ಭವಾನಿ ರೇವಣ್ಣ ಚಿತ್ತ ಶಾಸಕಿಯಾಗುವತ್ತ!

Team Udayavani, Mar 18, 2021, 10:37 AM IST

ಭವಾನಿ ರೇವಣ್ಣ ಚಿತ್ತ ಶಾಸಕಿಯಾಗುವತ್ತ!

ಹಾಸನ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪತ್ನಿ, ಜಿಪಂ ಸದಸ್ಯೆ ಭವಾನಿ ಇತ್ತೀಚಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಹಾಸನದಲ್ಲಿ ಸಕ್ರಿಯ ರಾ ಗುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆಗೆ ಮುಂದಾಗಿದ್ದಾರೆಯೇ ಎಂಬ ಶಂಕೆ ಮೂಡಿದೆ.

ಕಳೆದ ಭಾನುವಾರ ಹಾಸನದ ಹುಣಸಿನಕೆರೆ ಬಡಾವಣೆಯಲ್ಲಿ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೆ ನಟ ದರ್ಶನ್‌ ಅವರನ್ನು ಆಹ್ವಾನಿಸಿ ಅದ್ಧೂರಿಯಾಗಿಕಾರ್ಯಕ್ರಮ ನಡೆಸಿದ್ದರು. ನಗರದ ಕೆಂಪು ಚೆಲುವಾ ಜಮ್ಮಣ್ಣಿ ಮಹಿಳಾ ಸಮಾಜದಕಟ್ಟಡ ನಿರ್ಮಾಣಕ್ಕೆ 25 ಲಕ್ಷ ರೂ. ನೆರವಿನ ವ್ಯವಸ್ಥೆ ಮಾಡಿ ಕಾಮಗಾರಿಗೆ ಸೋಮವಾರಚಾಲನೆ ನೀಡಿದ್ದರು. ಮಾ.19ರಂದು ವಿವಿಧ ಮಹಿಳಾ ಸಂಘ, ಸಂಸ್ಥೆಗಳನ್ನುಒಗ್ಗೂಡಿಸಿ ಹಾಸನದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ತಮ್ಮ ನೇತೃತ್ವದಲ್ಲಿಯೇ ವಿಶ್ವ ಮಹಿಳಾ ದಿನಾಚರಣೆಯನ್ನು ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳು ಭವಾನಿ ರೇವಣ್ಣ ಅವರ ಭವಿಷ್ಯದ ರಾಜಕೀಯ ದಿಕ್ಸೂಚಿ ಎಂದೇ ಅರ್ಥೈಸಲಾಗುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ. ಹಾಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭವಾನಿ ರೇವಣ್ಣ ಅವರು ಸ್ಪರ್ಧೆಗಿಳಿಯುವ ಸಿದ್ಧತೆ ಮಾಡಿ ಕೊಳ್ಳುತ್ತಿರಬಹುದೆಂಬ ಚರ್ಚೆ ನಡೆದಿದೆ. ಆದರೆ, ಭವಾನಿ ಅವರು ಈ ಕಾರ್ಯಕ್ರಮ ಗಳ ಹಿಂದೆ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುಟುಂಬದಲ್ಲಿ ಇನ್ನೂ ಚರ್ಚೆ ನಡೆದಿಲ್ಲ: ನಾನು ಶಾಸಕಿಯಾಗುವುದು ಬಿಡುವುದು ದೇವರ ಇಚ್ಛೆ. ಆದರೆ, ಈ ಕಾರ್ಯಕ್ರಮಗಳ ಹಿಂದೆ ರಾಜಕೀಯಉದ್ದೇಶವಿಲ್ಲ. ಮಹಿಳೆಯರ ಒತ್ತಾಸೆಯಂತೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದ ಅವರು, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಒಬ್ಬ ಶಾಸಕರು ಮಾಡಬಹುದಾದಷ್ಟು ಕೆಲಸವನ್ನು ಮಾಡಿದ್ದೇನೆ. 5 ವರ್ಷಗಳ ರಾಜಕೀಯ ಸೇವೆ ತೃಪ್ತಿ ತಂದಿದೆ. ಮುಂದಿನ ಮೇನಲ್ಲಿ ಜಿಪಂ ಚುನಾವಣೆ ನಡೆಯಲಿದ್ದು, ಚುನಾವಣೆ ಸ್ಪರ್ಧೆಯ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ನಮ್ಮ ಕುಟುಂಬದಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಭವಾನಿ ಹೇಳಿದರು.

ದರ್ಶನ ಭೇಟಿ ವಿಶೇಷ ಅರ್ಥ ಇಲ್ಲ: ಕಳೆದ ಭಾನುವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ನಟ ದರ್ಶನ್‌ ಪಾಲ್ಗೊಂಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದುಬೇಡ. ಸಂಸದ ಪ್ರಜ್ವಲ್‌ , ದರ್ಶನ್‌ 8 ವರ್ಷಗಳಿಂದಲೂ ಗೆಳೆಯರು. ಅಂಬರೀಶ್‌ ಪುತ್ರ ಅಭಿಷೇಕ್‌ ಕೂಡ ಬೆಂಗಳೂರಿನಲ್ಲಿ ಹಲವು ಬಾರಿ ನಮ್ಮ ಮನೆಗೆ ಬರುತ್ತಿದ್ದರು. ರಾಜಕೀಯ ಬೇರೆ, ಸ್ನೇಹ ಸಂಬಂಧಗಳು ಬೇರೆ ಎಂದು ಹೇಳಿದರು.

ಸ್ಪರ್ಧೆ ಬಗ್ಗೆ ಚಿಂತಿಸಿಲ್ಲ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಚಿಂತನೆ ಮಾಡಿಲ್ಲ. ಮಹಿಳಾ ದಿನಾಚರಣೆಯ ಹಿಂದೆ ಅಂತಹ ಉದ್ಧೇಶಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಸುದ್ದಿಗೋಷ್ಠಿಯಲ್ಲಿದ್ದ ಹಲವು ಮಹಿಳೆಯರು ಭವಾನಿ ಮೇಡಂ ಮುಂದೆ ಶಾಸಕಿಯಾವುದು ಖಚಿತ ಎಂದು ಬಹಿರಂಗವಾಗಿಯೇ ಹೇಳಿದ್ದು ಮಾತ್ರ ಕುತೂಹಲ ಮೂಡಿಸಿದೆ.

ನಂಜುಂಡೇಗೌಡ.ಎನ್

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.