ಹಂಚೂರು ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ;  ಜೆಡಿಎಸ್ ಗೆ ಬಾರಿ ಮುಖಭಂಗ


Team Udayavani, Mar 9, 2022, 6:05 PM IST

Untitled-1

ಆಲೂರು: ಆಲೂರು ತಾಲ್ಲೂಕು ಕುಂದೂರು ಹೋಬಳಿ ಹಂಚೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೇಶವಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಜಯಮ್ಮ ಆಯ್ಕೆಯಾದರು.

ತಾಲೂಕಿನ ಕುಂದೂರು ಹೋಬಳಿ ಹಂಚೂರು ಗ್ರಾಮ ಪಂಚಾಯಿತಿಯಲ್ಲಿ 11 ಸ್ಥಾನಗಳ ಸಂಖ್ಯಾ ಬಲ ಹೊಂದಿದ್ದು ಇಂದು ಮದ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ಚುನಾವಣಾ ಅಧಿಕಾರಿ ತಾಲೂಕು ತಹಶೀಲ್ದಾರ್ ಶಿರೀನ್ ತಾಜ್ ಅವರು ಚುನಾವಣಾ  ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಅದ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕೇಶವಮೂರ್ತಿ ಹಾಗೂ ಜೆಡಿಎಸ್  ಬೆಂಬಲಿತ ಅಭ್ಯರ್ಥಿಯಾಗಿ ಧರ್ಶಿನಿ ನಾಮಪತ್ರ ಸಲ್ಲಿಸಿದ್ದರು ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಕೇಶವಮೂರ್ತಿ 6 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾದರು ದರ್ಶನಿ ಕೇವಲ 5 ಮತಗಳನ್ನು ಪಡೆದು ಸೋಲುಂಡರು ಅದೇರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಕ್ಕೆ ಮೀಸಲಾದ ಹಿನ್ನೆಲೆಯಲ್ಲಿ  ಜಯಮ್ಮ ನಾಮಪತ್ರ ಸಲ್ಲಿಸಿದ್ದರು ಅದ್ದರಿಂದ  ಚುನಾವಣಾಧಿ ತಹಶೀಲ್ದಾರ್ ಶಿರೀನ್ ತಾಜ್‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯಾಗಿದ್ದಾರೆಂದು  ಘೋಷಿಸಿದರು.

ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮಾತಿನ ಚಕಮಕಿ : ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಕ್ರಿಯೆಗೆ ಭಾಗವಹಿಸಲು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಕಾರಿನಲ್ಲಿ ಬಂದಿಳಿದರು ಬಂದಿಳಿಯುತ್ತಿದ್ದಂತೆ ಜೆಡಿಎಸ್  ಕಾರ್ಯಕರ್ತರು ಕಾರಿಗೆ ಮುತ್ತಿಗೆ  ಹಾಕಲು ಮುಂದಾದರು ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿತು ಪೋಲಿಸರ ಮದ್ಯ ಪ್ರವೇಶದಿಂದ ಆಗಬಹುದಾಗಿದ್ದ ದೊಡ್ಡ ಗಲಾಟೆ ತಿಳಿಗೊಳಿಸಿ ಎಚ್ಚರಿಕೆ ನೀಡಿದರು.

ಹಂಚೂರು ಗ್ರಾಮ ಪಂಚಾಯಿತಿ ನೂತನ ಅದ್ಯಕ್ಷ  ಕೇಶವಮೂರ್ತಿ ಮಾತನಾಡಿ ಸದಸ್ಯರು,ಜನಸಾಮಾನ್ಯರ ಹಾಗೂ ಪಕ್ಷದ ಮುಖಂಡರ ಸಹಕಾರದಿಂದ ಪಕ್ಷ ಹಾಗೂ ಜಾತಿ ಬೇದ ಮಾಡದೇ ಹಂಚೂರು ಗ್ರಾಮ ಪಂಚಾಯಿತಿ ಎಲ್ಲಾ ಗ್ರಾಮಗಳಿಗೂ ಅವಶ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಲಾಗುವುದು ಎಂದರು.

ಚುನಾವಣಾ ಘೋಷಣೆ ಯಾಗುತ್ತಿದ್ದಂತೆ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ,ನರೇಂದ್ರ ಮೋದಿ,ಹಾಗೂ ಬಸವರಾಜ್ ಬೊಮ್ಮಾಯಿ ಅವರ ಪರವಾಗಿ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್  ಮಾತನಾಡಿ ಕೇಂದ್ರದ ನರೇಂದ್ರ ಮೋದಿಜೀ ಹಾಗೂ ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಾ ಜನಮನ್ನಣೆ ಗಳಿಸಿದೆ ತಾಲ್ಲೂಕಿನಲ್ಲಿ ಕಳೆದ ವರ್ಷ ನಡೆದ 14 ಗ್ರಾಮ ಪಂಚಾಯಿತಿಗಳ ಪೈಕಿ ಸುಮಾರು 8 ಗ್ರಾಮ ಪಂಚಾಯಿತಿಗಳು ಬಿಜೆಪಿ ಪಾಲಾಗಿದೆ ಹಂಚೂರು ಗ್ರಾಮ ಪಂಚಾಯಿತಿಯಲ್ಲಿ ಇದುವರೆವಿಗೂ ಜೆಡಿಎಸ್ ಆಡಳಿತ ನಡೆಸಿತ್ತು ಈ ಬಾರಿ ಗ್ರಾಮ ಪಂಚಾಯಿತಿ  ಚುನಾವಣೆಯಲ್ಲಿ ಜೆಡಿಎಸ್ ಗಿಂತ ಹೆಚ್ಚು ಸದಸ್ಯರನ್ನು ಪಡೆಯುವ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ ಮುಂದಿನ ದಿನಗಳಲ್ಲಿ ತಾಲ್ಲೂಕು,ಜಿಲ್ಲಾ ಪಂಚಾಯಿತಿ,ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ನಮ್ಮ ಪಕ್ಷ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗೆಲುವು ನಮ್ಮದಾಗಲಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಇರುವುದರಿಂದ ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಈ ಭಾಗದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ಕೋಡಲಾಗುವುದು ಎಂದರು.

ಬಿಜೆಪಿ ಹಿರಿಯ ಮುಖಂಡ ಮಂಜುನಾಥ್ ಮಾತನಾಡಿ ಬಿಜೆಪಿ ಪಕ್ಷ ಹಂಚೂರು ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯುವ ಮೂಲಕ ಜೆಡಿಎಸ್ ನ ಅಧಪತನ ಶುರುವಾಗಿದೆ ನರೇಂದ್ರ ಮೋದಿಜಿ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಆಡಳಿತ ವೈಕರಿಯ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಈ ಭಾಗದಲ್ಲಿ ಇದುವರೆವಿಗೂ ಜೆಡಿಎಸ್ ಗೆ ಮತ ನೀಡಿದ್ದಾರೆ ಅದರೆ ಅಭಿವೃದ್ಧಿ ಮಾತ್ರ ಶೂನ್ಯ ಈ ಭಾಗದ ಜನರ ಮೂಗಿಗೆ ತುಪ್ಪ ಸವರುತ್ತಾ ಜನಸಾಮಾನ್ಯರನ್ನು ವಂಚಿಸಿದ್ದಾರೆ ಮುಂದಿನ ದಿನಗಳಲ್ಲಿ ಹಂಚೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಬಿಜೆಪಿ ಸಹಕಾರ ನೀಡಲಿದೆ ಎಂದರು.

ಬಿಜೆಪಿ ಯುವ ಮುಖಂಡ ಕಟ್ಟೆಗದ್ದೆ ನಾಗರಾಜ್ ಮಾತನಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಅದೇಶದ ಮೇರೆಗೆ ಹಂಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡಲು ಸೂಚಿಸಿದ್ದರು ಅದರಂತೆ ಬಿಜೆಪಿ ಸಂಘಟನೆ ಮಾಡುವ ಜೊತೆಗೆ ಹಂಚೂರು ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯಲಾಗಿದೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಅಭಿವೃದ್ಧಿ ಆಗಬೇಕಾಗಿದೆ ಬಿಜೆಪಿ ಜಿಲ್ಲಾ ಹಾಗೂ ತಾಲ್ಲೂಕು ಹಿರಿಯ ಮುಖಂಡ ಸಹಕಾರದಿಂದ ಅಭಿವೃದ್ಧಿ ಮಾಡಲಾಗುವುದು ಜನಸಾಮಾನ್ಯರು ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್,ಬಿಜೆಪಿ ಹಿರಿಯ ಮುಖಂಡ ಸಿಮೆಂಟ್ ಮಂಜುನಾಥ್,ಎ.ಹೆಚ್.ರಮೇಶ್,ಲೋಕೇಶ್ ಕದಾಳು,ರಾಜಕುಮಾರ್ ಸಕಲೇಶಪುರ,ಲೋಕೇಶ್ ಕಣಗಾಲ್,ಭರಣ್ ಕಣದಹಳ್ಳಿ,ಅಜಿತ್ ಚಿಕ್ಕಣಗಾಲ್,ಗಣೇಶ್ ಧರ್ಮಪುರಿ,ರುದ್ರೇಗೌಡ ಬಾಲಲೋಚನಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.