ಮರಿಯಾನೆ ಸಾವು: ಕದಲದ ಕಾಡಾನೆ ಹಿಂಡು


Team Udayavani, Sep 27, 2018, 4:15 PM IST

.jpg

ಸಕಲೇಶಪುರ: ಜನಿಸಿದ ಕೆಲವೇ ಗಂಟೆಗಳಲ್ಲಿ ಭತ್ತದ ಗದ್ದೆಯ ಕೆಸರಿನಲ್ಲಿ ಸಿಲುಕಿ ಕಾಡಾನೆಯ ಮರಿ ಯೊಂದು ಮೃತಪಟ್ಟಿದ್ದು, ಇದರಿಂದ ದುಖ ತಾಳಲಾರದೇ ತಾಯಿ ಆನೆ ಮೃತದೇಹದ ಸಮೀಪವೇ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಕೊತ್ತನಹಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಯಸಳೂರು ಹೋಬಳಿ ಕೊತ್ತನಹಳ್ಳಿ ಸಮೀಪದ ತಿಮ್ಮೇಗೌಡರ ಭತ್ತದ ಗದ್ದೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಮರಿ ಹಾಕಿದ್ದು, ಕೆಲವೇ ಗಂಟೆಗಳಲ್ಲಿ ಮರಿ ಕೆಸರಿನಲ್ಲಿ ಸಿಲುಕಿ ಹೊರ ಬರಲು ಸಾಧ್ಯವಾಗದೆ ಸಾವನ್ನಪ್ಪಿದೆ. ಇದರಿಂದ ನೊಂದ ತಾಯಿ ಆನೆ ಸ್ಥಳ ಬಿಟ್ಟು ಹೋಗದೆ ಅಕ್ರಂದನ ಮಾಡುತ್ತಿತ್ತು. ಬುಧವಾರ ಮಧ್ಯಾಹ್ನ ತಾಯಿ ಆನೆ ಮರಿಯಾನೆಯ ಮೃತ ದೇಹವನ್ನು ಕೆಸರಿನಿಂದ ಹೊರಗೆಳೆದು ಪಕ್ಕದ ಬದಿಗೆ ತಂದು ರೋದಿಸುತ್ತಿತ್ತು. ಹತ್ತಿರಕ್ಕೆ ಯಾರನ್ನೂ ಬಿಟ್ಟಿಕೊಳ್ಳಲಿಲ್ಲ.

ಕಾಡಾನೆ ಹಿಂಡು: ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಮುಂಜಾನೆಯಿಂದಲೇ ಕಾಡಾನೆಗಳ ಹಿಂಡನ್ನು ಓಡಿಸಲು ಪಟಾಕಿ ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದರೂ ಸಹ ತಾಯಿ ಆನೆ ಸ್ಥಳದಿಂದ ಕದಲಲಿಲ್ಲ. ತಾಯಿ ಆನೆಯೊಂದಿಗೆ ಇದ್ದ ಕಾಡಾನೆಗಳ ಹಿಂಡು ಮಧ್ಯಾಹ್ನದ ವೇಳೆಗೆ ಗುಂಪಿನಿಂದ ಬೇರ್ಪಟಿದ್ದು, ಪುನಃ ಸಂಜೆಯ ವೇಳೆಗೆ ಇತರ ಕಾಡಾನೆಗಳ ಹಿಂಡು ತಾಯಿ ಆನೆಯೊಂದಿಗೆ ಸೇರಿದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಹರ ಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ.

ಮತ್ತೂಂದು ಘಟನೆ: ಕಳೆದ 15 ದಿನಗಳ ಹಿಂದೆ ಯಷ್ಟೆ ಚಿಕ್ಕಕಲ್ಲೂರು ಸಮೀಪ ಇದೇ ರೀತಿಯ ಕೆಸರಿನಲ್ಲಿ ಸಿಲುಕಿ ಮರಿಯಾನೆಯೊಂದು ಮೃತ ಪಟ್ಟಿತ್ತು. ಇದು ಜನಮಾನಸದಿಂದ ಹೊರ ಬರುವ ಮುನ್ನವೇ ಮತ್ತೂಮ್ಮೆ ಈ ರೀತಿಯ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
 
ಕಾರ್ಯಾಚರಣೆ ಮುಂದೂಡಿಕೆ: ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ ಲಿಂಗರಾಜು, ಯಸಳೂರು ವಲಯ ಅರಣ್ಯಾಧಿಕಾರಿ ಅಭಿಷೇಕ್‌, ಅರಣ್ಯ ಇಲಾಖೆ ವೈದ್ಯಾಧಿಕಾರಿ ಮುರಳಿ ಸೇರಿದಂತೆ ಇನ್ನಿತ ರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸಂಜೆಯ ವೇಳೆಗೆ ಕತ್ತಲು ಆವರಿಸಿದ್ದರಿಂದ ಕಾರ್ಯಾ ಚರಣೆಯನ್ನು ಗುರುವಾರಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.