ದಿಬ್ಬಣದ ಬಸ್‌ ಪಲ್ಟಿ: 10 ಜನರಿಗೆ ಗಂಭೀರ ಗಾಯ


Team Udayavani, Jun 20, 2019, 3:39 PM IST

hasan-tdy-4..

ಸಕಲೇಶಪುರ ತಾಲೂಕಿನ ಆನೆಮಹಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿದೆ.

ಸಕಲೇಶಪುರ: ಖಾಸಗಿ ಬಸ್‌ ಚಾಲಕನ ಅಜಾರೂಗತೆಯಿಂದಾಗಿ ಬಸ್‌ ಪಲ್ಟಿಯಾಗಿ ಮದುವೆಗೆಂದು ಹೊರಟ ದಿಬ್ಬಣ ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನಲ್ಲಿ ಬುಧವಾರ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಿಡಘಟ್ಟ ಗ್ರಾಮದ ಸಿದ್ದಲಿಂಗಸ್ವಾಮಿ ಹಾಗೂ ಕನಕಪುರ ಜಿಲ್ಲೆ ಸಾತನೂರು ಸಮೀಪ ಚಿಕ್ಕ ಹಾಲಳ್ಳಿಯ ಕೀರ್ತಿ ಎಂಬುವರ ವಿವಾಹ ಮಹೋತ್ಸವ ಧರ್ಮಸ್ಥಳದಲ್ಲಿ ನಿಶ್ಚಿತವಾಗಿದ್ದು ಈ ಹಿನ್ನೆಲೆಯಲ್ಲಿ ಹುಡುಗನ ಸಂಬಂಧಿಕರು ಉದಯರಂಗ ಟ್ರಾನ್ಸ್‌ಪೋರ್ಟ್‌ನ ಖಾಸಗಿ ಬಸ್‌ನಲ್ಲಿ ಧರ್ಮಸ್ಥಳಕ್ಕೆ ಮದುವೆಗೆಂದು ತೆರಳುತ್ತಿದ್ದರು. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಆನೆಮಹಲ್ ಗ್ರಾಮದ ದುರ್ಗಾಂಬ ರೈಸ್‌ ಮಿಲ್ ಸಮೀಪ ಚಾಲಕ ವೇಗವಾಗಿ ಬಸ್‌ ಚಲಾಯಿಸಿದ್ದು ತಿರುವಿನಲ್ಲಿ ಬಸ್‌ ನಿಯಂತ್ರಣಕ್ಕೆ ಸಿಗದ ಕಾರಣ ಬಸ್‌ ಮಗುಚಿ ಬಿದ್ದಿದೆ. ಬಸ್‌ ಅಪಘಾತಕ್ಕೆ ಈಡಾದ ಕಾರಣ ಬಸ್‌ನಲ್ಲಿದ್ದ 54 ಜನರಲ್ಲಿ ಸುಮಾರು 8ರಿಂದ 10 ಮಂದಿಗೆ ಗಂಭೀರ ಪೆಟ್ಟು ಬಿದ್ದಿದ್ದು ಬಾಕಿ ಉಳಿದವರಿಗೆ ಸಣ್ಣಪುಟ್ಟ ಪೆಟ್ಟು ಬಿದ್ದಿದೆ. ಗಾಯಾಳುಗಳಿಗೆ ಪಟ್ಟಣದ ಕ್ರಾಫ‌ರ್ಡ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಗಂಭೀರ ಗಾಯಗೊಂಡ ಚನ್ನಯ್ಯ, ಸಿದ್ದರಾಜು, ಶಿವರಾಜು, ಮಲ್ಲಮ್ಮ, ಶಿವಮ್ಮ ಎಂಬುವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಆ್ಯಂಬುಲೆನ್ಸ್‌ನಲ್ಲಿ ಕಳುಹಿಸಲಾಯಿತು. ಬಹುತೇಕರಿಗೆ ಬಲಗೈ, ಹಣೆ ಹಾಗೂ ತಲೆಗೆ ಪೆಟ್ಟು ಬಿದ್ದಿದೆ. ಆನೆಮಹಲ್ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕ್ರಾಫ‌ರ್ಡ್‌ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸಹ ತುರ್ತು ಚಿಕಿತ್ಸೆ ನೀಡಿದರು.

ವರ ಸಿದ್ದಲಿಂಗಸ್ವಾಮಿ ಕಾರಿನಲ್ಲಿ ತನ್ನ ತಾಯಿ ಯೊಂದಿಗೆ ತೆರಳಿದ್ದರಿಂದ ಅಪಾಯದಿಂದ ಪಾರಾಗಿ ದ್ದಾನೆ. ವಧು ಕೀರ್ತಿ ಮನೆಯವರು ಬೇರೆ ವಾಹನ ಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರಿಂದ ಯಾವುದೇ ಅಪಾಯವಾಗಿಲ್ಲ. ಘಟನೆಯಿಂದ ಕೆಲ ಸಮಯ ರಾಷ್ಟ್ರೀಯಯ ಹೆದ್ದಾರಿ 75ರಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ನಗರ ಠಾಣೆಯ ಪಿಎಸ್‌ಐ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.