ಹಾಸನ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 441ಕ್ಕೇರಿಕೆ
Team Udayavani, Jul 3, 2020, 6:27 AM IST
ಹಾಸನ: ಜಿಲ್ಲೆಯಲ್ಲಿ ಕೋವಿಡ್ 19 ಆರ್ಭಟ ಮುಂದುವರಿದಿದ್ದು, ಗುರು ವಾರ 15 ಮಂದಿಗೆ ಸೋಂಕು ದೃಢಪಟ್ಟಿದೆ. ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 5ಕ್ಕೇರಿದೆ. ಇದು ವರೆಗೂ ಒಟ್ಟು 441 ಮಂದಿಗೆ ಕೋವಿಡ್ 19 ಹರಡಿದ್ದು, ಆಸ್ಪತ್ರೆಯಲ್ಲಿ 190 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಮಧುಮೇಹಿ ರೋಗಿಯಾಗಿದ್ದ ಚನ್ನರಾಯಪಟ್ಟಣ ತಾಲೂಕಿನ 65 ವರ್ಷದ ಪುರುಷ ಜ್ವರದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರನ್ನು ಬುಧವಾರ ರಾತ್ರಿ ಹಾಸನದ ಕೋವಿಡ್ 19 ಆಸ್ಪತ್ರೆಗೆ ಕರೆತಂದು ದಾಖಲಾಗಿತ್ತು. ಅವರು ಗುರುವಾರ ಬೆಳಗ್ಗೆ 7.45ರ ವೇಳೆಗೆ ಸಾವನ್ನಪ್ಪಿದರು. ಅವರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ. ಕೆ.ಎಂ. ಸತೀಶ್‌ಕುಮಾರ್ ಅವರು ತಿಳಿಸಿದ್ದಾರೆ. ಗುರುವಾರ ವರದಿಯಾದ 15 ಕೋವಿಡ್ 19 ಪಾಸಿಟಿವ್ ಪ್ರಕರಣಗಳಲ್ಲಿ ಹಾಸನ ತಾಲೂಕಿನ 6 ಮಂದಿ ಸೋಂಕಿ ತರ ಪೈಕಿ ಇಬ್ಬರು ಮಹಾರಾಷ್ಟ್ರ ಪ್ರಯಾ ಣದ ಹಿನ್ನೆಯ ಹೊಂದಿದವರಿದ್ದು,
ಒಬ್ಬರು ಆರೋಗ್ಯ ಕಾರಕರ್ತರು ಹಾಗೂ ಒಬ್ಬರು ಶಸ್ತ್ರಚಿಕಿತ್ಸೆಗೆ ದಾಖಲಾ ಗಿದ್ದಾರೆ. ಅರಸೀಕೆರೆ ತಾಲೂಕಿನ ನಾಲ್ವರಲ್ಲಿ ಕೋವಿಡ್ 19 ಸೋಂಕಿತರ ಸಂಪರ್ಕಿತರಿದ್ದಾರೆ. ಹೊಳೆನರಸೀ ಪುರ ಹಾಗೂ ಅರಕಲಗೂಡು ತಾಲೂಕಿನ ತಲಾ ಇಬ್ಬರು ಮತ್ತು ಚನ್ನರಾಯಪಟ್ಟಣ ತಾಲೂಕಿನ ಒಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.