30 ವರ್ಷದಿಂದ ಪಾಳು ಬಿದ್ದ ಕ್ವಾಟ್ರಸ್‌ ತೆರವುಗೊಳಿಸಿ


Team Udayavani, Jan 29, 2021, 8:11 PM IST

Clear the quartz that has been ruined for 30 years

ಆಲೂರು: ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಸಂಕೀರ್ಣ ಹಿಂಭಾಗದ ಹಳೇ ಪೊಲೀಸ್‌ ಕ್ವಾಟ್ರಸ್‌ ಶಿಥಿಲಗೊಂಡು, ಗಿಡಗಂಟಿಗಳು ಬೆಳೆದು ಅಕ್ರಮ ಚಟುವಟಿಕೆ ತಾಣವಾಗಿದೆ. ಇದರಿಂದ ಅಕ್ಕಪಕ್ಕದ ಅಂಗಡಿ ಮಾಲಿಕರಿಗೆ, ಸ್ಥಳೀಯರು ನಿವಾಸಿಗಳಿಗೆ ತೀವ್ರತೊಂದರೆ ಆಗುತ್ತಿದೆ. ಪಟ್ಟಣದ ತಾಲೂಕು ಕಚೇರಿ, ಪಪಂ, ಪೊಲೀಸ್‌ ಠಾಣೆಗೆ ಕೂಗಳತೆ ದೂರದಲ್ಲಿನ ಈ ಹಳೇ ಕ್ವಾಟ್ರಸ್‌ 30 ವರ್ಷಗಳಿಂದ ಪಾಳು ಬಿದ್ದಿವೆ. ಕಟ್ಟಡದ ಸುತ್ತಲು ಗಿಡ ಗಂಟಿಗಳು ಬೆಳೆದು, ಕಟ್ಟಡ ಸಂಪೂರ್ಣ ಮುಚ್ಚಿ ಹೋಗಿದೆ. ಪುಂಡ ಪೋಕರಿಗಳಿಗೆ ಅಕ್ರಮ ಚಟುವಟಿಕೆಗಳ ಅಡ್ಡವಾಗಿದೆ. ಸಾರ್ವಜನಿಕರು ಮಲ, ಮೂತ್ರ ವಿಸರ್ಜನೆ ತಾಣವಾಗಿ ಮಾಡಿಕೊಂಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ: ಕ್ವಾಟ್ರಸ್‌ ಅಕ್ಕಪಕ್ಕದ ನಿವಾಸಿಗಳು, ಅಂಗಡಿಯವರು ಕಸ ಸುರಿಯುತ್ತಿದ್ದು, ಕ್ವಾಟ್ರಸ್‌ ಜಾಗ ತಿಪ್ಪೆಗುಂಡಿಯಾಗಿದೆ. ಶಿಥಿಲಗೊಂಡ ಕಟ್ಟಡದ ಒಳಗಡೆ ಕುಡಿದು ಬಿಸಾಡಿರುವ ಮದ್ಯದ ಬಾಟಲಿಗಳು, ಎಲ್ಲಂದರಲ್ಲಿ ಕಸ ಹಾಕಿರುವುದರಿಂದ ಸೊಳ್ಳೆಗಳ ಕಾಟ ಹೇಳತೀರದಾಗಿದೆ. ಕ್ರೀಮಿ ಕೀಟಗಳ ಉತ್ಪತ್ತಿಯ ತಾಣವಾಗಿದೆ. ಈ ಹಳೇ ಕ್ವಾಟ್ರಸ್‌ ಬಗ್ಗೆ ಚಿಂತಿಸದೆ, ಅಧಿಕಾರಿಗಳು ತೋರುತ್ತಿರುವ ದಿವ್ಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೊಂದರೆ ಅನುಭವಿಸಬೇಕಿದೆ.

ಪಟ್ಟಣದ ಶೆಟ್ಟರ್‌ ಬೀದಿ, 10ನೇ ವಾರ್ಡ್‌, ಅಂಬೇಡ್ಕರ್‌ ರಸ್ತೆಗೆ ಹೋಗುವ ಸಾರ್ವಜನಿಕರು ಈ ಕಟ್ಟಡದ ಪಕ್ಕದ ರಸ್ತೆಯ ಮೂಲಕವೇ ಸಂಚರಿಸಬೇಕು. ಕತ್ತಲು ಕವಿದಂತೆ ಕಳ್ಳಕಾಕರ ಉಪಟಳ ಹೆಚ್ಚಾಗುತ್ತದೆ. ಸಂಜೆ 7 ಗಂಟೆ ನಂತರ ಈ ರಸ್ತೆಯಲ್ಲಿ ಜನ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕ್ವಾಟ್ರಸ್‌ ತೆರವು ಗೊಳಿಸಲಿ, ಅಲ್ಲಿಯವರೆಗೆ ಗಿಡಗಂಟಿ ತೆರವು ಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಈ ಕಟ್ಟಡದ ಪಕ್ಕದಲ್ಲಿ ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಸಂಕೀರ್ಣವಿದ್ದು, ಟೈಲರ್‌ ಶಾಪ್‌, ಜೆರಾಕ್ಸ್ ಅಂಗಡಿ, ಎಲೆಕ್ಟ್ರೀಕಲ್‌ ಅಂಗಡಿ, ಬೇಕರಿ, ಮರಗೆಲಸ ನಡೆಸುವ ಅಂಗಡಿಗಳು ಇವೆ. ದಿನಕ್ಕೆ ನೂರಾರು ಜನರು ಇಲ್ಲಿಗೆ ಬಂದು ಹೋಗುತ್ತಾರೆ.

ಇದನ್ನೂ ಓದಿ:ಹಿಟಾಚಿ ವಾಹನಕ್ಕೆ ತಗುಲಿದ ವಿದ್ಯುತ್ ತಂತಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾದುರಂತ

ಹಳೇ ಪೊಲೀಸ್‌ ಕ್ವಾಟ್ರಸ್‌ ಸ್ವತ್ಛತೆ ಇಲ್ಲದೆ ಪಾಳು ಬಿದ್ದಿರುವ ಕಾರಣದಿಂದ ನಗರಕ್ಕೆ ಬಂದು ಹೋಗುವವರು ಮಲಮೂತ್ರ ವಿಸರ್ಜನೆ ಇಲ್ಲಿಯೇ ಮಾಡುತ್ತಿದ್ದಾರೆ.ಸ್ವತ್ಛತೆ ಕಾಣದ ಈ ಕ್ವಾಟ್ರಸ್‌ ಬಳಿ ಇರು  ಅಂಗಡಿ ಮುಗ್ಗಟ್ಟುಗಳಿಗೆ ವ್ಯಾಪಾರಸ್ಥರು ಬರಲು ಮುಜುಗರ ಪಡುತ್ತಿದ್ದಾರೆ. ವ್ಯಾಪಾರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಂಗಡಿಯ ಬಾಡಿಗೆ ಕಟ್ಟಲು ಕೂಡ ಸಾಧ್ಯವಾಗುತ್ತಿಲ್ಲ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಅಂಗಡಿ ಮಾಲಿಕರು ಮನವಿ ಮಾಡಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಿಸಿದ ಅಧಿಕಾರಿಗಳು ಸ್ವತ್ಛತೆ ಕಾಣದೆ ಸಾರ್ವಜನಿಕರಿಗೆ ದಿನನಿತ್ಯ ಒಂದಲ್ಲಾ ಒಂದು ರೀತಿಯ ಸಮಸ್ಯೆ ಉಂಟು ಮಾಡುತ್ತಿರುವ ಹಳೇ ಪೊಲೀಸ್‌ ಕ್ವಾಟ್ರಸ್‌ ಕಟ್ಟಡ ತೆರವು ಗೊಳಿಸಿ ಜನರಿಗೆ ಶಾಶ್ವತ ಪರಿಹಾರ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.

ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.