ಪ್ರಸಿದ್ಧ ದ್ವಾರಸಮುದ್ರ ಕೆರೆ ಏರಿ ಮಧ್ಯದಲ್ಲೇ ಬಿರುಕು

Team Udayavani, Nov 23, 2020, 6:50 PM IST

hsn-tdy-1

ಹಳೇಬೀಡು: ಹೋಬಳಿ ಕೇಂದ್ರದಲ್ಲಿನ ಪ್ರಸಿದ್ಧ ದ್ವಾರಸಮುದ್ರ ಕೆರೆ ಏರಿ ದುರಸ್ತಿ ಕಾರ್ಯ ನಡೆಯುತ್ತಿರುವಾಗಲೇ ಹಲವು ಕಡೆ ಬಿರುಕು ಕಾಣಿಸಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿರುವ ದ್ವಾರಸಮುದ್ರ ಕೆರೆ 12 ವರ್ಷಗಳ ನಂತರಭರ್ತಿಯಾಗಿದ್ದು, ಹಳೇಬೀಡು, ಮಾದಿಹಳ್ಳಿ, ಜಾವಗಲ್‌ ಹೋಬಳಿಗಳ ರೈತರ ಸಂತೋಷಕ್ಕೆ ಕಾರಣವಾಗಿತ್ತು. ಇದೇ ಸಮಯದಲ್ಲಿ ನೀರಿನ ಶೇಖರಣಾ ಸಾಮರ್ಥ್ಯಹೆಚ್ಚಾಗಿ ಕೆರೆಏರಿ ಕುಸಿದಿದ್ದು ಆತಂಕ ತರಿಸಿದೆ.

ಕೆರೆ ಏರಿ ಒಡೆಯುವ ಭೀತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತಜ್ಞರ ಅಭಿಪ್ರಾಯದಂತೆ ಕೆರೆ ನೀರನ್ನು ಎರಡರಿಂದಮೂರು ಅಡಿ ಹೊರಬಿಡಲು ಸೂಚಿಸಿದ್ದರು. ಅದರಂತೆ, ಏರಿ ಮೇಲೆ ಹಾದು ಹೋಗಿರುವ ಹಾಸನ -ಹಳೇಬೀಡು ರಸ್ತೆ ಬಂದ್‌ ಮಾಡಿ, ಕೆರೆ ಕೋಡಿ ಸ್ವಲ್ಪ ಹೊಡೆದು, ಪಕ್ಕದ ಬೆಳವಾಡಿ ಕೆರೆಗೆ ನೀರು ಹರಿದು ಬಿಡಲಾಗಿತ್ತು. ಇದೀಗ ಏರಿ ತಾತ್ಕಾಲಿಕ ದುರಸ್ತಿ ಕಾರ್ಯ ಮುಗಿರುವ ಹಂತಕ್ಕೆ ಬಂದಿದ್ದು, ಇದೇ ಸಂದರ್ಭದಲ್ಲಿ ಏರಿ ಮಧ್ಯದಲ್ಲಿಯೇ ಬಿರುಕು ಕಾಣಿಸಿಕೊಂಡಿರುವುದು ಅಧಿಕಾರಗಳಿಗೆ ತಲೆನೋವು ತರಿಸಿದೆ.

5 ಮೀಟರ್‌ ಉದ್ದದ ಬಿರುಕು: ಒಂದು ಕಡೆ 20 ಮೀಟರ್‌ವರೆಗೆ ಏರಿ ಕುಸಿಯುತ್ತಿದ್ದರೆ ಮತ್ತೆ ಎರಡು ಕಡೆ ಏರಿ ಮಧ್ಯದಲ್ಲಿಯೇ ಬಿರುಕು ಕಾಣಿಸಿಕೊಂಡಿದೆ. ಇದುವರೆಗೂ ರಸ್ತೆ ಒಂದು ಮಗ್ಗುಲಿನಲ್ಲಿ ಮಾತ್ರ ಕೆರೆ ಏರಿ ಕುಸಿದಿತ್ತು. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ದುರಸ್ತಿ ಕಾರ್ಯ ಮಾಡಿ ಕುಸಿಯುತ್ತಿರುವುದನ್ನು ತಡೆಯುವ ಕಾರ್ಯ ಮಾಡಿದ್ದರು. ಆದರೆ, ಈಗ ಕೆರೆ ಏರಿ ರಸ್ತೆ ಅಡ್ಡವಾಗಿ ಬಿರುಕು ಕಾಣಿಸಿಕೊಂಡಿರುವುದು ಹೋಬಳಿಯ ಜನರ ನಿದ್ದೆಗೆಡಿಸಿದೆ.

ಶಾಶ್ವತ ಕಾಮಗಾರಿ ಅಸಾಧ್ಯ: ಸಣ್ಣ ನೀರಾವರಿಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ 1 ಟಿಎಂಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯ ದ್ವಾರಸಮುದ್ರ ಕೆರೆ ಹೊಂದಿದೆ. ಕೆರೆ ಏರಿ ದುರಸ್ತಿ ಮಾಡುವ ಸಂಬಂಧ ಸ್ಥಳಕ್ಕೆ ನೀರಾವರಿ ಇಲಾಖೆಯ ಕಾರ್ಯಪಾಲಕ ಮುಖ್ಯ ಎಂಜಿನಿಯರ್‌ ಸತೀಶ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ, ಬೆಂಗಳೂರು ಡಿಸೈನ್‌ ಎಂಜಿನಿಯರ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೆರೆಏರಿಯಲ್ಲಿ ಮತ್ತೆ ಎರಡು ಕಡೆ ಬಿರುಕು ಕಾಣಿಸಿಕೊಂಡಿರುವುದನ್ನು ಖುದ್ದು ವೀಕ್ಷಣೆ ಮಾಡಿ,ಮತ್ತೆ ಎರಡು ಅಡಿಗಳಷ್ಟು ನೀರು ಕಡಿಮೆಮಾಡಲು ಸೂಚನೆ ನೀಡಿದೆ. ಅದರಂತೆ ನೀರುಹೊರಬಿಟ್ಟಿದ್ದು, ಶಾಶ್ವತ ಕಾಮಗಾರಿ ಮಾಡಲು ಕೆರೆ ನೀರು ಖಾಲಿ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.

ಕೆರೆ ಏರಿಯಲ್ಲಿ ಮತ್ತೆ ಬಿರುಕುಕಾಣಿಸಿಕೊಳ್ಳತ್ತಿರುವುದು ನೋವಿನ ಸಂಗತಿ.ಕೋಡಿ ಸ್ವಲ್ಪ ಹೊಡೆದಿರುವುದೇಸಹಿಸಲಾಗುತ್ತಿಲ್ಲ. ಹೀಗಿರುವಾಗ ಮತ್ತೆರಡುಕಡೆ ಬಿರುಕುಕಾಣಿಸಿ ಕೊಂಡಿದೆ. ಮುಖ್ಯ ಎಂಜಿನಿಯರ್‌ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆನಡೆಸಿದೆ. ಅವರಿಂದ ಮಾಹಿತಿ ಕೂಡಪಡೆದಿದ್ದೇನೆ.ಕೆರೆ ನೀರು ಉಳಿಸಿಕೊಂಡು ಸಾಧ್ಯವಾದಷ್ಟುಕಾಮಗಾರಿ ಮಾಡಲು ತಿಳಿಸಿದ್ದೇನೆ. ಕೆ.ಎಸ್‌.ಲಿಂಗೇಶ್‌, ಶಾಸಕ

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.