ಹಾಸನ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್ 19
Team Udayavani, May 14, 2020, 6:44 AM IST
ಹಾಸನ: ಜಿಲ್ಲೆಯಲ್ಲಿ ಬುಧವಾರ ಮತ್ತೆ ನಾಲ್ವರಲ್ಲಿ ಕೋವಿಡ್ 19 ಪಾಸಿಟಿವ್ ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 9ಕ್ಕೆ ಏರಿದೆ. ಮುಂಬೈನಿಂದ ಚನ್ನರಾಯಟ್ಟಣ ತಾಲೂಕು ಶ್ರವಣಬೆಳಗೊಳ ಹೋಬಳಿಯ ಗ್ರಾಮವೊಂದಕ್ಕೆ ಖಾಸಗಿ ವಾಹನದಲ್ಲಿ ಬರುತ್ತಿದ್ದ ಪತಿ (43), ಪತ್ನಿ (38) ಮತ್ತು 17 ವರ್ಷ ಹಾಗೂ 13 ವರ್ಷದ ಇಬ್ಬರು ಮಕ್ಕಳನ್ನು ಅರಸೀಕೆರೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿ ಕ್ವಾರಂಟೈನ್‌ನಲ್ಲಿಡ ಲಾಗಿತ್ತು.
ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ನಾಲ್ವರನ್ನೂ ಹಾಸನದ ಕೋವಿಡ್ 19 ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಮಾಹಿತಿ ನೀಡಿದರು.
ಮೇ 12ರಂದು ಆಗಮಿಸಿದ್ದರು: ನಾಲ್ವರು ಸೋಂಕಿತರು ಮೇ 12ರಂದು ಮಧ್ಯಾಹ್ನ ಹಾಸನ ಜಿಲ್ಲೆಗೆ ಖಾಸಗಿ ವಾಹನದಲ್ಲಿ ಆಗಮಿಸಿದ್ದ ಅವರು ಚೆಕ್‌ಫೋಸ್ಟ್‌ನಿಂದ ನೇರವಾಗಿ ಕೋವಿಡ್ 19 ತಪಾಸಣಾ ಕೇಂದ್ರಕ್ಕೆ ತೆರಳಿ ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದಾರೆ. ಹಾಗಾಗಿ ಅವರೆಲ್ಲ ತಮ್ಮ ಊರು ಸೇರಿದಂತೆ ಜಿಲ್ಲೆಯ ಬೇರೆ ಯಾವುದೇ ಸ್ಥಳಕ್ಕೆ ಪ್ರಯಾಣ ಮಾಡಿಲ್ಲವೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
6 ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್: ಸಮುದಾಯ ಕ್ವಾರಂಟೈನ್‌ಗಾಗಿ 6 ಹಾಸ್ಟೆಲ್ ಗಳನ್ನು ಗುರುತಿಸಲಾಗಿದ್ದು, ಜಿಲ್ಲೆಗೆ ಹೊರ ರಾಜ್ಯಗಳಿಂದ ವಲಸೆ ಬಂದ ವ್ಯಕ್ತಿಗಳನ್ನು ಆ ಸ್ಥಳಗಳಲ್ಲಿ ಇರಿಸಲಾಗುವುದು. ಹೊರಗಿ ನಿಂದ ಬರುವವರನ್ನು ಚೆಕ್‌ಪೋಸ್ಟ್ ಗಳಲ್ಲಿ ಸರಿಯಾಗಿ ಮಾಹಿತಿ ಪಡೆದು ತಪಾಸಣೆಗೆ ಒಳಪಡಿಸದೇ ಜಿಲ್ಲೆಯೊಳಗೆ ಬಿಟ್ಟಲ್ಲಿ ಅಂತಹವರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಹೊರ ರಾಜ್ಯಗಳಿಂದ ಜಿಲ್ಲೆಗೆ 1,200 ಜನರು ಬರಲು ಈವರೆಗೆ ಅನುಮತಿ ನೀಡಲಾಗಿತ್ತು. ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಅಲ್ಲದೇ ಹೊಸದಾಗಿ ಜಿಲ್ಲೆಗೆ ಬರಲು ಅರ್ಜಿ ಸಲ್ಲಿಸುವವರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರೂ ಹಾಜರಿದ್ದರು.
57 ಮಂದಿಗೆ ಐಸೋಲೇಷನ್: ಮೇ 12 ರಂದು ಮುಂಬೈನಿಂದ ಜಿಲ್ಲೆಗೆ ಬಂದು ಕೊರೋನಾ ಸೋಂಕು ದೃಢಪಟ್ಟಿದ್ದ ಐವರು ಸೋಂಕಿತರ ಜೊತೆಗೆ ಆ ಸ್ಥಳದಲ್ಲೇ ಕ್ವಾರಂಟೈನ್ ನಲ್ಲಿದ್ದು, ನಿಕಟ ಸಂಪರ್ಕ ಹೊಂದಿದ್ದ, 57 ಜನರನ್ನು ಜಿಲ್ಲೆಯ ಕೋವಿಡ್ 19 ಆಸ್ಪತ್ರೆಯಲ್ಲಿರುವ ಐಸೋಲೇಷನ್ ವಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಚನ್ನರಾಯಪಟ್ಟಣ ದಲ್ಲಿ ಈಗಲೂ 133 ಜನರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆಂದು ಆರ್. ಗಿರೀಶ್ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.