ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಗುರಿ
Team Udayavani, Feb 25, 2020, 3:00 AM IST
ಹೊಳೆನರಸೀಪುರ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನವಿಲೆ ಅಣ್ಣಪ್ಪ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ತಾಲೂಕು ಬಿಜೆಪಿ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಹೊಳೆ ನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲುವಿಗೆ ಶ್ರಮಿಸಲಾಗುವುದು ಎಂದರು.
ಲೋಕಸಭಾ ಚುನಾವಣೆಯಲ್ಲಿ 48 ಸಾವಿರ ಮತ: ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರ ಬಿಜೆಪಿ ಪಕ್ಷಕ್ಕೆ 48 ಸಾವಿರ ಮತಗಳನ್ನು ನೀಡಿದೆ ಎಂಬುದನ್ನು ಯಾರೊಬ್ಬರು ಮರೆಯುವಂತಿಲ್ಲ. ಇಷ್ಟೊಂದು ಮತಗಳು ಬಂದಿರುವುದಕ್ಕೆ ಕಾರಣಗಳನ್ನು ಹುಡುಕುತ್ತಾ ಹೋದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಹೊಂದಾಣಿಕೆ ರಾಜಕೀಯ ಮಾಡುತ್ತಿರುವುದು ಹಾಗೂ ಕುಟುಂಬ ರಾಜಕಾರಣದ ವಿರುದ್ಧ ಮತಗಳು ಚಲಾವಣೆಯಾಗಿವೆ ಎಂದರು.
ಈಗ ಬಂದಿರುವ ಮತಗಳೆಲ್ಲಾ ಬಿಜೆಪಿಯದಲ್ಲ, ಆದ್ದರಿಂದ ನಮಗೆ ಬಂದಿರುವ ಎಲ್ಲಾ ಮತಗಳು ಬಿಜೆಪಿ ಪಕ್ಷದ ಮತಗಳಾಗಿ ಪರಿವರ್ತನೆ ಯಾಗಬೇಕಾದರೆ ಪಕ್ಷದ ಮುಖಂಡರು ಗ್ರಾಮೀಣ ಮಟ್ಟದಲ್ಲಿ ಬಿಜೆಪಿ ಪಕ್ಷಕ್ಕೆ ಶಕ್ತಿ ತುಂಬುವಂತ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಬೆಳೆಯುತ್ತಿದೆ: ಹೊಳೆ ನರಸೀಪುರ ತಾಲೂಕಿನಲ್ಲಿ ಬಿಜೆಪಿ ಪಕ್ಷಕ್ಕೆ ಅಧ್ಯಕ್ಷರಾಗುವಂತೆ ಈ ಹಿಂದೆ ಬಲವಂತದಿಂದ ಪಟ್ಟ ಕಟ್ಟಬೇಕಿತ್ತು. ಆದರೆ ಇದೀಗ ಆ ಪರಿಸ್ಥಿತಿ ಬದಲಾಗಿದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿನ ರಾಜಕೀಯ ಪ್ರತಿಷ್ಠೆಯ ಕ್ಷೇತ್ರವಾದ ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಬೆಳೆಯುತ್ತಿದೆ ಎಂದರು.
ಬ್ಯಾನರ್ ನಾಶಕ್ಕೆ ಖಂಡನೆ: ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನಿಯೋಜಿತ ಅಧ್ಯಕ್ಷ ಎಚ್.ಕೆ.ಸುರೇಶ್ ಮಾತನಾಡಿ, ಬಿಜೆಪಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ತಳವೂರಿದೆ ಎಂಬುದನ್ನು ಅರಿತು ತಮಗೆ ಮುಂದಿನ ದಿನಗಳಲ್ಲಿ ಭವಿಷ್ಯವಿಲ್ಲ ಎಂಬ ಹತಾಶ ಭಾವನೆಯಿಂದ ಈ ಕಾರ್ಯಕ್ರಮಕ್ಕೆ ಪಟ್ಟಣದಲ್ಲಿ ಹಾಕಿದ್ದ ಬ್ಯಾನರ್‌ಗಳನ್ನು ಕೆಲ ಪುಂಡರು ಹರಿದುಹಾಕಿದ್ದಾರೆ. ಇದು ಆ ಪಕ್ಷದ ಹತಾಶ ಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಬಗ್ಗೆ ಜಿಲ್ಲಾ ಬಿಜೆಪಿ ಯಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಯಾವ ರೀತಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿರುವುದಾಗಿ ತಿಳಿಸಿದರು.
ತಳ ಮಟ್ಟದಿಂದ ಪಕ್ಷ ಸಂಘಟಿಸಿ: ನೂತನ ಮಂಡಲ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಮಳಲಿ ನಾರಾಯಣ್, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟಬೇಕಾದ ಅವಶ್ಯಕತೆ ಇದೆ. ಇದಕ್ಕಾಗ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸಹಕರಿಸಬೇಕು ಎಂದರು. ಬಿಜೆಪಿ ಕಾರ್ಯಕ್ರಮದ ಬ್ಯಾನರ್‌ಗಳನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ಇದನ್ನು ಕಂಡು ನಾವು ಸುಮ್ಮನೆ ಕೂರಿವುದಿಲ್ಲ. ಮುಂದಿನ ದಿನಗಳಲ್ಲಿ ಕ್ಷೇತ್ರದ ಯಾವೊಬ್ಬ ಶ್ರೀಸಾಮಾನ್ಯನಿಗೂ ಅನ್ಯಾಯ ವಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪಕ್ಷದ ಮುಖಂಡ ಕೆ.ಆರ್.ಸುನೀಲ್‌ಕುಮಾರ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆ ವೇಳೆ ಪಕ್ಷದ ಸಭೆಯಲ್ಲಿ ಮುಖಂಡರು ಪಕ್ಷದ ಕಾರ್ಯಕರ್ತರ ಬೆಂಬಲಕ್ಕೆ ಇರುವುದಾಗಿ ಘೋಷಣೆ ಮಾಡಿದ್ದರು. ಆದರೆ ಚುನಾವಣೆ ಕಳೆದ ನಂತರ ಯಾವೊಬ್ಬ ಮುಖಂಡರು ಹೊಳೆನರಸೀಪುರಕ್ಕೆ ಬರಲೇ ಇಲ್ಲ. ಅದಾದ ನಂತರ ಇಂದು ನೂತನ ಅಧ್ಯಕ್ಷರ ಅಧಿಕಾರ ಹಸ್ತಾಂತರಕ್ಕೆ ಆಗಮಿಸಿದ್ದೀರಿ. ಕೇವಲ ಕಾಟಾಚಾರಕ್ಕೆ ಸಭೆ ನಡೆಸುವುದು ಬೇಡ. ನಿಮ್ಮ ಭರವಸೆ ನೆಚ್ಚಿಕೊಂಡು ಇಲ್ಲಿ ಪಕ್ಷದ ಮುಖಂಡರು ಕೆಲಸ ನಿರ್ವಹಿಸಲು ಮುಂದಾದರೆ ಸುಖಾ ಸುಮ್ಮನೆ ಇಲ್ಲದ ಸಂಕಷ್ಟ ಅನುಭವಿಸ ಬೇಕಾಗುತ್ತದೆ ಎಂದು ಆಪಾದಿಸಿದರು.
ಸಭೆಯನ್ನು ಉದ್ದೇಶಿಸಿ ರಾಜ್ಯ ಕಾರ್ಯದರ್ಶಿ ಮೈಲಾ ರವಿಶಂಕರ್ ಮಾತನಾಡಿ, ಪಕ್ಷದ ಬಲವರ್ಧನೆಗೆ ತಾವು ಸೇರಿದಂತೆ ಪಕ್ಷದ ಹೈಕಮಾಂಡ್ ನಿಮ್ಮ ಬೆಂಗಾವಲಾಗಿ ಇರಲು ತಿರ್ಮಾನಿಸಿದೆ, ಆದ್ದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷದ ಬೆಳವಣಿಗೆಗೆ ಸಹಕರಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಕ್ಷದ ನಿಕಟಪೂರ್ವ ಮಂಡಲ ಅಧ್ಯಕ್ಷ ರವಿಕಮ್ಮರಿಗಿ ಅವರು ನೂತನ ಮಂಡಲದ ಅಧ್ಯಕ್ಷತೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧಡೆಗಳಿಂದ ತಾಲೂಕು ಬಿಜೆಪಿ ಅಧ್ಯಕ್ಷರು ಸೇರಿದಂತೆ ಹೊಳೆನರಸೀಪುರ ಬಿಜೆಪಿ ಮುಖಂಡರು ಹಾಜರಿದ್ದರು. ಪಕ್ಷದ ತಾಲೂಕು ಘಟಕದ ಕಾರ್ಯದರ್ಶಿ ನಾಗರಾಜ್ ಪಟೇಲ್ ನಿರೂಪಿಸಿದರು. ಮೈಲಾರಯ್ಯ ಸ್ವಾಗತಿಸಿದರು.
ಈಗ ಅಧಿಕಾರದಲ್ಲಿರುವ ಶಾಸಕರಿಗೆ ತಮ್ಮನ್ನು ಬಿಟ್ಟರೆ ಬೇರಾರೂ ಇಲ್ಲ ಎಂಬ ಮನೋಭಾವ ಇದೆ. ಪಕ್ಕದ ಕೃಷ್ಣರಾಜಪೇಟೆ ತಮ್ಮ ಪಕ್ಷದ ಮನೆ ಎಂದು ಹೇಳುತ್ತಿದ್ದರು. ಆದರೆ ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ ನಂತರ ಅವರಲ್ಲಿದ್ದ ಭ್ರಮೆ ಬಿಟ್ಟು ಹೋಗಿದೆ.
-ನವಿಲೆ ಅಣ್ಣಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.