ಬಾಲ್ಯವಿವಾಹ ದುಷ್ಪರಿಣಾಮ ಅರಿವಿರಲಿ
Team Udayavani, May 24, 2020, 6:09 AM IST
ಹಾಸನ: ಜಿಲ್ಲೆಯ ಎಲ್ಲ ಪ್ರೌಢ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳು, ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಬಗ್ಗೆ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಯಂತ್ರಣದ ಸಾಮಾನ್ಯ ಸಮಿತಿ ಸಭೆ ನಡೆಸಿ ಮಾತನಾಡಿದರು.
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದರ ಮಾಹಿತಿಯುಳ್ಳ ಕರಪತ್ರಗಳನ್ನು ಸಿದಟಛಿಪಡಿಸಿ ಗ್ರಾಮ ಪಂಚಾಯಿತಿಗಳಿಗೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಲಗತ್ತಿಸಬೇಕು ಎಂದು ಹೇಳಿದ್ದಾರೆ. ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಬಾಲ್ಯ ವಿವಾಹ ಕುರಿತು ಸುಳಿವು ಸಿಕ್ಕರೆ ಶಿಶು ಅಭಿವೃದ್ಧಿ ಜನಾಧಿ ಕಾರಿ ಗಳಿಗೆ ಹಾಗೂ ಚೈಲ್ಡ್‌ಲೈನ್‌ಗೆ ತಿಳಿಸುವ ಸಂಬಂಧ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯ ಕರ್ತೆಯರಿಗೆ ಸಭೆ ನಡೆಸಿ ಮಾಹಿತಿ ನೀಡಬೇಕು.
ಸ್ತ್ರೀ ಶಕ್ತಿ ಸಂಘಗಳನ್ನು ಸೇರಿಸಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ನಡೆದಿರುವ ಬಾಲ್ಯ ವಿವಾಹದ ಅಂಕಿ ಅಂಶಗಳನ್ನು ನಿರಂತರವಾಗಿ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದಟಛಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ನಿರೂಪಣಾಧಿಕಾರಿ ಎ.ಜೆ. ಮಲ್ಲೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾಂತರಾಜು, ಪ್ರಚೋದನಾ ಸಂಸ್ಥೆಯ ನಿರ್ದೇಶಕ ಪೌಲಸ್ ಹಾಗೂ ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.