪಿ ಸಂಸತ್ ಸದಸ್ಯರ ಸ್ಥಾನ 306 ಕ್ಕೆ ಏರಿಗೆ ಆಯಿತು. ಹೀಗೆ ಮೂರು ದಶಕದ ನಂತರ ಕೇಂದ್ರದಲ್ಲಿ ಒಂದೇ ಪಕ್ಷ ಎರಡು ಬಾರಿ ಅಧಿಕಾರಕ್ಕೆ ಬಂದಿರುವುದು ಮೋದಿಯವರ ಜನಪ್ರಿಯತೆಗೆ ಇರುವ ಸಾಕ್ಷಿ ಎಂದರು.
ಬಡತನದ ಹಿನ್ನೆಲೆಯಲ್ಲಿ ಬಂದ ಮೋದಿವರು ದೇಶದಲ್ಲಿ ಭ್ರಷ್ಟಾಚಾರ ರಹಿತ ಅಡಳಿತ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಚಿಂತನೆ ಮಾಡಿದೆ, ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡಿದೆ. ಅಹಾರ ಧಾನ್ಯ ಗಳ ಉತ್ಪಾದನೆ 315 ಮಿಲಿಯನ್ ಟನ್‌ಗೆ ಏರಿಕೆ ಕಂಡಿದೆ. ಭತ್ತದ ಬೆಂಬಲ ಬೆಲೆಯನ್ನು 1310 ರಿಂದ 1940 ಕ್ಕೆ ಏರಿಕೆ ಮಾಡಲಾಗಿದೆ. ರಾಗಿಗೆ 1650 ಇದ್ದ ಬೆಲೆಯನ್ನು 3375 ಏರಿಕೆ ಮಾಡಿರುವುದೇ ಇದೇ ನರೇಂದ್ರ ಮೋದಿಯವರ ಸರ್ಕಾರ. ಜನಧನ್ ಯೋಜನೆ ಮೂಲಕವೂ ಬಡವರಿಗೆ ನೇರವಾಗಿ ಖಾತೆಗೆ ಹಣ ಸಂದಾಯ ಮಾಡಿ ನೆರವಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರೀತಂಗೌಡ, ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಲಹಳ್ಳಿ ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.