ಕೋವಿಡ್ ಸೋಂಕಿತರ ಸಂಖ್ಯೆ 1738ಕ್ಕೆ ಏರಿಕೆ
Team Udayavani, Jul 28, 2020, 8:42 AM IST
ಹಾಸನ: ಜಿಲ್ಲೆಯಲ್ಲಿ ಸೋಮವಾರ 65 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1738 ಕ್ಕೇರಿದ್ದು, ಸಾವಿನ ಸಂಖ್ಯೆ 45ಕ್ಕೆ ಏರಿದೆ.
ಕೋವಿಡ್ ಸೋಂಕಿತ 72 ವರ್ಷದ ವೃದ್ಧ ಪುರುಷ ಸೋಮವಾರ ಮೃತಪಟ್ಟಿದ್ದು, ಅವರು ಜು.13 ರಂದು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೂತ್ರಪಿಂಡ ಸಮಸ್ಯೆ, ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಎಂ.ಸತೀಶ್‌ಕುಮಾರ್ ತಿಳಿಸಿದ್ದಾರೆ.
ಸೋಮವಾರ ಸೋಂಕು ದೃಢಪಟ್ಟಿರುವ 65 ಮಂದಿಯ ಪೈಕಿ ಹಾಸನ ತಾಲೂಕಿಗೆ ಸೇರಿದ 27 ಮಂದಿ, ಚನ್ನರಾಯಪಟ್ಟಣ ತಾಲೂಕಿನ 13, ಹೊಳೆನರಸೀಪುರ ತಾಲೂಕಿನ 9 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅರಸೀಕೆರೆ ತಾಲೂಕಿನ 5 ಮಂದಿ, ಅರಕಲಗೂಡು ತಾಲೂಕಿನ 4, ಆಲೂರು ಮತ್ತು ಸಕಲೇಶಪುರ ತಾಲೂಕಿನ ತಲಾ ಮೂವರಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ದೃಢ ಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 847 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ 19 ಮಂದಿ ಸೇರಿ ಒಟ್ಟು 846 ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.