ತವರು ಜಿಲ್ಲೆಗೆ ಸಿಎಂ ಬಂಪರ್ ಕೊಡುಗೆ
Team Udayavani, Feb 9, 2019, 6:57 AM IST
ಹಾಸನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ 2019 -20ನೇ ಸಾಲಿನ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ಘೋಷಣೆ ಮಾಡಿದ್ದಾರೆ. ಕಳೆದ ವರ್ಷ ಜಿಲ್ಲೆಗೆ ನೀಡಿದ್ದಕ್ಕಿಂತಲೂ ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಹಾಸನ ಜಿಲ್ಲೆಗೆ ಪ್ರಕಟಿಸುವ ಮೂಲಕ ಜನರ ನಿರೀಕ್ಷೆಗಳಿಗೆ ಮನ್ನಣೆ ನೀಡಿದ್ದಾರೆ. ಹಾಸನಕ್ಕೆ ವಿಶ್ವ ವಿದ್ಯಾನಿಲಯ ಮಂಜೂರಾಗ ಬೇಕೆಂಬುದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸಾಂಪ್ರದಾಯಿಕ ವಿಶ್ವ ವಿದ್ಯಾ ಲದ ಬದಲು ತಾಂತ್ರಿಕ ವಿಶ್ವ ವಿಶ್ವವಿದ್ಯಾಲಯ ಸ್ಥಾಪನೆಯ ಘೋಷಣೆ ಮಾಡುವ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ.
ಹಾಸನಕ್ಕೆ ಐಐಟಿ ಮಂಜೂರಾತಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದರು. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಇದನ್ನು ಗಮನಸಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಕಳೆದ ವರ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐಐಟಿಗಿಂತಲೂ ಮಿಗಿಲಾದ ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ರಾಜ್ಯ ಸರ್ಕಾರ ದಿಂದಲೇ ಹಾಸನದಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.
ವಿಮಾನ ನಿಲ್ದಾಣ ಕಾಮಗಾರಿ: ಜಿಲ್ಲೆಗೆ ಮತ್ತೂಂದು ಬಹುಮುಖ್ಯ ಕೊಡುಗೆ ವಿಮಾನ ನಿಲ್ದಾಣ. ಕಳೆದ ನಾಲ್ಕು ದಶಕಗಳಿಂದಲೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕಾಯ್ದಿರಿ ಕೊಂಡು ಕಾಯಲಾಗುತ್ತಿದೆ. 2006 ರಲ್ಲಿ ಭೂಮಿ ನೆರವೇರಿದ್ದರೂ ಅದು ನೆನಗುದಿಗೆ ಬಿದ್ದಿತ್ತು. ಈಗ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆ ಯಿಂದಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸಿದೆ. ಅದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಯವರು ಬಜೆಟ್‌ನಲ್ಲಿ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದಾರೆ. ಅಂತೂ ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗ ಅಧಿಕೃತ ಘೋಷಣೆ ಆಗಿದೆ.
ಹಾಸನದಲ್ಲಿ ಬಾಲಕಿಯರ ಪ್ರತ್ಯೇಕ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ 1.50 ಕೋಟಿ ರೂ. ಅನುದಾನ ನಿಗದಿಪಡಿಸಿರುವ ಮುಖ್ಯಮಂತ್ರಿ ಯವರು ಹಾಸನ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗೆ ಬೆಲೆ ಕೊರತೆ ಯೋಜನೆ ವ್ಯಾಪ್ತಿಗೆ ಸೇರಿಸಿ ರುವುದು ಬೆಳೆಗಾರರಿಗೆ ನೆರವಾಗಲಿದೆ.
ಏತನೀರಾವರಿ ಯೋಜನೆಗಳ ಘೋಷಣೆ: ಜಲಸಂಪನ್ಮೂಲ ಇಲಾಖೆಯಿಂದ ಚನ್ನರಾಯ ಪಟ್ಟಣ, ಹಾಸನ ಮತ್ತು ಹೊಳೆನರಸೀಪುರ ತಾಲೂ ಕಿನ ಕೆರೆಗಳಿಗೆ ನೀರು ತುಂಬಿಸುವ ಕಾಚೇನಹಳ್ಳಿ ಏತ ನೀರಾವರಿ ಯೋಜನೆ 3 ನೇ ಹಂತದ ಯೋಜನೆಗೆ 100 ಕೋಟಿ ರೂ. ಬಜೆಜ್‌ನಲ್ಲಿ ಘೋಷಣೆ ಆಗಿದೆ. ಹೊಳೆನರಸೀಪುರ ತಾಲೂಕು ಒಂಟಿಗುಡ್ಡ ಏತ ನೀರಾವರಿ ಯೋಜ ನೆಗಳ ಕಾಮಗಾರಿಗೆ 50 ಕೋಟಿ ರೂ. ಅರಕಲ ಗೂಡು ತಾಲೂಕಿನ ವಿವಿಧ ಗ್ರಾಮಗಳ ಕುಡಿವ ನೀರು ಪೂರೈಕೆಗೆ 100 ಕೋಟಿ ರೂ. ಹಳೆಬೀಡಿನ ದ್ವಾರಸಮುದ್ರ ಕೆರೆ ತುಂಬಿಸುವ ರಣಘಟ್ಟ ಕಾಲುವೆ ಪುನರ್ ನಿರ್ಮಾಣಕ್ಕೆ 100 ಕೋಟಿರೂ. ಅನುದಾನ ಘೋಷಣೆ ಆಗಿದೆ.
ಅರಸೀಕೆರೆಗೂ ಬಂಪರ್ ಕೊಡುಗೆ: ಹಾಸನದ ಜಿಲ್ಲಾ ಬಂಧೀಖಾನೆ ನಿರ್ಮಾಣ ಬಜೆಟ್‌ನಲ್ಲಿ ಘೋಷಣೆ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಅರಸೀಕೆರೆಯ ಉಪ ಕಾರಾಗೃಹವನ್ನು ಹೊಸದಾಗಿ ನಿರ್ಮಾಣ ಮಾಡಲು ಮುಖ್ಯಮಂತ್ರಿಯವರು 30 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಅರಸೀಕೆರೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯ ಪ್ರಸ್ತಾಪವನ್ನೂ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸುವ ಅರಸೀಕೆರೆ ತಾಲೂಕಿನ ಕೆರೆಗಳ ಅಭಿವೃದ್ಧಿಗೆ 15 ಕೋಟಿ ರೂ. ಘೋಷಣೆ ಯಾಗಿದೆ.
ರಸ್ತೆಗಳ ಅಭಿವೃದ್ಧಿಗೆ 50 ಕೋಟಿ: ಎತ್ತಿನಹೊಳೆ ಯೋಜನೆಯಿಂದ ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕಿನಲ್ಲಿ ರಸ್ತೆಗಳ ಅಭಿ ವೃದ್ಧಿಗೆ 50 ಕೋಟಿ ರೂ. ಹಾಗೂ ಸಕಲೇಶಪುರ ಪಟ್ಟಣದ ಕುಡಿಯುವ ನೀರಿನ ಯೋಜನೆಗೆ 75 ಕೋಟಿ ರೂ. ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.
ಆನೆ ಹಾವಳಿ ತಡೆಗೆ ರೈಲು ಕಂಬಿ ತಡೆಗೋಡೆ: ಸಕಲೇಶಪುರ ತಾಲೂಕಿನಲ್ಲಿ ಆನೆ ಕಾರಿಡಾರ್ ನಿರ್ಮಾಣ ಘೋಷಣೆಯ ನಿರೀಕ್ಷೆಯಿತ್ತು. ಆದರೆ ಮುಖ್ಯ ಮಂತ್ರಿಯವರು ಕಾಡಾನೆಗಳ ಹಾವಳಿ ತಡೆಗೆ ಕಾಡಾನೆಗಳ ಉಪಟಳ ಇರುವ ಜಿಲ್ಲೆಗಳಲ್ಲಿ ರೈಲು ಕಂಬಿಗಳ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಇದರಲ್ಲಿ ಹಾಸನ ಜಿಲ್ಲೆಯೂ ಸೇರುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ನಿರೀಕ್ಷೆಗಳನ್ನು ಹುಸಿಯಾಗಿ ಸದೆ ದಾಖಲಾರ್ಹ ಕೊಡುಗೆಗಳನ್ನು ನೀಡಿರುವ ಮುಖ್ಯಮಂತ್ರಿಯವರು, ಏತ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿರುವುದು ಜಿಲ್ಲೆಯ ಜನರಿಗೆ ಹರ್ಷವನ್ನುಂಟು ಮಾಡಿದೆ.
* ಎನ್. ನಂಜುಂಡೇಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.