ಕಟ್ಟಾಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Team Udayavani, Jun 14, 2021, 9:16 PM IST
ಹಾಸನ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಹಾಗೂ ರಸಗೊಬ್ಬರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ಕಾರ್ಯಕರ್ತರು ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಕಟ್ಟಾಯ ಗ್ರಾಮದ ಪೆಟ್ರೋಲ್ ಬಂಕ್ ಮುಂಭಾಗಕೆಲಕಾಲ ಪ್ರತಿಭಟನೆ ನಡೆಸಿದ ಕಾರ್ಯ ಕರ್ತರು, ಕೊರೊನಾ ಆರ್ಭಟ ಮತ್ತು ಲಾಕ್‌ಡೌನ್‌ನಿಂದಾಗಿ ಜನರು ಜೀವನ ನಡೆಸುವುದೇ ದುಸ್ತರ ವಾಗಿದೆ.ಆದರೂ ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರದಲ್ಲಿಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದಸರ್ಕಾರ ಪದೇ, ಪದೆ ಡೀಸೆಲ್, ಪೆಟ್ರೋಲ್ ಮತ್ತುಅಡುಗೆ ಅನಿಲ ದರ ಏರಿಕೆ ಮಾಡುತ್ತಲೇ ಬಂದಿದೆ.
ಒಂದು ಲೀ.ಪೆಟ್ರೋಲ್ ದರ ಈಗಾಗಲೇ 100ರೂ.ದಾಟಿದೆ. ಡೀಸೆಲ್ ದರ 100 ರೂ. ಸನಿಹದಲ್ಲಿದೆ.ಅಡುಗೆ ಅನಿಲದ ಸಿಲಿಂಡರ್ ದರ 800 ರೂ.ದಾಟಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದಪ್ರತಿಭಟನಾಕಾರರು, ತೈಲ ದರ ಇದೇ ರೀತಿ ಮುಂದುವರಿದರೆ ಮುಂದಿನ ಚುನಾವಣೆಗಳಲ್ಲಿ ದೇಶದಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದುಎಚ್ಚರಿಕೆ ನೀಡಿದರು.ಕಾಂಗ್ರೆಸ್ ಮುಖಂಡ, ಜಿಲ್ಲಾ ವಕೀಲರ ಸಂಘದಮಾಜಿ ಅಧ್ಯಕ್ಷ ದೇವರಾಜೇಗೌಡ, ಜಿಪಂ ಮಾಜಿಸದಸ್ಯ ಮಲ್ಲಿಗೆವಾಳು ದ್ಯಾವಪ್ಪ ಅವರು ಪ್ರತಿ ಭಟನೆಯ ನೇತೃತ್ವ ವಹಿಸಿದ್ದರು. ಕಟ್ಟಾಯ ಗ್ರಾಮದಗಿರೀಶ್, ಲೋಹಿತ್, ಗೋಪಾಲ್, ಕಲ್ಲಳ್ಳಿ ಹರೀಶ್,ಗೊರೂರು ನಾಗರಾಜು, ಗೊಳೇನಹಳ್ಳಿ ಸುನೀಲ್,ಹರೀಶ್, ನಾಗರಾಜು, ರಂಗೇಗೌಡ, ಪುಟ್ಟ ಸ್ವಾಮಿ,ಅಶೋಕ್ ನಾಯಕರಹಳ್ಳಿ, ಸ್ವಾಮೀಗೌಡ, ಜೆ.ಡಿ.ಜಯಂತಿ, ರವಿಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.