ಮತಾಂತರ ಆರೋಪಕ್ಕೆ ಖಂಡನೆ
Team Udayavani, Oct 6, 2021, 5:40 PM IST
ಹಾಸನ: ಶಾಸಕ ಗೂಳಿಹಟ್ಟಿ ಶೇಖರ್ ಅವರು ಮಾಡಿರುವ ಮತಾಂತರದ ಆರೋಪ ಖಂಡಿಸಿ ಹಾಸನ ಜಿಲ್ಲಾ ಕ್ರೈಸ್ತರ ಹಿತ ರಕ್ಷಣಾ ವೇದಿಕೆ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರಾರ್ಥನೆ ಮಾಡುತ್ತಲೇ ಬೃಹತ್ ಮೆರವಣಿಗೆಯಲ್ಲಿ ಬಂದ ಕ್ರೈಸ್ತ ಸಮುದಾಯದವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು.
ಕಳೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತನ್ನ ತಾಯಿಯೂ ಸೇರಿ ತನ್ನ ಕ್ಷೇತ್ರದ ಸುಮಾರು 2 ಸಾವಿರ ಜನರನ್ನು ಕೈಸ್ತರು ಮತಾಂತರ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ತನಿಖೆಯಿಂದ ದೃಢಪಟ್ಟಿದ್ದು, ಶಾಸಕರ ಆರೋಪದಲ್ಲಿ ಹುರುಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಮೋದಿ ಆಡಳಿತದಿಂದ ದೇಶಕ್ಕೆ ಹೊಸ ಶಕ್ತಿ: ರಾಘವೇಂದ್ರ
ಪ್ರಚೋಧನೆ: ಮತಾಂತರದ ಆರೋಪ ಮಾಡುತ್ತಾ ದೇಶಾದ್ಯಂತ ಚರ್ಚುಗಳ ಮೇಲೆ ದಾಳಿ, ಕ್ರೈಸ್ತ ಧರ್ಮಗುರು, ಅಮಾಯಕ ಭಕ್ತರ ಮೇಲೆ ಹಲ್ಲೆ, ಆಸ್ತಿ ಪಾಸ್ತಿಗೆ ಹಾನಿ ಕೃತ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇಂತಹ ಬೆಳವಣಿಗೆಗೆ ಬಿಜೆಪಿ ಮುಖಂಡರೇ ಕಾರಣ. ಕಂದಾಯ ಸಚಿವ ಆರ್.ಅಶೋಕ್, ಸಂಸದ ಪ್ರತಾಪ್‌ಸಿಂಹ ಅವರ ಹೇಳಿಕೆ ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಚೋಧನೆ ನೀಡುವಂತಿವೆ ಎಂದರು.
ಹಿಂದೂ ಜಾಗರಣ ವೇದಿಕೆ ಕ್ರೈಸ್ತ ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣ ನಡೆಯುತ್ತಿವೆ. ಕ್ರೈಸ್ತ ಮಿಷನರಿಗಳು ಗುಂಡು ಸೂಜಿಯಿಂದ ವಿಮಾನ ತಯಾರಿಕೆ ಮಾಡುವವರೆಗೂ ದೇಶಕ್ಕೆ ಕೊಡುಗೆ ನೀಡಿವೆ ಎಂಬುದನ್ನು ಮತಾಂತರದ ಆರೋಪ ಮಾಡುತ್ತಿರುವವರು ತಿಳಿದುಕೊಳ್ಳಬೇಕು.
ಕ್ರೈಸ್ತರು ಶಾಂತಿಪ್ರಿಯರಾಗಿದ್ದು ಯಾರ ಮೇಲೂ ದಾಳಿ ಮಾಡಿದ ಉದಾಹರಣೆ ಇಲ್ಲ ಎಂದು ಕ್ರೆçಸ್ತ ಮುಖಂಡರು ಪ್ರತಿಪಾದಿಸಿದರು.ಅಖೀಲ ಭಾರತ ಕ್ರೆçಸ್ತ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷ ಪ್ರಜ್ವಲ್ ಸ್ವಾಮಿ, ರಾಜ್ಯ ಕ್ರೆçಸ್ತ ಸಂಘಗಳ ಒಕ್ಕೂಟದ ಸುನೀಲ್ ಕುಮಾರ್, ಜಿಲ್ಲಾಧ್ಯಕ್ಷ ರಾಜೇಶ್, ಉಪಾಧ್ಯಕ್ಷ ಕೆ.ಮೂರ್ತಿ, ಕಾರ್ಯದರ್ಶಿ ಎಚ್.ಎಂ.ಸುರೇಶ್ ಪೌಲ್, ಜಂಟಿ ನಿರ್ದೇಶಕ ಎ.ಬಿ.ಪ್ರಕಾಶ್, ಖಜಾಂಚಿ ಸ್ಟೀವನ್ಸನ್, ಜಿಲ್ಲಾ ಕ್ರೆçಸ್ತರ ಹಿತ ರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಜೀವನ್ ಪ್ರಕಾಶ್, ಸದಸ್ಯರಾದ ಎಸ್.ಆರ್.ಲಿಂಗರಾಜು, ಜಿ.ಎಸ್. ಸತೀಶ್ ಮತ್ತಿತರರು ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.