ಬೇಲೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ವಿಶೇಷ ವಾರ್ಡ್‌

Team Udayavani, Feb 11, 2020, 3:00 AM IST

beluru-as

ಬೇಲೂರು: ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರಗಳಾದ ಬೇಲೂರು, ಹಳೇಬೀಡು ದೇವಾಲಯಗಳಿಗೆ ವಿದೇಶಿ ಪ್ರವಾಸಿಗರು ಅಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಮಾರಕ ರೋಗ ಕೊರೊನಾ ಪರಿಶೀಲನೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ತೆರೆಯಲಾಗಿದೆ.

ಚೀನಾದಲ್ಲಿ ನೂರಾರು ಮಂದಿ ಸಾವು: ಚೀನಾ ದೇಶದಲ್ಲಿ ಕೊರೊನಾ ವೈರಸ್‌ನಿಂದ ನೂರಾರು ಜನರು ಮೃತಪಟ್ಟಿದ್ದಾರೆ. ದೇಶದ ಕೇರಳ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ರೋಗದ ಸೋಂಕಿನ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚನ್ನಕೇಶವ ದೇವಾಲಯಕ್ಕೆ ಪ್ರತಿ ದಿನ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಈ ರೋಗದ ಭೀತಿಯಿಂದ ಇಲ್ಲಿನ ಸರ್ಕಾರಿ ಆಸ್ಪತೆಯ ಮೊದಲನೆ ಅಂತಸ್ತಿನ ಕೊಠಡಿ ಸಂಖ್ಯೆ 85 ರಲ್ಲಿ ವಿಶೇಷ ವಾರ್ಡ್‌ ತೆರೆದು ಸಿದ್ಧತೆ ಕೈಗೊಳ್ಳಲಾಗಿದೆ.

ಆರೋಗ್ಯ ಇಲಾಖೆಯಿಂದ ಮುಂಜಾಗ್ರತೆ: ಈ ಬಗ್ಗೆ ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ಉದಯವಾಣಿಯೊಂದಿಗೆ ಮಾತನಾಡಿ, ಕೊರೊನಾ ವೈರಸ್‌ ಬಗ್ಗೆ ಈಗಾಗಲೇ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿ ತೆರೆದಿದ್ದು, ಸಿಬ್ಬಂದಿಯನ್ನು ನೇಮಿಸಲಾಗಿದೆ. ತಾಲೂಕಿನ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜನರಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

ಕೊರೊನಾ ರೋಗಕ್ಕೆ ಔಷಧಿ ಇಲ್ಲದಿದ್ದರೂ ಸಹ ಎಚ್‌.1 ಎನ್‌.1 ರೀತಿಯಲ್ಲಿ ಹರಡದಂತೆ ಜಾಗ್ರತೆ ವಹಿಸಿರುವುದಾಗಿ ತಿಳಿಸಿದರು. ರಾಜ್ಯದಿಂದ ಕೊರೊನಾದ ಬಗ್ಗೆ ಪ್ರಚಾರ ಪಡಿಸಲು ವಾಹನವೊಂದು ಬಂದಿದ್ದು ಗ್ರಾಮ ಸಭೆ ಮತ್ತು ಜನಗಳು ಸೇರುವ ಕಡೆ ರೋಗದ ಬಗ್ಗ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಪ್ರವಾಸಿ ಕೇಂದ್ರಗಳಾದ ಬೇಲೂರು ಮತ್ತು ಹಳೇಬೀಡುಗಳಲ್ಲಿ ವೀಶೇಷ ಕಾಳಜಿ ವಹಿಸುವುದಾಗಿ ತಿಳಿಸಿದರು.

ವಿದೇಶಿ ಪ್ರವಾಸಿಗರು ದೇವಾಲಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿ ದೇವಾಲಯದಲ್ಲಿ ಪ್ರತ್ಯೇಕ ಆರೋಗ್ಯ ಸಿಬ್ಬಂದಿ ನೇಮಕ ಮಾಡಿ ತಪಾಸಣೆಗೆ ವ್ಯವಸ್ಥೆ ಮಾಡಲಾಗುವುದು. ದೇವಾಲಯಕ್ಕೆ ಬರುವ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಲಾಗುವುದು.
-ವಿದ್ಯುಲ್ಲತಾ, ಚನ್ನಕೇಶವ ದೇಗುಲ ಕಾರ್ಯನಿರ್ವಹಣಾಧಿಕಾರಿ

* ಡಿ.ಬಿ.ಮೋಹನ್‌ಕುಮಾರ್‌

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.