ಬಾಲಕಾರ್ಮಿಕರ ರಕ್ಷಣೆಗೆ ನಿರಂತರ ಕಾರ್ಯಾಚರಣೆ

Team Udayavani, Jan 1, 2020, 3:00 AM IST

balakarmikara

ಹಾಸನ: ಮಕ್ಕಳ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ವ್ಯಾಪಾರ ಸಂಸ್ಥೆಗಳಲ್ಲಿ, ಮನೆಗಳಲ್ಲಿ 14 ವರ್ಷದೊಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ನಿರಂತರ ಕಾರ್ಯಾಚರಣೆಗಳನ್ನು ನಡೆಸಬೇಕೆಂದು ನಿರ್ದೇಶನ ನೀಡಿದರು.

ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಕ್ರಮ: ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಕಡ್ಡಾಯವಾಗಿ ದೂರು ದಾಖಲಿಸಿ, ಶಿಕ್ಷೆಗೆ ಒಳಪಡಿಸಬೇಕು. ಬಾಲಕಾರ್ಮಿಕರನ್ನು ರಕ್ಷಿಸಿದ ಮೇಲೆ ಅವರನ್ನು ಬಾಲಕಾರ್ಮಿಕ ಗೃಹ ಅಥವಾ ಬಾಲ ಮಂದಿರದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಉಳಿಸಬೇಕು ಎಂದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಲ್ಲಿ 2019-20ನೇ ಸಾಲಿನಲ್ಲಿ ಕೆಪಿಪಿಟಿ ಕಾಯ್ದೆ ಪ್ರಕಾರ ಇದುವರೆಗೂ ಖರ್ಚಾದ ಅನುದಾನಕ್ಕೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು. 2018-19 ನೇ ಸಾಲಿನ ಅಂತ್ಯಕ್ಕೆ ಬಳಕೆಯಾಗದೇ ಉಳಿದ 44.31ಲಕ್ಷ ರೂ. ಅನುದಾನವನ್ನು ಸರ್ಕಾರಕ್ಕೆ ಹಿಂತಿರುಗಿಸಬೇಕು ಎಂದು ನಿರ್ದೇಶನ ನೀಡಿದರು.

ಕ್ರಿಯಾ ಯೋಜನೆ ರೂಪಿಸಿ: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಗೆ ಖಾತೆಯಲ್ಲಿ 10 ಸಾವಿರ ರೂ.ಗಳ ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿ ನೀಡಿದ ಜಿಲ್ಲಾಧಿಕಾರಿ, 2019-20ನೇ ಸಾಲಿಗೆ ಎಂಎಸ್‌ಒಪಿಎಸ್‌ ಶೀರ್ಷಿಕೆಯಲ್ಲಿ ಬಿಡುಗಡೆಯಾಗಿರುವ 3ಲಕ್ಷ ರೂ. ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ನಿರ್ದೇಶಿಸಿದರು.

ಕಾರ್ಯಾಗಾರ ನಡೆಸಿ: ಎಂಎಸ್‌ಒಪಿಎಸ್‌ ಅನುದಾನದಲ್ಲೂ ಜಿಲ್ಲಾದ್ಯಂತ ಬಾಲ ಕಾರ್ಮಿಕ ತಡೆ ಕುರಿತು ಗ್ರಾಮಲೆಕ್ಕಿಗರಿಗೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ, ಕಂದಾಯ ಇಲಾಖಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಸಬೇಕು. ಕೊಳಚೆ ಪ್ರದೇಶಗಳಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲು, ಗೋಡೆ ಬರಹಗಳ ಮೂಲಕ ಬಾಲ ಕಾರ್ಮಿಕ ಪದ್ಧತಿ ತಡೆ ಕುರಿತು ಮಾಹಿತಿ ನೀಡುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಬೇಕು.

ಬಾಲ ಕಾರ್ಮಿಕರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸುವಂತೆ ಕಾರ್ಮಿಕ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಎಚ್‌. ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಬಿ.ನವೀನ್‌ ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಕೆ.ಜಿ.ದಿಲೀಪ್‌, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.