ಡೀಸಿ ಕಚೇರಿಗೆ ಹೊಸ ಕಟ್ಟಡ ನಿರ್ಮಾಣ


Team Udayavani, Jul 1, 2020, 7:39 AM IST

dc-kacheri

ಹಾಸನ: ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಹೊಯ್ಸಳರ ವಾಸ್ತುಶಿಲ್ಪ ಆಧರಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಜಿಲ್ಲಾಧಿಕಾರಿ  ನೂತನ ಕಚೇರಿ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಹಾಗೂ ಕರಡು ನಕ್ಷೆಯನ್ನು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈಗಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉಳಿಸಿಕೊಂಡು ಜಿಲ್ಲಾ ಖಜಾನೆಯ  ಕಟ್ಟಡ ಹಾಗೂ ಹಳೇ ನ್ಯಾಯಾಲಯದ ಕೆಲ ಪ್ರದೇಶವನ್ನು ಸೇರಿಸಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು.

ಡೀಸಿ ಕಚೇರಿ ಹಾಗೂ ಖಜಾನೆ ಕಟ್ಟಡದ ನಡುವಿನ ರಸ್ತೆ ಸೇರಿಕೊಂಡು ಹೊಸ ಕಟ್ಟಡ ನಿರ್ಮಿಸಲಾಗುವುದು ಎಂದರು.  ಶಾಸಕ ಪ್ರೀತಂ ಜೆ.ಗೌಡ ಅವರು ಜಿಲ್ಲಾಧಿ ಕಾರಿ ಕಚೇರಿಗೆ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಪುರಸ್ಕರಿಸಿದ್ದು, ತಕ್ಷಣದಿಂದಲೇ ಹೊಸ ಕಟ್ಟಡ ನಿರ್ಮಾಣದ ಪ್ರಕ್ರಿಯೆಗಳು  ಆರಂಭವಾಗಲಿವೆ. ಕೋವಿಡ್‌ 19 ಸೋಂಕು ನಿಯಂತ್ರಣಕ್ಕೆ ಬಂದ ನಂತರ ಕಟ್ಟಡ ನಿರ್ಮಾಣದ ಕಾಮಗಾರಿಗೆ ಚಾಲನೆನೀಡಲಾಗುವುದು ಎಂದು ಹೇಳಿದರು.

ಡಿಪಿಆರ್‌ ಸಿದ್ಧಪಡಿಸಲು ಸೂಚನೆ: ಹೊಸ ಕಟ್ಟಡ ನಿರ್ಮಾಣಕ್ಕೆ ತಕ್ಷಣವೇ  ಡಿಪಿಆರ್‌ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಲು ಸೂಚನೆ ನೀಡಿದ್ದು, ಡಿಪಿಆರ್‌ನೊಂದಿಗೆ ಪ್ರಸ್ತಾ ವನೆ ಸಲ್ಲಿಸಿದ ತಕ್ಷಣವೇ ಹಣ ಬಿಡುಗಡೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿ ಕಚೇರಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಾಮಾನ್ಯವಾಗಿ 25 ಕೋಟಿ ರೂ. ಅಂದಾಜು ಮಾಡಲಾಗುತ್ತದೆ. ಯೋಜನಾ ವರದಿ ಆಧರಿಸಿ ಹಾಸನ ಜಿಲ್ಲಾಧಿಕಾರಿ ಹೊಸ ಕಟ್ಟಡ ನಿರ್ಮಾಣಕ್ಕೆ  ಮಂಜೂರು ಮಾಡಲಾಗುವುದು ಎಂದರು.

ಈಗಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡವು 60 -70 ವರ್ಷ ಹಳೆಯ ಕಟ್ಟಡ. ಕಚೇರಿಗೆ ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿದೆ ಹಾಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. ಹಳೇ  ಕಟ್ಟಡವನ್ನು ಉಳಿಸಿ ಕೊಂಡು ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವ ಅಶೋಕ್‌ ಅವರು ಸ್ಪಷ್ಟಪಡಿಸಿದರು. ಶಾಸಕರಾದ ಎಚ್‌.ಕೆ. ಕುಮಾರಸ್ವಾಮಿ, ಪ್ರೀತಂ ಜೆ.ಗೌಡ, ಕೆ.ಎಸ್‌. ಲಿಂಗೇಶ್‌, ಜಿಲ್ಲಾಧಿಕಾರಿ ಆರ್‌. ಗಿರೀಶ್‌,  ಎಸ್ಪಿ ಶ್ರೀನಿವಾಸ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.