ಬೂಕನಬೆಟ್ಟದ ರಂಗನಾಥಸ್ವಾಮಿ ವೈಭವದ ಬ್ರಹ್ಮರಥೋತ್ಸವ
Team Udayavani, Jan 20, 2020, 3:00 AM IST
ಚನ್ನರಾಯಪಟ್ಟಣ/ಹಿರೀಸಾವೆ: ತಾಲೂಕಿನ ಹಿರೀಸಾವೆ ಹೋಬಳಿಯ ಇತಿಹಾಸ ಪ್ರಸಿದ್ಧ ಬೂಕನಬೆಟ್ಟದಲ್ಲಿ ರಂಗನಾಥಸ್ವಾಮಿಯ 89ನೇ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆ ಬೆಟ್ಟದ ಮೇಲಿರುವ ವಿಗ್ರಹಕ್ಕೆ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ ಮಾಡಲಾಯಿತು ಇದಾದ ಬಳಿಕ ವಿವಿಧ ಪುಷ್ಪ ಹಾಗೂ ಒಡವೆಗಳಿಂದ ಅಲಂಕಾರ ನೆರವೇರಿಸಿ ಪೂಜಾ ಕೈಂಕರ್ಯಗಳು ನೆರವೇರಿದವು, ನಂತರ ರಂಗನಾಥಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕರಿಸಿದ್ದು, ಅಡ್ಡಪಲ್ಲಕ್ಕಿಯಲ್ಲಿ ಮಂಗಳವಾದ್ಯದೊಂದಿಗೆ ಬೆಟ್ಟದ ಮೇಲಿಂದ ಉತ್ಸವದಲ್ಲಿ ಕರೆತಂದು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿದ್ದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ಬಳಿಕ ವೇದಿಕೆಯಲ್ಲಿ ಧಾರ್ಮಿಕ ಸಮಾರಂಭ ಜರುಗಿತು ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಭಕ್ತಿ, ಬಾವ ಹಾಗೂ ಧಾರ್ಮಿಕ ಆಚರಣೆಯಿಂದಲೇ ನಮ್ಮ ಸಂಸ್ಕೃತಿಯು ಹಿರಿಮೆ ಹೊಂದಿದೆ, ಇಂತಹ ದೈವ ಸೇವೆಗಳು ನಿರಂತರವಾಗಿ ಪ್ರತಿ ಗ್ರಾಮದಲ್ಲಿ ನಡೆಯುತ್ತಿರಬೇಕು ಎಂದು ಹೇಳಿದರು.
ಅಂತರ್ಜಲ ವೃದ್ಧಿ: ತಾಲೂಕಿನಲ್ಲಿ ಕಳೆದ ವರ್ಷ ತೀವ್ರ ಬರಗಾಲ ಕಾಣಿಸಿಕೊಂಡಿತ್ತು, ಆದರೆ ಪ್ರಸಕ್ತ ವರ್ಷ ವಾಡಿಕೆಯಂತೆ ಮಳೆಯಾಗಿದ್ದು, ರೈತರಿಗೆ ನಿರೀಕ್ಷೆಯಂತೆ ಉತ್ತಮ ಬೆಳೆ ಸಿಕ್ಕಿದೆ, ಏತನೀರಾವರಿ ಯೋಜನೆಯಡಿ ತಾಲೂಕಿನ ಸುಮಾರು ಹತ್ತಾರು ಕೆರೆ ಕಟ್ಟೆಗಳನ್ನು ತುಂಬಿಸಲಾಗಿದೆ ಇದರಿಂದ ನೂರಾರು ಗ್ರಾಮಗಳಿಗೆ ಅನುಕೂಲವಾಗಿದ್ದು, ಅಂತರ್ಜಲ ವೃದ್ಧಿಯಾಗುತ್ತಿದೆ ಎಂದರು.
ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಜಿ.ರಾಮಕೃಷ್ಣ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ತೋಟಿ ಜಯರಾಂ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಮಾಸೇಗೌಡ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಉಪಾಧ್ಯಕ್ಷ ಬಿ.ಸಿ.ಬೊಮ್ಮೇಗೌಡ, ದೇಗುಲದ ಪಾರುಪತ್ತೇದಾರ ರಂಗರಾಜ್, ಬೂಕ ಹಾಗೂ ಸುತ್ತಮುತ್ತಲ ಹತ್ತಾರು ಗ್ರಾಮದಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥಕ್ಕೆ ದವನ, ಬಾಳೆಹಣ್ಣು ಎಸೆದ ಭಕ್ತರು: ಮಧ್ಯಾಹ್ನ 12 ಗಂಟೆಯ ಶುಭ ಮೇಷಲಗ್ನ ಮುಹೂರ್ತದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಬ್ರಹ್ಮರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು. ತಕ್ಷಣ ಸಹಸ್ರಾರು ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ನೆರೆದಿದ್ದ ಭಕ್ತರು ಗೋವಿಂದ ಗೋವಿಂದ ಎಂಬ ಸ್ಮರಣೆಯೊಂದಿಗೆ ಭಕ್ತಿಬಾವದಲ್ಲಿ ತೇಲಿದರು. ರಥ ಸಾಗಿದಂತೆಲ್ಲಾ ಭಕ್ತರು ಬಾಳೆಹಣ್ಣು-ದವನ, ಹೂವು-ತುಳಸಿಪತ್ರೆಯನ್ನು ರಥಕ್ಕೆ ಎಸೆದು, ಕರ್ಪೂರ ಬೆಳಗಿ ಹರಕೆ ಸಲ್ಲಿಸಿದರು.
ಧಾರ್ಮಿಕ ಕಾರ್ಯಕ್ರಮ ಅಗತ್ಯ: ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಸನಾತನ ಧರ್ಮ ಉಳಿಯಬೇಕೆಂದರೆ ಹಿಂದೂ ಧರ್ಮದ ಆಚರಣೆಗಳು, ಜಾತ್ರೆಗಳು, ದೇವರ ಪೂಜೆ, ಗ್ರಾಮ ದೇವತೆ ಹಬ್ಬಗಳು ನಡೆಯಬೇಕು. ಸನಾತನ ಆಚರಣೆಗೆ ವಿಶ್ವದಲ್ಲಿ ಬಹಳ ಪ್ರಸಿದ್ಧಿ ಹೊಂದಿದ್ದು, ವಿದೇಶಿಗರೂ ನಮ್ಮ ಧರ್ಮವನ್ನು ಆಚರಣೆ ಮಾಡುತ್ತಿದ್ದಾರೆ. ಆದರೆ ನಮ್ಮ ನೆಲದಲ್ಲಿಯೇ ಇದನ್ನು ವಿರೋಧಿಸುವ ಅನೇಕ ಮಂದಿ ಇದ್ದಾರೆ. ಅವರಿಗೆ ಆ ದೇವರೇ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.