ದಾಂಧಲೆ ನಡೆಸುತ್ತಿದ್ದಒಂಟಿ ಸಲಗ ಸೆರೆ
Team Udayavani, Dec 21, 2018, 2:49 PM IST
ಸಕಲೇಶಪುರ: ಬಲಗಾಲಿಗೆ ತೀವ್ರ ಪೆಟ್ಟು ಬಿದ್ದು ದಾಂಧಲೆ ನಡೆಸುತ್ತಿದ್ದ ಒಂಟಿಸಲಗವೊಂದನ್ನು ಸೆರೆ ಹಿಡಿಯುವಲ್ಲಿ ಅರಣ್ಯಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಯಸಳೂರು ಹೋಬಳಿ ದೊಡ್ಡ ಕುಂದೂರು ಅರಣ್ಯದ
ಸಮೀಪ 5 ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗುರುವಾರ ಸೆರೆ ಹಿಡಿದಿದ್ದಾರೆ.
ಮುಂಜಾನೆ 8 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಸಿಬ್ಬಂದಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಂಟಿಸಲಗವೊಂದನ್ನು ದೊಡ್ಡ ಕುಂದೂರು ಅರಣ್ಯ ಸಮೀಪ ಹುಡುಕವಲ್ಲಿ ಯಶಸ್ವಿಯಾದರು. ತಕ್ಷಣ ನಾಗರಹೊಳೆಯಿಂದ ಆಗಮಿಸಿದ್ದ ತಜ್ಞರ ತಂಡ ಒಂಟಿಸಲಗಕ್ಕೆ ಅರಿವಳಿಕೆ ನೀಡುವುದರಲ್ಲಿ ಯಶಸ್ವಿಯಾಯಿತು.
ಅರಿವಳಿಕೆ ಮದ್ದಿನ ಪರಿಣಾಮ ಸ್ಥಳದಲ್ಲೇ ಕುಸಿದ ಕಾಡಾನೆಯನ್ನು ಅಭಿಮನ್ಯು, ಕೃಷ್ಣ, ಅಜಯ್, ಧನಂಜಯ, ಹರ್ಷ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ಸಕ್ರೆಬೈಲು ಆನೆಧಾಮಕ್ಕೆ ಕಳುಹಿಸಲಾಯಿತು. ಸೆರೆಹಿಡಿದ ಒಂಟಿಸಲಗದ ಬಲಗಾಲಿಗೆ ಗುಂಡೇಟು ತಗುಲಿ ಯಸಳೂರು ಭಾಗದ ತೋಟ, ಗದ್ದೆಗಳಲ್ಲಿ ದಾಂಧಲೆ ನಡೆಸುತ್ತಿತ್ತು. ಕಾರ್ಯಾಚರಣೆಯಲ್ಲಿ ಸಿಸಿಎಫ್ ಎ.ಕೆ.ಸಿಂಹ, ನಾಗರಹೊಳೆ ಅರಿವಳಿಕೆ ತಜ್ಞ ಮುಜೀಬುರ್ ರೆಹಮಾನ್, ವೈದ್ಯಾಧಿಕಾರಿ
ಗಳಾದ ವಿನಯ್, ಮುರಳಿ ತಾಲೂಕು ಉಪವಲಯ ಅರಣ್ಯಾಧಿಕಾರಿ ಲಿಂಗರಾಜು, ವಲಯ ಅರಣ್ಯಾಧಿಕಾರಿ ಮೋಹನ್, ಯಸಳೂರು ವಲಯ ಅರಣ್ಯಾಧಿಕಾರಿ ಅಭಿಷೇಕ್, ಅಲೂರು ಅರಣ್ಯಾಧಿಕಾರಿ ರಾಜಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.