ಚನ್ನಕೇಶವ ದೇಗುಲ ಹಿಂಭಾಗ ಕಟ್ಟಡ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ


Team Udayavani, Aug 9, 2019, 3:11 PM IST

hasan-tdy-2

ಬೇಲೂರು: ಇಲ್ಲಿನ ಚನ್ನಕೇಶವಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಜೆಎಂಎಫ್ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ದೇಗುಲದ ಆವರಣದಲ್ಲಿ ಕಟ್ಟಡ ನಿರ್ಮಾಣ ವಿರೋಧಿಸಿ ಬಳ್ಳೂರು ಉಮೇಶ್‌ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್‌, ಐತಿಹಾಸಿಕ ದೇವಾಲಯಗಳ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಪುರಾತತ್ವ ಇಲಾಖೆ ನಿಯಮ ರೂಪಿಸಿದೆ. ಆದರೆ ಈ ನಿಯಮಕ್ಕೆ ವಿರುದ್ಧವಾಗಿ ದೇವಾಲಯದ ಹಿಂಬದಿ ಪ್ರವಾಸೋದ್ಯಮ ಇಲಾಖೆಯಿಂದ ಕಟ್ಟಡವೊಂದನ್ನು ನಿರ್ಮಿಸಲಾಗುತ್ತಿದೆ. ಇದು ನಿಯಮ ಬಾಹಿರವಾಗಿರುವುದ ರಿಂದ ಕಟ್ಟಡ ನಿರ್ಮಿಸದಂತೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದ್ದೆವು. ನ್ಯಾಯಾಲಯ ಅರ್ಜಿ ಪರಿಶೀಲಿಸಿ ಇಂದು ತಡೆಯಾಜ್ಞೆ ನೀಡಿದೆ ಎಂದು ತಿಳಿಸಿದರು.

ಎಲ್ಲರಿಗೂ ಅನುಮತಿ ನೀಡಲಿ: ಸಾರ್ವಜನಿಕರಿಗೊಂದು ಕಾನೂನು ಇಲಾಖೆಗೊಂದು ಕಾನೂನು ಸರಿಯಲ್ಲ. ಯಾವುದೇ ಇಲಾಖೆಯಿಂದಾಗಲಿ ಕಟ್ಟಡ ನಿರ್ಮಿಸುವುದೇ ಆದಲ್ಲಿ 100 ಮೀ. ನಿಯಮವನ್ನು ರದ್ದುಗೊಳಿಸಿ ನಂತರ ಕಟ್ಟಡ ಕಟ್ಟಲಿ. ಇದರಿಂದ 100 ಮೀ. ವ್ಯಾಪ್ತಿಯಲ್ಲಿನ ನಿವಾಸಿಗಳು ಮನೆ, ನಿವೇಶನ ಮಾರಲಾಗದೇ ಮೂಲಭೂತ ಸೌಕರ್ಯ ಕಲ್ಪಿಸಿಕೊಳ್ಳಲಾ ಗದೇ, ಮನೆ ದುರಸ್ತಿ ಮಾಡಿಕೊಳ್ಳುವುದಕ್ಕೂ ಸಾಧ್ಯವಾಗುತ್ತಿಲ್ಲ. ಮನೆಯನ್ನು ಅಡವಿಟ್ಟು ಸಾಲ ಪಡೆಯಲೂ ಆಗದಂತ ಸ್ಥಿತಿಯಲ್ಲಿದ್ದಾರೆ. ಈ ನಿಯಮ ರದ್ದಾದರೆ ಈ ನಿವಾಸಿಗಳಿಗೆ ಅನುಕೂಲ ಆಗಲಿದೆ. ಇಲ್ಲದಿದ್ದರೆ ಯಾರೂ ಯಾವುದೇ ತರಹದ ಕಟ್ಟಡ ನಿರ್ಮಿಸುವುದು ತರವಲ್ಲ ಎಂದು ತಿಳಿಸಿದರು.

ಬೇರೆಕಡೆ ನಿರ್ಮಿಸಲಿ: ದೇವರ ರಥೋತ್ಸವದ ವೇಳೆ, ಸಾವಿರಾರು ಭಕ್ತರು ಆಗಮಿಸುತ್ತಾರೆ. ಕಡೂರಿನಿಂದ ಎತ್ತಿನಗಾಡಿಗಳಲ್ಲಿ ಆಗಮಿಸುವ ಭಕ್ತರು ಉಳಿದುಕೊಳ್ಳಲು ಹಾಗೂ ವಾಹನಗಳ ನಿಲುಗಡೆಗೆ ಸ್ಥಳದ ಕೊರತೆಯಿದೆ. ದೇಗುಲ ಹಿಂಭಾಗದಿಂದ ಮೂಡಿಗೆರೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಇದೆ. ಇದರ ನಡುವೆ ಕಟ್ಟಡಗಳ ನಿರ್ಮಿಸುವುದು ಸರಿಯಲ್ಲ. ಕಿರಿದಾದ ಸ್ಥಳದಲ್ಲೇ ರಥೋತ್ಸವ ನಡೆಯುತ್ತಿದೆ. ವಸತಿಗೃಹ, ವಾಣಿಜ್ಯ ಮಳಿಗೆ ಇನ್ನಿತರ ಕಟ್ಟಡಗಳನ್ನು ಬೇರೆ ಸ್ಥಳದಲ್ಲಿ ನಿರ್ಮಿಸಲಿ ಎಂದರು.

ದೇಗುಲದ ಗೋಡೆಯ ಸಮೀಪ ವಿದ್ಯುತ್‌ ಕಂಬವಿವುದರಿಂದ ಕಳ್ಳರು ದೇಗುಲದೊಳಕ್ಕೆ ಸುಲಭವಾಗಿ ಬರುವ ಸಾಧ್ಯತೆಯಿದ್ದು, ವಿದ್ಯುತ್‌ ಕಂಬಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಇಲಾಖೆ ಮುಂದಾಗಬೇಕು ಎಂದರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.