ಅಪರಾಧ ಪ್ರಕರಣ ನಿಯಂತ್ರಿಸಲು ಜಾಗೃತರಾಗಿ
Team Udayavani, Sep 28, 2020, 4:15 PM IST
ಹಾಸನ: ಅಪರಾಧ ಪ್ರಕರಣ ನಿಯಂತ್ರಿಸಲು ಪೊಲೀಸರು ರಾತ್ರಿ ವೇಳೆ ಪೂರ್ಣ ಪ್ರಮಾಣದಲ್ಲಿ ಜಾಗೃತರಾಗಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಖಡಕ್ ಎಚ cರಿಕೆ ನೀಡಿದ್ದಾರೆ.
ನಗರದ ಎನ್.ಆರ್. ವೃತ್ತದಲ್ಲಿರುವ ನಗರ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಿದ ಅವರು, ರಾತ್ರಿ ಸಮಯದಲ್ಲಿ ಅನಾವಶ್ಯಕವಾಗಿ ಓಡಾಡುವ ಪೋಲಿ, ಪುಂಡರು, ಕುಡುಕರು, ಅನುಮಾನಾಸ್ಪದವಾಗಿ ಓಡಾಡುವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮನೆಗಳ್ಳರ ಮತ್ತಿತರ ಅಪರಾಧ ಹಿನ್ನೆಲೆಯುಳ್ಳವರನ್ನು ಪತ್ತೆ ಹಚ್ಚಿ ಬಿಸಿ ಮುಟ್ಟಿಸಬೇಕು ಎಂದು ತಾಕೀತು ಮಾಡಿದ್ದಾರೆ. ರಾತ್ರಿ ವೇಳೆ ಯಾರಾದರೂ ಅನುಮಾನಸ್ಪದವಾಗಿ ಓಡಾಡುವರು ಕಂಡು ಬಂದರೇ ತಕ್ಷಣ ವಿಚಾರಣೆ ಮಾಡಬೇಕು. ಅನಾವಶ್ಯಕವಾಗಿ ಓಡಾಡುವವರ ವಾಹನದ ಸಂಖ್ಯೆ, ಹೆಸರು ದಾಖಲಿಸಿ ಬಿಸಿ ಮುಟ್ಟಿಸುವಂತೆ ರಾತ್ರಿ ವೇಳೆ ಗಸ್ತುತಿರುಗುವ ಪೊಲೀಸರಿಗೆ ಸೂಚನೆ ನೀಡಿದರು.
ವಿಕೃತ ಕಾಮಿಗೆ ಹುಡುಕಾಟ: ನಗರದ ಉತ್ತರ ಬಡಾವಣೆಯ ಅಂಗಡಿಯಲ್ಲಿ ಕುಳಿತಿದ್ದ ಒಂಟಿ ಮಹಿಳೆಯ ಮುಂದೆ ವಿಕೃತವಾಗಿ ವರ್ತಿಸಿದ ಕಾಮುಕನ ಪತ್ತೆಗೆ ಪೊಲೀಸರು ಹುಟುಕಾಟ ಆರಂಭಿಸಿದ್ದಾರೆ. ಶನಿವಾರ ಮಧ್ಯಾಹ್ನ ಅಂಗಡಿಯ ಮಾಲಿಕನು ಕೆಲಸದ ನಿಮಿತ್ತ ಹೊರಗೆ ಹೋದಾಗ ತನ್ನ ಪತ್ನಿಯನ್ನು ಅಂಗಡಿಯಲ್ಲಿ ಬಿಟ್ಟು ಹೋಗಿದ್ದರು. ಆ ಸಂದರ್ಭದಲ್ಲಿ ಯುವಕನೊಬ್ಬ ಅಂಗಡಿ ಬಳಿ ಬಂದು ತನ್ನ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆ ತನ್ನ ಮೊಬೈಲ್‌ನಲ್ಲಿ ವಿಕೃತ ಯುವಕನ ಫೋಟೋ ಕ್ಲಿಕ್ ಮಾಡಿ ತನ್ನ ಪತಿಗೆ ತಕ್ಷಣ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಸ್ಥಳಕ್ಕೆ ಬಂದ ಪತಿ ಹಾಸನ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಪೊಲೀಸರು ಆರೋಪಿಯನ್ನು ಪತ್ತೆ ಮಾಡಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.