ವಿಶ್ವಕ್ಕೆ ಅಹಿಂಸಾ ಸಂದೇಶ ಸಾರುತ್ತಿರುವ ಚಾರು ಕೀರ್ತಿ ಭಟ್ಟಾರಕರು

Team Udayavani, Dec 9, 2019, 3:00 AM IST

vishvakke

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಜೈನ ಮಠದ ಪೀಠಾಧ್ಯಕ್ಷರಾದ ಚಾರುಕೀರ್ತಿ ಭಟ್ಟಾರಕರು ಭಗವಾನ್‌ ಬಾಹು ಬಲಿ ಸ್ವಾಮಿಯ 4 ಮಹಾ ಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸುವ ಮೂಲ ವಿಶ್ವಕ್ಕೆ ಅಹಂಸಾ ಸಂದೇಶವನ್ನು ಸಾಗುತ್ತಿದ್ದಾರೆ ಎಂದು ತಮಿಳುನಾಡಿದ ಜೈನ ಮಠದ ಧವಲಕೀರ್ತಿ ಭಟ್ಟಾರಕರು ಬಣ್ಣಿಸಿದರು.

ಚಾರುಕೀರ್ತಿ ಭಟ್ಟಾರಕರು ಪಟ್ಟಾಭಿಷಕ್ತರಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶ್ರವಣ ಬೆಳಗೊಳ ಜೈನ ಮಠದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಧವಲಕೀರ್ತಿ ಭಟ್ಟಾರಕರು, ಚಾರು ಕೀರ್ತಿ ಶ್ರೀಗಳು ಉತ್ತರ ಭಾರತ ಹಾಗೂ ದಕ್ಷಿಣ ಭಾರತವನ್ನು ಒಗ್ಗೂಡಿಸಿದ್ದಾರೆ. ಪ್ರಾಕೃತ ಭಾಷೆಯಲ್ಲಿದ್ದ ಗ್ರಂಥಗಳನ್ನು ಕನ್ನಡಕ್ಕೆ ಅನುವಾದ ಮಾಡುವ ಮೂಲಕ ಸಮಾನ್ಯರಿಗೆ ದವಲ ಗ್ರಂಥ ಓದುವ ಅಕಾಶ ಕಲ್ಪಿಸಿದ್ದಾರೆ ಎಂದರು.

ಜೈನ ಶಾಖಾ ಮಠಗಳ ಸ್ಥಾಪನೆ: ಚಾರುಕೀರ್ತಿ ಭಟ್ಟಾರಕರು ತಮಿಳುನಾಡಿನಲ್ಲಿ ಎರಡು ಶಾಖಾ ಮಠ ತೆರೆದು ಅಲ್ಲಿಗೆ ಶ್ರೀಗಳ ನೇಮಕ ಮಾಡಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಹನ್ನೊಂದು ಶಾಖಾ ಮಠಗಳನ್ನು ತೆರೆದು ಅಲ್ಲಿಗೆ ಶ್ರೀಗಳ ನೇಮಕಕ್ಕಾಗಿ ತಮ್ಮ ಶಿಷ್ಯರಿಗೆ ದೀಕ್ಷೆ ನೀಡಿದ್ದಾರೆ ಎಂದರು.

ಜೈನ ಸಮುದಾಯದ ಶಾಖಾ ಮಠಗಳು ಶಾಲೆಗಳಿದ್ದಂತೆ ಅಲ್ಲಿನ ಸ್ವಾಮೀಜಿಗಳು ಉಪನ್ಯಾಸಕರಿದ್ದಂತೆ ಭಕ್ತರು ವಿದ್ಯಾರ್ಥಿಗಳಿದ್ದಂತೆ ಆದರೆ ಶ್ರವಣಬೆಳಗೊಳದ ಜೈನ ಮಠದ ಸರ್ಕಾರವಿದ್ದಂತೆ ಸರ್ಕಾರಕ್ಕೆ 50 ವರ್ಷ ತುಂಬಿದೆ ನಾವುಗಳು ಸಂಭ್ರಮಾಚರಣೆ ಮಾಡಬೇಕು ಎಂದರು.

ಜೈನ ಸಮಾಜದ ಕಣ್ಣುಗಳು: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರು ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಜೈನ ಸಮಾಜಕ್ಕೆ ಎರಡು ಕಣ್ಣುಗಳಿದ್ದಂತೆ. ಇವರ ಮಾತು ಮೀರಿ ಜೈನ ಸಮುದಾಯದ ಭಕ್ತರು ಒಂದು ಹೆಜ್ಜೆ ಮುಂದೆ ಇಡಬಾರದು. ಒಗ್ಗಟ್ಟು ಒಡೆಯುವ ಶಕ್ತಿಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಹನ್ನೊಂದು ಮಠಾಧೀಶರಿದ್ದೇವೆ. ಎಲ್ಲರೂ ಒಟ್ಟಿಗೆ ಇರಬೇಕು. ಧರ್ಮ ಉಳಿಸುವುದು ಹಾಗೂ ಕಾಪಾಡುವುದು ನಮ್ಮ ಗುರಿ ಎಂದು ತಮಿಳುನಾಡಿದ ಜೈನ ಮಠದ ಧವಲಕೀರ್ತಿ ಭಟ್ಟಾರಕರು ಹೇಳಿದರು.

ಶ್ರವಣಬೆಳಗೊಳ ಅಭಿವೃದ್ಧಿಗೆ ಕ್ರಮ: ಶ್ರವಣಬೆಳಗೊಳ ಕುಗ್ರಾಮವಾಗಿತ್ತು. ಅಲ್ಲಿನ ಜನರು ಬದುಕಲು ಹರಸಾಹಸ ಪಡುತ್ತಿದ್ದರು. ಇದನ್ನು ಅರಿತ ಚಾರುಶ್ರೀಗಳು ಅಭಿವೃದ್ಧಿ ಮಾಡಲೇ ಬೇಕೆಂಬ ಪಣತೊಟ್ಟು ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದ್ದಾರೆ. ಹಣ ಉಳಿಯುವುದಿಲ್ಲ ನಾವು ಮಾಡುವ ಸಮಾಜ ಕೆಲಸ ಶಾಶ್ವತವಾಗಿ ಉಳಿಯುತ್ತದೆ ಇದನ್ನು ಮನಗಂಡು ಭಕ್ತರು ಆರ್ಥಿಕವಾಗಿ ಮಠವನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದು ಕನಕಗಿರಿ ಭುವನಕೀರ್ತಿ ಭಟ್ಟಾರಕ ಶ್ರೀಗಳು ತಿಳಿಸಿದರು.

ಕಂಬದಹಳ್ಳಿ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಮೂಡುಬಿದರೆ ಚಾರುಕೀರ್ತಿ ಭಟ್ಟಾರಕರು, ಹೊಂಬುಜದ ದೇವೇಂದ್ರಕೀರ್ತಿ ಭಟ್ಟಾರಕರು, ಮಹಾರಾಷ್ಟ್ರದ ಸೋಂದಾ ಕ್ಷೇತ್ರದ ಭಟ್ಟಾಕಲಂಕ ಭಟ್ಟಾರಕರು, ಎನ್‌ಆರ್‌ಪುರ ಲಕ್ಷ್ಮೀಸೇನ ಭಟ್ಟಾರಕರು, ಅರತಿಪುರದ ಸಿದ್ಧಾಂತಕೀರ್ತಿಭಟ್ಟಾರಕರು, ನಾಂದಣಿ ಜಿನಸೇನ ಭಟ್ಟಾರಕರು, ಲಕ್ಕವಳ್ಳಿ ವೃಷಭಸೇನ ಭಟ್ಟಾರಕರು, ಆದಿಚುಂನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಕಬ್ಬಳಿ ಶಿವಪುತ್ರ ಸ್ವಾಮೀಜಿ ಶ್ರೀಗಳಿಗೆ ಗೌರವ ಅರ್ಪಿಸಿದರು.

ಧರ್ಮಸ್ಥಳದ ಸುರೇಂದ್ರಕುಮಾರ, ಶಾಸಕರಾದ ಸಂಜಯಪಾಟೀಲ, ಅಭಯಪಾಟೀಲ, ಗೋ.ಮಧುಸೂದನ್‌, ಸಿ.ಎನ್‌.ಬಾಲಕೃಷ್ಣ, ಎಂ.ಎ.ಗೋಪಾಲಸ್ವಾಮಿ, ಮಾಜಿ ಶಾಸಕ ಅಭಯಚಂದ್ರಜೈನ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನುಬಳಿಗಾರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.