ಕಟ್ಟಡ ಕಾರ್ಮಿಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ
ಜೆಎಂಎಫ್ಸಿ ನ್ಯಾಯಧೀಶೆ ಡಿ. ಎಸ್. ಪ್ರತಿಭಾ ಅಭಿಮತ ಹಿರಿಯ ಕಾರ್ಮಿಕ ನಿರೀಕ್ಷಿಕರ ಕಚೇರಿ ಉದ್ಘಾಟನೆ
Team Udayavani, Nov 13, 2021, 1:44 PM IST
ಆಲೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಹೊಂದಿದ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಮೂಲ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಡಿ. ಎಸ್. ಪ್ರತಿಭಾ ತಿಳಿಸಿದರು. ಅವರು ಆಲೂರು ಪಟ್ಟಣದ ಕೆಇಬಿ ವೃತ್ತದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಿಕರ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕ ಇಲಾಖೆಯಿಂದ ನೋಂದಣಿಯಾದ ಕಾರ್ಮಿಕರಿಗೆ ಸರ್ಕಾರದಿಂದ ಸಾಕಷ್ಟು ಮೂಲ ಸೌಲಭ್ಯಗಳನ್ನು ನೀಡುತ್ತಿದೆ. ಈ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ವಕೀಲರ ಸಂಘ ಇತರೆ ಇಲಾಖೆ ಸಹಕಾರದೊಂದಿಗೆ ತಾಲೂಕಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಷ್ಟೋ ಕಾರ್ಮಿಕರು ಇದರ ಲಾಭವನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ:- ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ
ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ, ಮಕ್ಕಳ ಮದುವೆಗೆ 50 ಸಾವಿರ ರೂ. ಸಹಾಯ ಧನ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರೆ 2 ಲಕ್ಷ ರೂ., ಅಪಘಾತದಿಂದ ಮರಣ ಹೊಂದಿದರೆ 5 ಲಕ್ಷ ರೂ. ನೀಡಲಾಗುವುದು ಎಂದ ಅವರು, ಕಾರ್ಮಿಕರ ಕಷ್ಟಗಳಿಗೆ ಒಕ್ಕೂಟ ಸ್ಪಂದಿಸುತ್ತಿದೆ ಎಂದರು.
ಹಾಸನ ಹಿರಿಯ ಕಾರ್ಮಿಕ ನಿರೀಕ್ಷಕ ಆನಂದರಾವ್ ಮಾತನಾಡಿ, ಸೌಲಭ್ಯ ಪಡೆಯುವ ಕಾರ್ಮಿಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಯಾ ವಿಭಾಗದ ಕಾರ್ಮಿಕ ಅಧಿಕಾರಿಗಳು/ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರು ಇವರ ಬಳಿ ನೋಂದಣಿಗಾಗಿ ಸಲ್ಲಿಸಬೇಕು.
ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಕಾರ್ಡ್ ಪಡೆಯುವುದು ಅತ್ಯಂತ ಅಗತ್ಯವಾಗಿದೆ. ನೋಂದಣಿಗಾಗಿ ಕಾಮಗಾರಿ ನಡೆಯುತ್ತಿರುವ ಕಟ್ಟಡದ ಮಾಲಿಕರು, ಗುತ್ತಿಗೆದಾರರು ಅಥವಾ ಕರ್ನಾಟಕ ಸ್ಟೇಟ್ ಕಾಂಟ್ರ್ಯಾಕ್ಟರ್ ಅಸೋಸಿಯೇಷನ್‌ನವರು ನೀಡುವ ಉದ್ಯೋಗದ ದೃಢೀಕರಣ ಪತ್ರವನ್ನು ಲಗತ್ತಿಸುವುದು ಅಗತ್ಯವಾಗಿದೆ ಎಂದರು.
ಇಲಾಖೆಯಿಂದ ಸವಲತ್ತುಗಳನ್ನು ಕೊಡಿಸುವುದಾಗಿ ಹೇಳಿಕೊಂಡು ಕೆಲ ಮಧ್ಯವರ್ತಿಗಳು ಹಣ ಪಡೆದು,ಮೋಸ ಮಾಡುತ್ತಿದ್ದಾರೆ. ಈ ಕುರಿತು ಅರಿವು ಅಗತ್ಯ. ಕಾರ್ಮಿಕರು ಕುಟುಂಬದ ಬೆನ್ನೆಲುಬಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಸರಕಾರದ ನಿಯಮಗಳನ್ನು ಪಾಲಿಸಿ, ಲಸಿಕೆ ಹಾಕಿಸಿಕೊಂಡು ಆರೋಗ್ಯವಾಗಿರಿ ಎಂದರು. ಸುಮಾರು 25 ಕಟ್ಟಡ ಕಾರ್ಮಿಕರನ್ನು ಗುರುತಿಸಿ ನೊಂದಾವಣೆ ಮಾಡಿಸಿ ಗುರುತಿನ ಚೀಟ ನೀಡಲಾಯಿತು. ಹಿರಿಯ ವಕೀಲ ಸುರೇಶ್, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಆನಂದ್ ಹಾಗೂ ಪದಾಧಿಕಾರಿಗಳು ಕಾರ್ಮಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.