ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಭೈರೇಗೌಡ
Team Udayavani, Dec 22, 2017, 2:01 PM IST
ರಾಮನಾಥಪುರ: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಹಲವಾರು ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಬಡವರ ಪರವಾದ ಪಕ್ಷವಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಗೆರೆ ಭೈರೇಗೌಡ ಹೇಳಿದರು.
ಗಂಗೂರು ಗ್ರಾಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ದಿಂದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ಕಳೆದ ಚುನಾವಣೆ ಸಮಯದಲ್ಲಿ ನೀಡಿದ್ದ ಅನೇಕ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುವ ಮೂಲಕ 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿ ಮತ್ತೂಮ್ಮೆ ಅಧಿಕಾರಕ್ಕೆ ಬರಲು ಸಹಕರಿಸಬೇಕು ಎಂದು ಜನತೆಗೆ ಮನವಿ ಮಾಡಿದರು.
ತಾಲೂಕು ಕುರುಬರ ಸಂಘದ ನಿರ್ದೇಶಕ ಸೋಪುರ ಶ್ರೀಶೈಲಾ, ಜಿಪಂ ಸದಸ್ಯ ಡಾ. ಮಂತರ್‌ಗೌಡ, ರಾಮನಾಥಪುರ ಪ್ರಸನ್ನ ಸುಬ್ರಹ್ಮಣ್ಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸಿ. ಮಂಜೇಗೌಡ, ಮುಖಂಡರಾದ ಲೋಕನಾಥ್ ತಮ್ಮಣ್ಣೇಗೌಡ, ಬೋರೇಗೌಡ, ಹನುಮೇಗೌಡ, ಚಂದ್ರೇಗೌಡ, ರುದ್ರೇಗೌಡ, ಸಂಜೀವೇಗೌಡ,
ಚಂದ್ರೇಗೌಡ, ರಾಮೇಗೌಡ, ಸೀಗ್ರೇಗೌಡ, ರಾಮಣ್ಣ, ಕುಮಾರಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.