ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ಭ್ರಷ್ಟಾಚಾರ


Team Udayavani, Aug 18, 2020, 2:45 PM IST

ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ಭ್ರಷ್ಟಾಚಾರ

ಹಾಸನ: ಹಿರಿತನ ಕಡೆಗಣಿಸಿ ನೋಂದಣಿ ಮಾಡುವುದು ಸೇರಿದಂತೆ ಹಾಸನದ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಆರೋಪಿಸಿದರು.

ಹಾಸನದ ಕುವೆಂಪು ನಗರದಲ್ಲಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ದಿಢೀರ್‌ ಭೇಟಿ ನೀಡಿ ಮಾಹಿತಿ ಪಡೆದ ಅವರು, ಸಬ್‌ ರಿಜಿಸ್ಟ್ರಾರ್‌ ಮತ್ತು ಜಿಲ್ಲಾ ರಿಜಿಸ್ಟ್ರಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಶೇ.10 ಲಂಚ: ಕಳೆದ ಏಪ್ರಿಲ್‌ನಿಂದ ಆನ್‌ ಲೈನ್‌ನಲ್ಲಿ ಮನವಿ ಸಲ್ಲಿಸಿ ಹಿರಿತನ ಆಧರಿಸಿ ನೋಂದಣಿ ಮಾಡಬೇಕು. ಆದರೆ ಹಾಸನ ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಹಿರಿತನ ಪಾಲಿಸದರೆ ಲಂಚ ಕೊಟ್ಟವರಿಗೆ ನೋಂದಣಿ ಮಾಡಲಾಗುತ್ತಿದೆ. 10 ಲಕ್ಷ ರೂ. ಆಸ್ತಿ ನೋಂದಣಿಗೆ 10 ಸಾವಿರ ರೂ., 20 ಲಕ್ಷ ರೂ. ಆಸ್ತಿ ನೋಂದಣಿಗೆ 20 ಸಾವಿರ ರೂ. ನಂತೆ ಶೇ.10 ರಷ್ಟು ಲಂಚದ ವ್ಯವಹಾರ ನಡೆಯುತ್ತಿದೆ ಎಂಬ ದೂರಿದೆ.

ಏಜೆಂಟರ್ಯಾರು ತಿಳಿಸಿ: ಪ್ರತಿ ತಿಂಗಳೂ 4 ಲಕ್ಷ ರೂ.ಗಳನ್ನು ಮಾಮೂಲಿ ಕೊಡಬೇಕೆಂದು ನೋಂದಣಿಗೆ ಬರುವವರನ್ನು ಸುಲಿಗೆ ಮಾಡಲಾಗುತ್ತಿದೆ. ಯಾರಿಗೆ ಪ್ರತಿ ತಿಂಗಳೂ ಯಾವ ರಾಜಕಾರಣಿಗೆ ಅಥವಾ ಅಧಿಕಾರಿಗೆ ಮಾಮೂಲಿ ಕೊಡುತ್ತಿದ್ದೀರಿ ಹೇಳಿ. ಲಂಚ ವಸೂಲಿಗೆ ಕಚೇರಿಯಲ್ಲಿಯೇ ಒಬ್ಬ ಏಜೆಂಟ್‌ನನ್ನು ನೇಮಿಸಿಕೊಂಡಿದ್ದೀರಿ ಎಂಬ ಮಾಹಿತಿ ಇದೆ. ಯಾರು ಆತ ತಿಳಿಸಿ ಎಂದು ಪಟ್ಟು ಹಿಡಿದರು.

ನಿಯಮ ಉಲ್ಲಂಘಿಸಿದ್ದೀರಿ: ಸೋಮವಾರ ನೋಂದಣಿಯಾಗಿರುವ ಮಾಹಿತಿ ಪಡೆದ ರೇವಣ್ಣ, ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೆ 7 ನೋಂದಣಿಯಾಗಿದ್ದು, ಸಂಜೆ  5 ಗಂಟೆಗೆ ನೋಂದಣಿಯಾಗಬೇಕಾಗಿದ್ದ 71ನೇ ಪ್ರಕರಣದ ನೋಂದಣಿ 11 ಗಂಟೆ ಯೊಳಗೆ ಮುಗಿದಿದೆ. ಕೇವಲ ಎರಡು ಗಂಟೆಯಲ್ಲೇ ಎರಡು ಹಿರಿತನದ ಪ್ರಕರಣ ಗಳನ್ನು ಏಕೆ ನಿಯಮ ಉಲ್ಲಂ ಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ರಿಜಿಸ್ಟರ್‌ ಅವರನ್ನೂ ಕಚೇರಿಗೆಕರೆಸಿಕೊಂಡು ಅಕ್ರಮಗಳ ಬಗ್ಗೆ ತರಾಟೆಗೆ  ತೆಗೆದುಕೊಂಡ ಅವರು ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದುದ್ದ ಮತ್ತು ಶಾಂತಿಗ್ರಾಮ ಹೋಬಳಿಗಳ ಜನರು ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಹಿರಿತನ ಕಡೆಗಣಿಸಿ ತಿಂಗಳುಗಟ್ಟಲೆ ನೋಂದಣಿ ಮಾಡದೆ ಸತಾಯಿಸುತ್ತಿದ್ದೀರಿ. ಹಾಗೆಯೇ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಹಾಸನ ತಾಲೂಕು ಕಟ್ಟಾಯ ಹೋಬಳಿ ಜನರ ಪ್ರಕರಣಗೂ ಸಕಾಲದಲ್ಲಿ ನೋಂದಣಿಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು ಅರ್ಧಗಂಟೆ ಕಚೇರಿಯಲ್ಲಿಯೇ ಕುಳಿತು ಸಬ್‌ ರಿಜಿಸ್ಟ್ರಾರ್‌, ರಿಜಿಸ್ಟಾರ್‌ರನ್ನು ತರಾಟೆಗೆ ತೆಗೆದುಕೊಂಡ ರೇವಣ್ಣ ಅವರು, ಯಾವುದೋ ರಾಜಕಾರಣಿಯ ಒತ್ತಡಕ್ಕೆ ಮಣಿದು ಏಜೆಂಟರನ್ನು ಇಟ್ಟುಕೊಂಡು ಜನರಿಂದ ವಸೂಲಿ ಮಾಡಿ ಪ್ರತಿ ತಿಂಗಳೂ ಮಾಮೂಲಿ ಕೊಡುವುದನ್ನು ಬಿಡಿ. ಇಲ್ಲದಿದ್ದರೆ ನನ್ನ ಜನರನ್ನು ಬಿಟ್ಟು ಕಮಿಷನ್‌ ಏಜೆಂಟರನ್ನು ಅಟ್ಟಾಡಿಸಿ ಹೊಡೆಸುತ್ತೀನಿ ಎಂದು ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅನಿವಾರ್ಯ ಸಂದರ್ಭಗಳಲ್ಲಿ ಒಂದೆರಡು ಪ್ರಕರಣಗಳನ್ನು ಹಿರಿತನ ಕಡೆಗಣಿಸುವುದನ್ನು ಸಹಿಸಬಹುದು. ಆದರೆ ಲಂಚಕ್ಕಾಗಿ ನಿಯಮ ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಇನ್ನು ಮುಂದೆ ಹಾಸನದ ಯಾವುದೇ ಕಚೇರಿಯಲ್ಲಿಯೂ ಭ್ರಷ್ಟಾಚಾರ ನಡೆಯದಂತೆ ಹದ್ದಿನ ಕಣ್ಣಿಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.