ಬಿಎಸ್‌ವೈ ದ್ವೇಷದ ರಾಜಕಾರಣ

Team Udayavani, Sep 20, 2019, 3:52 PM IST

hasan-tdy-1

ಹಾಸನ: ಮುಖ್ಯ ಎಂಜಿನಿಯರ ಹುದ್ದೆಗೆ ಬಡ್ತಿ ನೀಡುವಾಗ ಮುಖ್ಯಮಂತ್ರಿಯವರು ಜಾತಿ ರಾಜಕಾರಣ ಮಾಡಿದ್ದಾರೆ. ಒಂದು ಸಮುದಾಯದವರಿಗೆ ಉದ್ದೇಶಪೂರ್ವಕವಾಗಿ ಅವಕಾಶ ತಪ್ಪಿಸಿದ್ದಾರೆ. ಬಡ್ತಿ ನೀಡುವಲ್ಲಿ ಬಿಡ್ಡಿಂಗ್‌ ನಡೆದಿದೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ  ನಾಡಿದ ಅವರು, ವಿವಿಧ ಇಲಾಖೆಗಳ ಮುಖ್ಯ ಎಂಜಿನಿಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಒಂದೂವರೆ ತಿಂಗಳಿನಿಂದಲೂ ನಡೆದಿತ್ತು. 24 ಮುಖ್ಯ ಎಂಜಿನಿಯರ ಪಟ್ಟಿಯಲ್ಲಿ 17 ಮಂದಿಗೆ ಮಾತ್ರ ಬುಧವಾರ ಬಡ್ತಿ ನೀಡಿ ಇನ್ನುಳಿದ 7 ಜನರಿಗೆ ಬಡ್ತಿ ನೀಡಿಲ್ಲ. ಒಂದು ಸಮುದಾಯದವರಿಗೆ ಮುಖ್ಯ ಎಂಜಿನಿ  ಯರ್‌ ಹುದ್ದೆ ಸಿಗಬಾರದೆಂದು 17 ಜನರಿಗೆ ಬಡ್ತಿ ನೀಡಿ, 7 ಜನರಿಗೆ ಬಡ್ತಿ ನೀಡಿಲ್ಲ. ಈ ಏಳು ಜನರಲ್ಲಿ 4-5 ಮಂದಿ ಒಂದೇ ಸಮುದಾಯದವರು ಇದ್ದಾರೆ. ಹೀಗಾಗಿ 17 ಜನರಿಗೆ ಬಡ್ತಿ ನೀಡದೆ ತಡೆ ಹಿಡಿದ್ದಾರೆ.

ಒಂದು ಸಮುದಾಯವನ್ನು ( ಒಕ್ಕಲಿಗರು) ಗುರಿಯಾಗಿಟ್ಟುಕೊಂಡು ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ದೂರಿದರು. ಡಿಪಿಎಆರ್‌ ಅಧೀನ ಕಾರ್ಯದರ್ಶಿ ಮಂಜುಳಾ ಅವರು ಇದ್ದರೆ ಆಕ್ಷೇಪಣೆ ಎತ್ತುತ್ತಾರೆಂದು ಅವರನ್ನು ರಜೆ ಮೇಲೆ ಕಳುಹಿಸಿ ಬಡ್ತಿಪಟ್ಟಿಗೆ ಅನುಮೋದನೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಹಿರಂಗಪಡಿಸಲಿ: ಪಟ್ಟಿಯಲ್ಲಿದ್ದ 17 ಮಂದಿಗೆ ಬಡ್ತಿ ನೀಡಿ 7 ಜನರ ಬಡ್ತಿ ತಡೆ ಹಿಡಿದಿರುವುದೇಕೆ? ನಿಗದಿತ ಬಿಡ್‌ಗೆ ಬರಲಿಲ್ಲ ವೆಂದು ತಡೆ ಹಿಡಿಯಲಾಗಿದೆಯೇ? ಇದೆಲ್ಲದರ ಹಿಂದೆ ಯಾರಿದ್ದಾರೆ ಎಂಬುದನ್ನು ಮುಖ್ಯಮಂತ್ರಿಯವರು ಬಹಿರಂಗಪಡಿಸಲಿ. ದ್ವೇಷದ ರಾಜಕಾರಣಕ್ಕೆ ಶಿಕ್ಷೆ ನೀಡುವ ಕಾಲ ಬಂದೇ ಬರುತ್ತದೆ ಎಂದು ದೂರಿದರು.

ಬೀದಿ ಪಾಲಾಗಿದ್ದಾರೆ: ಪ್ರವಾಹ ಸಂತ್ರಸ್ತರು ಬೀದಿ ಪಾಲಾಗಿದ್ದಾರೆ. ಅವರ ಸಂಕಷ್ಟಗಳಿಗೆ ಸ್ಪಂದಿಸದ ಸರ್ಕಾರ ಅಧಿಕಾರಿಗಳ ವರ್ಗಾವಣೆ, ಬಡ್ತಿಯಲ್ಲಿ ಅವ್ಯವಹಾರಕ್ಕಿಳಿದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ವಿಜಯೇಂದ್ರನನ್ನು ಉತ್ತರಾಧಿಕಾರಿಯೆಂದು ಬಿಂಬಿಸುತ್ತಾ ಇದ್ದಷ್ಟು ದಿನ ಮಜಾ ಮಾಡಿಯೇ ಬಿಡೋಣ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ದೂರಿದರು.ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ: 12 ಜಿಲ್ಲೆಗಳಲ್ಲಿ ಪ್ರವಾಹ ಸಂತ್ರಸ್ತರು ನೊಂದು ಹೋಗಿದ್ದಾರೆ. ಸರ್ಕಾರ ಮನೆ ಕಳೆದುಕೊಂಡವರಿಗೆ 1000 ಕೋಟಿ ರೂ., ಲೋಕೋಪಯೋಗಿ ಇಲಾಖೆ ರಸ್ತೆಗಳ ದುರಸ್ತಿಗೆ 500 ಕೋಟಿ ರೂ. ನೀಡುತ್ತಿದೆ. ಸರ್ಕಾರವೇ 35,000 ಕೋಟಿ ರೂ. ಹಾನಿಯಾಗಿದೆ ಎಂದು ವರದಿ ನೀಡಿದೆ.

ಆ ಪೈಕಿ 1500 ಕೋಟಿ ರೂ. ನೀಡಿದರೆ ಸಂತ್ರಸ್ತರ ಸಂಕಷ್ಟ ಪರಿಹಾರವಾಗುತ್ತದೆಯೇ? ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಬಗ್ಗೆ ಕಾಳಜಿ ಇದ್ದಿದ್ದರೆ, 25 ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದಾರೆ ಎಂಬ ಕೃತಜ್ಞತೆ ಇದ್ದಿದ್ದರೆ ಈ ವೇಳೆ ಗಾಗಲೇ ರಾಜ್ಯಕ್ಕೆ 10-15 ಸಾವಿರ ಕೋಟಿ ರೂ.ಪರಿ ಹಾರ ಘೋಷಣೆ ಮಾಡಬೇಕಾಗಿತ್ತು ಎಂದರು.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ವಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ ಎಂಬ ಜನರ ಭಾವನೆಯೂ ಈಗ ಹುಸಿ ಯಾಗಿದೆ ಎಂದು ತಿಳಿಸಿದರು. ಜಿಪಂ ಉಪಾಧ್ಯಕ್ಷಎಚ್‌.ಪಿ.ಸ್ವರೂಪ್‌ ಉಪಸ್ಥಿತರಿ ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.