ಬಿಎಸ್‌ವೈ ಬಣ್ಣಿಸುವ ಸಿದ್ದು: ರೇವಣ್ಣ ಬೇಸರ

Team Udayavani, Jul 4, 2020, 6:40 AM IST

revanna siddu

ಹಾಸನ: ರಾಜ್ಯದಲ್ಲಿ ಕೋವಿಡ್‌ 19 ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವವರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದ್ದರೂ ಅಧಿಕೃತ ವಿರೋಧ ಪಕ್ಷವಾದ ಕಾಂಗ್ರೆಸ್‌ ಸಮರ್ಥವಾಗಿ ಸರ್ಕಾರವನ್ನು ತರಾಟೆಗೆ  ತೆಗೆದುಕೊಳ್ಳುತ್ತಿಲ್ಲ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಾಕ್‌ ಡೌನ್‌ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಕ್ಷೌರಿಕರು, ಅಗಸರು, ಗಾರೆ ಕಾರ್ಮಿಕರು ಸೇರಿ  ನೊಂದ ವರ್ಗಗಳಿಗೆ ಇದುವರೆಗೂ ಪರಿಹಾರ ಧನ ಸಿಕ್ಕಿಲ್ಲ. ತರಕಾರಿ, ಹಣ್ಣು, ಹೂವು ಬೆಳೆಗಾರ ರಿಗೂ ಪರಿಹಾರ ದಕ್ಕಿಲ್ಲ. ಪರಿಹಾರ ನೀಡಲು ವಿಧಿಸಿ ರುವ ಮಾರ್ಗದರ್ಶಿ ಸೂತ್ರ ಗಮನಿಸಿದರೆ ಸಂಕಷ್ಟ ಅನುಭವಿಸಿದವರಿಗೆ ಪರಿಹಾರ  ಸಿಗುವುದೂ ಕಷ್ಟ. ಇಂತಹ ಪರಿಸ್ಥಿತಿ ಇದ್ದರೂ ಕಾಂಗ್ರೆಸ್‌ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜೆಡಿಎಸ್‌ ಮತ್ತಿತರ ವಿರೋಧ ಪಕ್ಷಗಳು  ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಲು ಮುಂದಾದ ವೇಳೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಅವರನ್ನು ಆಧುನಿಕ ಬಸವಣ್ಣ ಎಂದು ಬಣ್ಣಿಸಿ ಮೆಚ್ಚುಗೆ ವ್ಯಕ್ತಪಡಿಸುವುದಾದರೆ, ಸರ್ಕಾರವನ್ನು ಎಚ್ಚರಿಸಲು  ಸಾಧ್ಯವೇ. ಪರಿಹಾರ ಧನ ಮಂಜೂರಾತಿಗೆ ಜಿಲ್ಲಾಧಿಕಾರಿಗೇ ಅಧಿಕಾರ ನೀಡಬೇಕು ಎಂದೂ ಆಗ್ರಹಿಸಿದರು.

ಜೆಡಿಎಸ್‌ ಅನ್ನು ಲಘುವಾಗಿ ಕಾಣಬೇಡಿ: ರಾಜ್ಯದಲ್ಲಿ ಇನ್ನು ಮುಂದೆ ಚುನಾವಣಾ ಮೈತ್ರಿ ಬೇಡ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಜೆಡಿಎಸ್‌ ಎಂದೂ ಕಾಂಗ್ರೆಸ್‌ ಸಖ್ಯಕ್ಕೆ  ಮುಂದಾಗಿಲ್ಲ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಚನೆ ವೇಳೆಯೂ ಜೆಡಿಎಸ್‌ ಕಾಂಗ್ರೆಸ್‌ ಮುಖಂಡರ ಮನೆ ಬಾಗಿಲಿಗೆ ಹೋಗಿರಲಿಲ್ಲ. ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಹೊಸ ಸಾರಥಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪಕ್ಷ ಸಂಘಟಿಸಲಿ.  ಆದರೆ ಪ್ರಾದೇಶಿಕ ಪಕ್ಷಗಳ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ಕಳೆದ ಲೋಕಸಭಾ ಚುನಾವಣೆಯಲ್ಲಿ ಏನೇನು ನಡೆಯಿತು. ಕುಮಾರ ಸ್ವಾಮಿ ಸರ್ಕಾರವನ್ನು ಯಾರು ಉರುಳಿಸಿದರು, ಕಾಂಗ್ರೆ ಸ್‌ನ 14 ಶಾಸಕರು ಬಿಜೆಪಿಗೆ ಹೋಗಲು  ಯಾರು ಕಾರಣ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು. ಹಾಸನದಲ್ಲಿ ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿದರು.

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.