ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆಯಲಿದೆ: ಸೋಮಣ್ಣ
Team Udayavani, Dec 22, 2017, 3:04 PM IST
ಹಾಸನ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಸನ ಜಿಲ್ಲೆಯಲ್ಲಿ ಖಾತೆ ತೆರೆಯಲಿದೆ ಎಂದು ಹಾಸನ ಜಿಲ್ಲಾ ಹಿಜೆಪಿ ಉಸ್ತುವಾರಿ ಮಾಜಿ ಸಚಿವ ಸೋಮಣ್ಣ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಜನಪರ ಆಡಳಿತವನ್ನು ಈಗಾಗಲೇ ಜನತೆ ಮೆಚ್ಚಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಸರ್ಕಾರವು ಅಧಿಕಾರ ಹಿಡಿದ ತಕ್ಷಣ ಹಾಸನ ಜಿಲ್ಲೆಯ ನೀರಾವರಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 2ನೇ ಸಮೀಕ್ಷೆ ಮಾಡಲಾಗುವುದು. ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಬೆಳೆಗಳು ನಾಶವಾಗಿದೆ. ವಿಶೇಷವಾಗಿ ತೆಂಗು ಬೆಳೆ ನಾಶವಾಗಿದ್ದು ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಹಣವನ್ನು ಪ್ರವಾಸಕ್ಕೆ ವೆಚ್ಚ ಮಾಡುತ್ತಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸದ ಹೆಸರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅಲ್ಲಿ ಸ್ಪರ್ಧೆಗಿಳಿದರೆ ಫಲಿತಾಂಶ ಏನಾಗಲಿದೆ ಎಂಬ ಮಾಹಿತಿ ಪಡೆದು ಕೊಂಡಿರುವ ಅವರು ಚಾಮುಂಡೇಶ್ವರಿ ಬಿಟ್ಟು ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುವರು ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗಾರಮೇಶ್, ಉಪಾಧ್ಯಕ್ಷ ಪ್ರೀತಂ ಜೆ.ಗೌಡ, ಪ್ರಧಾನ ಕಾರ್ಯದರ್ಶಿ ಕಟ್ಟಾಯ ಬಿ. ಆಶೋಕ್, ಪಕ್ಷದ ಹಿರಿಯ ಮುಖಂಡರಾದ ಮಾಜಿ ಶಾಸಕ ಬಿ.ವಿ. ಕರೀಗೌಡ, ಜಿಲ್ಲಾ ಬಿ.ಆರ್. ಗುರುದೇವ್, ಹುಲ್ಲಳ್ಳಿ ಸುರೇಶ್, ರೇಣುಕುಮಾರ್, ಲಕ್ಷ್ಮಣ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.