ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ: ಪ್ರತಿಭಟನೆ
Team Udayavani, Sep 9, 2019, 11:48 AM IST
ಅರಸೀಕೆರೆ ನಗರದ ಸಾಯಿನಾಥ ರಸ್ತೆಯಲ್ಲಿ ಶಾಸಕರ ವಿಶೇಷ ಅನುದಾನದ ಅಡಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.
ಅರಸೀಕೆರೆ: ನಗರದ ಸಾಯಿನಾಥ ರಸ್ತೆಯಲ್ಲಿ ಶಾಸಕರ ವಿಶೇಷ ಅನುದಾನದಡಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅವೈಜ್ಞಾನಿಕ ವಾಗಿದ್ದು, ಅತ್ಯಂತ ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರ ಅಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಕಾರ್ಯ ಕರ್ತರು ದಿಢೀರ್ ಪ್ರತಿಭಟನೆ ನಡೆಸಿದರು.
ಅವೈಜ್ಞಾನಿಕ ಕಾಮಗಾರಿ: ಈ ಸಂದರ್ಭದಲ್ಲಿ ಕಿರಣ್ ಕುಮಾರ್ ಮಾತನಾಡಿ, ಇತ್ತೀಚೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಶಾಸಕರ ವಿಶೇಷ ಅನುದಾನದಡಿಯಲ್ಲಿ ಹಾಗೂ ನಗರೋತ್ಥಾನ ಯೋಜನೆಯಡಿ ಕೋಟ್ಯಂತರ ರೂ. ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಿದ್ದಾರೆ. ಆದರೆ ಕಾಮಗಾರಿ ಅನುಷ್ಠಾನದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್)ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡದೇ ಅವೈಜ್ಞಾನಿಕ ರೀತಿಯಲ್ಲಿ ಅತ್ಯಂತ ಕಳಪೆ ಗುಣ ಮಟ್ಟದ ಕಾಮಗಾರಿ ಮಾಡುತ್ತಿದ್ದು, ಕಾಮಗಾರಿಯ ಕ್ರಿಯಾ ಯೋಜನೆಯಲ್ಲಿ ನಮೂದಿ ಸಿರುವ ಗುಣ ಮಟ್ಟದ ಕಬ್ಬಿಣ ಮತ್ತು ಸಿಮೆಂಟ್ ಪ್ರಮಾಣವನ್ನು ಬಳಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಗುತ್ತಿಗೆದಾರರೇ ನಾಪತ್ತೆ: ಜೇನುಕಲ್ ನಗರ ಮತ್ತು ಬಸವನಗುಡಿಯ ನಾಗಪ್ಪ ಗಲ್ಲಿಯಲ್ಲಿ ಅರ್ಧಂ ಬಧರ್ ಕಾಮಗಾರಿಯನ್ನು ಮಾಡಿ ಬಿಟ್ಟುಹೋಗಿ ರುವ ಗುತ್ತಿಗೆದಾರರು ತಿಂಗಳು ಕಳೆದರು ಪತ್ತೆಯಿಲ್ಲದೇ ಚರಂಡಿಗಳ ತುಂಬಾ ಮಣ್ಣಿನ ರಾಶಿ ತುಂಬಿಕೊಂಡಿದ್ದು, ಮಳೆಯ ಹಾಗೂ ಮನೆಯ ನೀರು ಸರಾಗವಾಗಿ ಮುಂದೆ ಸಾಗದೇ ರಸ್ತೆಯಲ್ಲಿ ಅಕ್ಕಪಕ್ಕದಲ್ಲಿ ನಿಂತು ಕಲುಷಿತಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯನ್ನು ಸಾರ್ವಜನಿಕರು ಅನುಭವಿಸುತ್ತಿದ್ದಾರೆ ಎಂದರು.
ಸಾರ್ವಜನಿಕರು ಈ ಬಗ್ಗೆ ಲಿಖೀತ ದೂರು ನೀಡಿದರೂ ನಗರಸಭೆ ಆಡಳಿತ ಸಂಬಂಧಪಟ್ಟ ಗುತ್ತಿಗೆದಾರರಿಂದ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಮಾಡಿಸಲು ಸಂಪೂರ್ಣ ವಿಫಲವಾಗಿ ಎಂದು ದೂರಿದರು. ಇನ್ನಾದರೂ ನಗರಸಭೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅತ್ಯಂತ ತ್ವರಿತವಾಗಿ ಉತ್ತಮ ಗುಣಮಟ್ಟದ ಕಾಮಗಾರಿ ಗಳನ್ನು ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರಾದ ಲೋಕೇಶ್, ದೀಲಿಪ್, ಪ್ರಸನ್ನ ಕುಮಾರ್, ಅರುಣ್, ಮಂಜು, ಯೋಗೀಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.